ಮುಂಬೈ ಕಟ್ಟಡದಲ್ಲಿ ಬೆಂಕಿ ಅವಘಡ

ನವೆಂಬರ್ 17ರಂದು ಮುಂಬೈನ ಮದನಪುರ ಪ್ರದೇಶದಲ್ಲಿ ಇದೇ ರೀತಿ ಬೆಂಕಿ ಅವಘಡ ಸಂಭವಿಸಿತ್ತು. 

Last Updated : Nov 21, 2018, 06:55 PM IST
ಮುಂಬೈ ಕಟ್ಟಡದಲ್ಲಿ ಬೆಂಕಿ ಅವಘಡ title=
Pic: ANI

ಮುಂಬೈ: ನಗರದ ಸ್ವೇರಿ ಪ್ರದೇಶದ ಕಟ್ಟಡದ ಕೊಠಡಿಯೊಂದರಲ್ಲಿ ಬುಧವಾರ ಸಂಜೆ ಬೆಂಕಿ ಅವಘಡ ಸಂಭವಿಸಿದೆ. 

ಘಟನಾ ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ಧಾವಿಸಿದ್ದು ಬೆಂಕಿ ನಂದಿಸುವ ಕಾರ್ಯದಲ್ಲಿ ಸಿಬ್ಬಂದಿ ನಿರತರಾಗಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ಈ ಬಗ್ಗೆ ವರದಿ ಮಾಡಿದೆ.

ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ನವೆಂಬರ್ 17ರಂದು ಮುಂಬೈನ ಮದನಪುರ ಪ್ರದೇಶದಲ್ಲಿ ಇದೇ ರೀತಿ ಬೆಂಕಿ ಅವಘಡ ಸಂಭವಿಸಿತ್ತು. 

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Trending News