ನವದೆಹಲಿ : ಸಂಸತ್ತಿನ ಮಾನ್ಸೂನ್ ಅಧಿವೇಶನದ ಮಧ್ಯೆ ಕೇಂದ್ರದ ಕೃಷಿ ಕಾನೂನುಗಳ ವಿರುದ್ಧ ರೈತರು ಇಂದು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಧ್ಯ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾರೀ ಬಿಗಿ ಭದ್ರತೆಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಂತರ್ ಮಂತರ್(Jantar Mantar) ಸುತ್ತ ಮುತ್ತ ಸಾಕಷ್ಟು ಭದ್ರತಾ ವ್ಯವಸ್ಥೆ ಮಾಡಲಾಗಿದೆ ಮತ್ತು ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : Earthquake: ರಾಜಸ್ಥಾನದ ಬಿಕಾನೇರ್‌ನಲ್ಲಿ ಸತತ ಎರಡನೇ ದಿನವೂ ಭೂಕಂಪ, ರಿಕ್ಟರ್ ಮಾಪಕದಲ್ಲಿ 4.8 ತೀವ್ರತೆ ದಾಖಲು
ಮಾನ್ಸೂನ್ ಅಧಿವೇಶನ(Monsoon session of Parliament) ನಡೆಯುತ್ತಿರುವ ಸಂಸತ್ ಭವನದಿಂದ ಜಂತರ್ ಮಂತರ್ ಕೆಲವು ಮೀಟರ್ ದೂರದಲ್ಲಿದೆ.
200 ರೈತರ ಗುಂಪು ತಮ್ಮ ಸಿಂಗು ಗಡಿ ಪ್ರದೇಶದಿಂದ ಬಸ್‌ಗಳಲ್ಲಿ ಪೊಲೀಸ್(Police Security) ಬೆಂಗಾವಲಿನೊಂದಿಗೆ ಜಂತರ್ ಮಂತರ್‌ಗೆ ಪ್ರಯಾಣಿಸಿ ಬೆಳಿಗ್ಗೆ 11 ರಿಂದ ಸಂಜೆ 5 ರವರೆಗೆ ಪ್ರತಿಭಟನೆ ನಡೆಸಲಿದ್ದಾರೆ.
Farmers gather to board the buses at Singhu (Delhi-Haryana) border, ahead of protest against three farm laws at Jantar Mantar in Delhi pic.twitter.com/S4JFHt6lv4
— ANI (@ANI) July 22, 2021
ಮೂರು ಕೃಷಿ ಕಾನೂನುಗಳ() ವಿರುದ್ಧ ಪ್ರತಿಭಟನೆಗೆ ಮುಂದಾಗಿರುವ ರೈತ ಸಂಘ ಸಂಸ್ಥೆಯಾದ ಸಂಯುಕ್ತ್ ಕಿಸಾನ್ ಮೋರ್ಚಾ (ಎಸ್‌ಕೆಎಂ), ಎಲ್ಲಾ ಕೋವಿಡ್ -19 ಮಾರ್ಗಸೂಚಿಗಳನ್ನ ಪಾಲಿಸಲಾಗುವುದು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಭರವಸೆಯನ್ನ ರೈತರು ನೀಡಿದ್ದಾರೆ.
ಜನವರಿ 26 ರಂದು ನಡೆದ ಟ್ರಾಕ್ಟರ್ ರ್ಯಾಲಿಯ ಸಂದರ್ಭದಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದ ನಂತರ ಇದೇ ಮೊದಲ ಬಾರಿಗೆ ಪ್ರತಿಭಟನಾ ನಿರತ ರೈತ ಸಂಘಗಳಿಗೆ ನಗರದಲ್ಲಿ ಪ್ರದರ್ಶನ ನಡೆಸಲು ಅಧಿಕಾರಿಗಳು ಅನುಮತಿ ನೀಡಿದ್ದಾರೆ.
ಇದನ್ನೂ ಓದಿ : Delhi Terminal-2 Airport: ವಿಮಾನ ಯಾತ್ರಿಕರಿಗೆ ಗುಡ್ ನ್ಯೂಸ್
ಮೂರು ಕಾನೂನುಗಳ ವಿರುದ್ಧ ದೇಶಾದ್ಯಂತದ ಸಾವಿರಾರು ರೈತರು ದೆಹಲಿ ಗಡಿ ಭಾಗಗಳಾದ ಸಿಂಗು, ಟಿಕ್ರಿ ಮತ್ತು ಗಾಜಿಪುರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರಮುಖ ಕೃಷಿ ಸುಧಾರಣೆಗಳಲ್ಲಿ ಕಾನೂನುಗಳನ್ನು ರೂಪಿಸುತ್ತಿರುವ ಸರ್ಕಾರದೊಂದಿಗೆ ಈಗಾಗಲೇ 10ನೇ ಸುತ್ತಿನ ಮಾತುಕತೆ ನಡೆದಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