ನವ ದೆಹಲಿ: ದೇಶದ ದುರ್ಬಲ ಆರ್ಥಿಕ ಸ್ಥಿತಿಯ ಬಗ್ಗೆ ಮಾಜಿ ಹಣಕಾಸು ಸಚಿವ ಯಶ್ವಂತ್ ಸಿನ್ಹಾ, ಅರುಣ್ ಜೇಟ್ಲಿ ಮತ್ತು ಕೇಂದ್ರ ಸರ್ಕಾರದ ಮೇಲೆ ದಾಳಿ ಮಾಡಿದ್ದರು. ಈ ಬಗ್ಗೆ ಕೊನೆಗೂ ಮೌನ ಮುರಿದಿರುವ ಹಾಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ದುರ್ಬಲಗೊಂಡಿದ್ದ ಆರ್ಥಿಕ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ತೆಗೆದುಕೊಂಡಿತ್ತು ಎಂದು ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಜೇಟ್ಲಿ, ಯಶ್ವಂತ್ ಸಿನ್ಹಾ ಅವರ ಅವರ 80ನೇ ವಯಸ್ಸಿನಲ್ಲಿ ಕೆಲಸ ಹುಡುಕುತ್ತಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಈ ಹೇಳಿಕೆಯಲ್ಲಿ ಅವರು ಸಿನ್ಹಾ ಅವರ ಹೆಸರನ್ನು ತೆಗೆದುಕೊಳ್ಳಲಿಲ್ಲವಾದರೂ, ಈ ಮಾತುಗಳನ್ನು ಯಾರಿಗೆ ಹೇಳುತ್ತಾರೋ ಆ ಗೆಸ್ಚರ್ ಸಂಪೂರ್ಣವಾಗಿ ಸ್ಪಷ್ಟವಾಗಿತ್ತು.