ದೆಹಲಿಯ ಲಲಿತಾ ಪಾರ್ಕ್‌ ಬಳಿ ಅಗ್ನಿ ದುರಂತ!

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.  

Last Updated : Apr 27, 2019, 01:27 PM IST
ದೆಹಲಿಯ ಲಲಿತಾ ಪಾರ್ಕ್‌ ಬಳಿ ಅಗ್ನಿ ದುರಂತ! title=
Pic Courtesy: ANI

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಲಲಿತಾ ಪಾರ್ಕ್ ಸಮೀಪದ ಕೊಳೆಗೇರಿಯಲ್ಲಿ ಶನಿವಾರ ಬೆಳಿಗ್ಗೆ ಅಗ್ನಿ ದುರಂತ ಸಂಭವಿಸಿದೆ ಎಂದು  ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಲಕ್ಷ್ಮೀನಗರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, 15 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ಅಗ್ನಿಶಾಮಕ ದಳದವರು ನಿರತರಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

Trending News