First in History: ಒಂದೇ ಬಾರಿಗೆ 9 ಸುಪ್ರೀಂಕೋರ್ಟ್ ನ್ಯಾಯಾಧೀಶರಿಂದ ಪ್ರಮಾಣವಚನ ಸ್ವೀಕಾರ

ಇದೇ ಮೊದಲ ಬಾರಿಗೆ ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Written by - Puttaraj K Alur | Last Updated : Aug 31, 2021, 01:08 PM IST
  • ಸುಪ್ರೀಂಕೋರ್ಟ್ ಇತಿಹಾಸದಲ್ಲಿ 9 ನ್ಯಾಯಾಧೀಶರು ಒಂದೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವುದು ಇದೇ ಮೊದಲು
  • 9 ನ್ಯಾಯಮೂರ್ತಿಗಳ ಪದೋನ್ನತಿಯಿಂದ ಭಾರತದ ನ್ಯಾಯಾಂಗ ವ್ಯವಸ್ಥೆ ಹೊಸ ಇತಿಹಾಸ ಸೃಷ್ಟಿಗೆ ಸಾಕ್ಷಿಯಾಗಿದೆ
  • 2027ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ​ನ್ಯಾ.ನಾಗರತ್ನ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ
First in History: ಒಂದೇ ಬಾರಿಗೆ 9 ಸುಪ್ರೀಂಕೋರ್ಟ್ ನ್ಯಾಯಾಧೀಶರಿಂದ ಪ್ರಮಾಣವಚನ ಸ್ವೀಕಾರ title=
9 ಸುಪ್ರೀಂಕೋರ್ಟ್ ನ್ಯಾಯಾಧೀಶರಿಂದ ಪ್ರಮಾಣವಚನ ಸ್ವೀಕಾರ (Photo Courtesy: ANI)

ನವದೆಹಲಿ: ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಮೂವರು ಮಹಿಳೆಯರು ಸೇರಿದಂತೆ 9 ಮಂದಿ ಸುಪ್ರೀಂಕೋರ್ಟ್ ನ್ಯಾಯಾಧೀಶ(Supreme Court Judges)ರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ನ್ಯಾಯಾಧೀಶರಿಗೆ ಮುಖ್ಯ ನಾಯಮೂರ್ತಿ ಎನ್.ವಿ.ರಮಣ(NV Ramana) ಮಂಗಳವಾರ ಬೆಳಗ್ಗೆ ಪ್ರಮಾಣವಚನ ಬೋಧಿಸಿದರು. 9 ನ್ಯಾಯಮೂರ್ತಿಗಳ ಪದೋನ್ನತಿಯಿಂದ ಭಾರತದ ನ್ಯಾಯಾಂಗ ವ್ಯವಸ್ಥೆಯು ಹೊಸ ಇತಿಹಾಸ ಸೃಷ್ಟಿಗೆ ಸಾಕ್ಷಿಯಾಗಿದೆ.

ಭಾರತದ ಅತ್ಯುನ್ನತ ನ್ಯಾಯಾಲಯ(Supreme Court)ದ ಇತಿಹಾಸದಲ್ಲಿ 9 ನ್ಯಾಯಾಧೀಶರು ಒಂದೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವುದು ಇದೇ ಮೊದಲು. ಸಾಮಾಜಿಕ ಅಂತರ ಮತ್ತು ಕೋವಿಡ್-19 ಪ್ರೋಟೋಕಾಲ್‌ ಪಾಲನೆ ಹಿನ್ನೆಲೆ ಕೋರ್ಟ್ ಕಾಂಪ್ಲೆಕ್ಸ್‌ ನ ಆಡಿಟೋರಿಯಂ ಕಟ್ಟಡದಲ್ಲಿ ಸರಳ ಸಮಾರಂಭ ನಡೆಯಿತು. ಸಾಂಪ್ರದಾಯಿಕವಾಗಿ ಈ ರೀತಿಯ ಪ್ರಮಾಣವಚನ ಕಾರ್ಯಕ್ರಮವನ್ನು ಮುಖ್ಯ ನ್ಯಾಯಾಧೀಶರ ನ್ಯಾಯಾಲಯದ ಕೊಠಡಿಯಲ್ಲಿ ಆಯೋಜಿಸಲಾಗುತ್ತದೆ.

