ಮಧುರೈ ಮೀನಾಕ್ಷಿ ದೇವಾಲಯದಲ್ಲಿ ಬೆಂಕಿ ಅವಘಡ

ಇತಿಹಾಸ ಪ್ರಸಿದ್ಧ ಮಧುರೈ ಮಿನಾಕ್ಷಿ ದೇವಾಲಯದ ಆವರಣದಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ. 

Last Updated : Feb 3, 2018, 10:36 AM IST
ಮಧುರೈ ಮೀನಾಕ್ಷಿ ದೇವಾಲಯದಲ್ಲಿ ಬೆಂಕಿ ಅವಘಡ title=

ಮಧುರೈ: ಇತಿಹಾಸ ಪ್ರಸಿದ್ಧ ಮಧುರೈ ಮಿನಾಕ್ಷಿ ದೇವಾಲಯದ ಆವರಣದಲ್ಲಿ ಶುಕ್ರವಾರ ರಾತ್ರಿ ಬೆಂಕಿ ಅವಘಡ ಸಂಭವಿಸಿದೆ. 

ಈಗಾಗಲೇ 5ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ಸಿಬಂದಿಗಳು ವಾಹನಗಳೊಂದಿಗೆ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಅದೃಷ್ಟವಷಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ. 

ಗೊಂಬೆಗಳ ಅಂಗಡಿಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

Trending News