Boota Singh Passed Away: ಮಾಜಿ ಗೃಹ ಸಚಿವ ಬೂಟಾ ಸಿಂಗ್ ವಿಧಿವಶ

Boota Singh Passed Away: ದೇಶದ ಮಾಜಿ ಗೃಹ ಸಚಿವ ಬುಟಾ ಸಿಂಗ್ ದೆಹಲಿಯಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಬುಟಾ ಸಿಂಗ್ ಸಾವಿನ ಬಗ್ಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.  ಕಾಂಗ್ರೆಸ್ ಮುಖಂಡ ಬುಟಾ ಸಿಂಗ್ 8 ಬಾರಿ ಲೋಕಸಭಾ ಸದಸ್ಯರಾಗಿದ್ದರು.

Written by - Nitin Tabib | Last Updated : Jan 2, 2021, 11:57 AM IST
  • ಮಾಜಿ ಕೇಂದ್ರ ಗೃಹ ಸಚಿವ ಬೂಟಾ ಸಿಂಗ್ ನಿಧನ
  • ಅವರಿಗೆ 86 ವರ್ಷ ವಯಸ್ಸಾಗಿತ್ತು.
  • ಒಟ್ಟು 8 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಬೂಟಾಸಿಂಗ್ ಓರ್ವ ಉತ್ತಮ ಆಡಳಿತಗಾರರಾಗಿದ್ದರು.
Boota Singh Passed Away: ಮಾಜಿ ಗೃಹ ಸಚಿವ ಬೂಟಾ ಸಿಂಗ್ ವಿಧಿವಶ title=
Boota Singh Passed Away (File Photo)

Boota Singh Passed Away: ನವದೆಹಲಿ: ದೇಶದ ಮಾಜಿ ಗೃಹ ಸಚಿವ ಬುಟಾ ಸಿಂಗ್ ದೆಹಲಿಯಲ್ಲಿ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಬುಟಾ ಸಿಂಗ್ ಸಾವಿನ ಬಗ್ಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.  ಕಾಂಗ್ರೆಸ್ ಮುಖಂಡ ಬುಟಾ ಸಿಂಗ್ 8 ಬಾರಿ ಲೋಕಸಭಾ ಸದಸ್ಯರಾಗಿದ್ದರು.

ಇದನ್ನು ಓದಿ-ಗುಜರಾತಿನ ಮಾಜಿ ಸಿಎಂ ಕೇಶುಭಾಯ್ ಪಟೇಲ್ ಇನ್ನಿಲ್ಲ

ಪಂಜಾಬ್‌ನ ಪ್ರಮುಖ ದಲಿತ ಮುಖಂಡರಾಗಿ ಅವರು ಗುರುತಿಸಿಕೊಂಡಿದ್ದರು. ಅವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಮಗಳನ್ನು ಅಗಲಿದ್ದಾರೆ.

1986 ರಿಂದ 1989 ರವರೆಗೆ ರಾಜೀವ್ ಗಾಂಧಿ ಸರ್ಕಾರದಲ್ಲಿ ಕೇಂದ್ರ ಗೃಹ ಸಚಿವರಾಗಿದ್ದರು. ಇದಕ್ಕೂ ಮೊದಲು ಅವರು 1984 ರಿಂದ 1986 ರವರೆಗೆ ರಾಜೀವ್ ಗಾಂಧಿ ಸರ್ಕಾರದಲ್ಲಿ ಕೃಷಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಇದಲ್ಲದೆ, ಬುಟಾ ಸಿಂಗ್ 2004 ರಿಂದ 2006 ರವರೆಗೆ ಬಿಹಾರ ರಾಜ್ಯಪಾಲರಾಗಿದ್ದರು. 2007 ರಿಂದ 2010 ರವರೆಗೆ ಮನಮೋಹನ್ ಸಿಂಗ್ ಸರ್ಕಾರದ ಅವಧಿಯಲ್ಲಿ ಅವರು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು.

ಬೂಟಾ ಸಿಂಗ್ ನಿಧನಕ್ಕೆ ದುಃಖ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi), "ಬೂಟಾ ಸಿಂಗ್  ಓರ್ವ ಅನುಭವಿ ಆಡಳಿತಗಾರರಾಗಿದ್ದರು ಹಾಗೂ ಬಡವ ಹಾಗೂ ಹಿಂದುಳಿದವರ ಪ್ರಭಾವಶಾಲಿ ಧ್ವನಿಯಾಗಿದ್ದರು. ಅವರ ನಿಧನ ನಿಜಕ್ಕೂ ದುಃಖ ತಂದಿದೆ. ಅವರ ಕುಟುಂಬ ಸದಸ್ಯರು ಹಾಗೂ ಬೆಂಬಲಿಗರಿಗೆ ನನ್ನ ಸಹಾನುಭೂತಿ" ಎಂದು ಹೇಳಿದ್ದಾರೆ.

 

ಬೂಟಾ ಸಿಂಗ್ ಅವರ ನಿಧನದ ಕುರಿತು ತನ್ನ twitter ಖಾತೆಯಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ," ಸರ್ದಾರ್ ಬೂಟಾ ಸಿಂಗ್ ಜಿ ಅವರ ನಿಧನದಿಂದ ಇಡೀ ದೇಶ ಓರ್ವ ಜನಸೇವಕ ಹಾಗೂ ನಿಷ್ಠೆಯುಳ್ಳ ಮುಖಂಡನನ್ನು ಕಳೆದುಕೊಂಡಿದೆ. ಅವರು ತಮ್ಮ ಸಂಪೂರ್ಣ ಜೀವನವನ್ನು ದೇಶದ ಸೇವೆ ಹಾಗೂ ಜನಸೇವೆಗೆ ಮುಡುಪಾಗಿಟ್ಟಿದ್ದರು ಮತ್ತು ಇದೇ ಕಾರಣದಿಂದ ಅವರ ಹೆಸರು ಚಿರಕಾಲ  ಉಳಿಯಲಿದೆ. ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಅವರ ಕುಟುಂಬ ಸದಸ್ಯರ ಪ್ರತಿ ನನ್ನ ಸಾಂತ್ವನಗಳು" ಎಂದು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News