ನ್ಯಾ.ಅಭಯ್ ಓಕಾ(Justices AS Oka) (ಕರ್ನಾಟಕ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ), ನ್ಯಾ.ವಿಕ್ರಮ್ ನಾಥ್ (ಗುಜರಾತ್ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ), ನ್ಯಾ.ಜಿತೇಂದ್ರ ಕುಮಾರ್ ಮಹೇಶ್ವರಿ (ಸಿಕ್ಕಿಂ ಮತ್ತು ಆಂಧ್ರಪ್ರದೇಶ ಹೈಕೋರ್ಟ್‌ಗಳ ಮಾಜಿ ಮುಖ್ಯ ನ್ಯಾಯಮೂರ್ತಿ), ನ್ಯಾ.ಹಿಮಾ ಕೊಹ್ಲಿ (ತೆಲಂಗಾಣ ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿ) ಮತ್ತು ನ್ಯಾ.ಬಿ.ವಿ.ನಾಗರತ್ನ (ಕರ್ನಾಟಕ ಹೈಕೋರ್ಟ್ ನ ಮಾಜಿ ನ್ಯಾಯಾಧೀಶರು) ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: "ಹೊಸ ಸವಾಲುಗಳಿಗಾಗಿ ರಾಷ್ಟ್ರೀಯ ಭದ್ರತಾ ವ್ಯವಸ್ಥೆಯನ್ನು ನಿರಂತರವಾಗಿ ನವೀಕರಿಸಬೇಕು"

ಮಾಜಿ ಮುಖ್ಯ ನ್ಯಾಯಮೂರ್ತಿ ಇ.ಎಸ್.ವೆಂಕಟರಾಮಯ್ಯನವರ ಪುತ್ರಿ, ನ್ಯಾ.ನಾಗರತ್ನ(BV Nagarathna) ಅವರು 2027ರಲ್ಲಿ ಭಾರತದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇದೆ. ಆದರೆ ಅವರು ಕೇವಲ 1 ತಿಂಗಳ ಅಧಿಕಾರಾವಧಿ ಮಾತ್ರ ಹೊಂದಿರಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನುಳಿದ ನೂತನ ನ್ಯಾಯಾಧೀಶರು ನ್ಯಾ.ಸಿ.ಟಿ.ರವಿಕುಮಾರ್ (ಕೇರಳ ಹೈಕೋರ್ಟ್ ನ ಮಾಜಿ ನ್ಯಾಯಾಧೀಶರು), ನ್ಯಾ.ಎಂ.ಎಂ.ಸುಂದ್ರೇಶ್ (ಮಾಜಿ ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶರು), ನ್ಯಾ.ಬೇಲಾ ಎಂ ತ್ರಿವೇದಿ (ಮಾಜಿ ಗುಜರಾತ್ ಹೈಕೋರ್ಟ್ ನ್ಯಾಯಾಧೀಶರು) ಮತ್ತು ನ್ಯಾ.ಪಿ.ಎಸ್.ನರಸಿಂಹ (ಹಿರಿಯ ವಕೀಲರು ಮತ್ತು ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್) ಆಗಿದ್ದಾರೆ.

ಇದನ್ನೂ ಓದಿ: ಏನಿದು ಹೊಸ 'ಬಿಎಚ್' ಭಾರತ್ ಸರಣಿ?: ಪ್ರಯೋಜನೆಗಳು, ಅರ್ಜಿ ಸಲ್ಲಿಸುವ ಮಾಹಿತಿ ಇಲ್ಲಿದೆ…    

ಪ್ರಸ್ತುತ ನ್ಯಾ.ಇಂದಿರಾ ಬ್ಯಾನರ್ಜಿ ಒಬ್ಬರೇ ಮಹಿಳಾ ನ್ಯಾಯಾಧೀಶರಾಗಿದ್ದರು. ಆವರನ್ನು ಆಗಸ್ಟ್ 7, 2018 ರಂದು ಮದ್ರಾಸ್ ಹೈಕೋರ್ಟ್ ನಿಂದ ಉನ್ನತ ನ್ಯಾಯಮೂರ್ತಿಯಾಗಿ ನೇಮಿಸಲಾಗಿತ್ತು. ಸುಪ್ರೀಂಕೋರ್ಟ್ ಒಟ್ಟು 34 ನ್ಯಾಯಮೂರ್ತಿಗಳನ್ನು ಹೊಂದುವ ಅವಕಾಶವಿದೆ. 9 ನ್ಯಾಯಾಧೀಶರ ಸೇರ್ಪಡೆಯೊಂದಿಗೆ ಮುಖ್ಯ ನ್ಯಾಯಮೂರ್ತಿ ಸೇರಿ ಸುಪ್ರೀಂಕೋರ್ಟ್(Supreme Court)ಬಲವು ಒಟ್ಟು 33 ಆಗಿದ್ದು, 1 ಸ್ಥಾನ ಮಾತ್ರ ಖಾಲಿ ಉಳಿದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News