ಹೌರಾದ ರಾಸಾಯನಿಕ ಗೋದಾಮಿನಲ್ಲಿ ಅಗ್ನಿ ಅವಘಡ

ಅಗ್ನಿ ಅನಾಹುತದಲ್ಲಿ ಯಾವುದೇ ಅಪಘಾತ ವರದಿಯಾಗಿಲ್ಲ. 25 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದರೂ ಬೆಂಕಿ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ.

Last Updated : Jun 8, 2019, 10:29 AM IST
ಹೌರಾದ ರಾಸಾಯನಿಕ ಗೋದಾಮಿನಲ್ಲಿ ಅಗ್ನಿ ಅವಘಡ title=
Pic Courtesy: ANI

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಕೋಲ್ಕತ್ತಾ ಬಳಿಯಿರುವ ಹೌರಾದ ಜಗನ್ನಾಥ್ ಘಾಟ್'ನಲ್ಲಿರುವ ರಾಸಾಯನಿಕ ಗೋದಾಮಿನಲ್ಲಿ ಶನಿವಾರ ಮುಂಜಾನೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಶನಿವಾರ ನಸುಕಿನ 2 ಗಂಟೆಯ ವೇಳೆಗೆ ಬೆಂಕಿ ಕಾಣಸಿಕೊಂಡಿದ್ದು ಪ್ರದೇಶದಲ್ಲಿ ದಟ್ಟ ಹೊಗೆ ಆವರಿಸಿಕೊಂಡಿತ್ತು. ಕೂಡಲೇ 20 ಕ್ಕೂ ಹೆಚ್ಚು ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಘಟನೆ ಬಗ್ಗೆ ಮಾಹಿತಿ ನೀಡಿರುವ ಅಗ್ನಿಶಾಮಕ ಅಧಿಕಾರಿಯೊಬ್ಬರು, "ಅಗ್ನಿ ಅನಾಹುತದಲ್ಲಿ ಯಾವುದೇ ಅಪಘಾತ ವರದಿಯಾಗಿಲ್ಲ. 25 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದರೂ ಬೆಂಕಿ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಬೆಂಕಿಯ ತೀವ್ರತೆ ಹೆಚ್ಚಾಗಿರುವುದರಿಂದ ಕಟ್ಟಡದ ಒಳಗೆ ಪ್ರವೇಶವೂ ಅಸಾಧ್ಯವಾಗಿದೆ. ಅಲ್ಲದೆ, ಕಟ್ಟಡದ ಮಧ್ಯಭಾಗದ ಮೇಲ್ಛಾವಣಿಯೂ ಕುಸಿದಿದ್ದು, ಬೆಂಕಿ ನಂದಿಸುವ ಕಾರ್ಯಕ್ಕೆ ತೊಡಕಾಗಿದೆ" ಎಂದು ಹೇಳಿದ್ದಾರೆ.

Trending News