ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೂ ಕರೋನಾ ಪಾಸಿಟಿವ್ ದೃಢ

ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಕರೋನಾ ಸೋಂಕಿಗೆ ಒಳಗಾಗಿರುವುದಾಗಿ ತಾವೇ ಸ್ವತಃ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

Last Updated : Aug 10, 2020, 02:50 PM IST
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೂ ಕರೋನಾ ಪಾಸಿಟಿವ್ ದೃಢ title=

ನವದೆಹಲಿ: ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (Pranab Mukherjee) ಅವರಿಗೂ ಕರೋನಾವೈರಸ್ ಸೋಂಕು ದೃಢಪಟ್ಟಿದೆ. ತಾವೇ ಸ್ವತಃ ಟ್ವೀಟ್ ಮಾಡಿ  ಅವರೇ ಈ ಮಾಹಿತಿಯನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ನಾನು ಬೇರೆ ಕಾರಣಕ್ಕಾಗಿ ಆಸ್ಪತ್ರೆಗೆ ಬಂದಿದ್ದೆ. ಆದರೆ ಟೆಸ್ಟ್ ಮಾಡಿದ ಬಳಿಕ ನನಗೆ ಕರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಕಳೆದ ಒಂದು ವಾರದಲ್ಲಿ ನನ್ನ ಸಂಪರ್ಕದಲ್ಲಿರುವ ಜನರು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಮತ್ತು ಕ್ವಾರಂಟೈನ್ ನಲ್ಲಿರುವುವಂತೆ ನಾನು ವಿನಂತಿಸುತ್ತೇನೆ ಎಂದವರು ಬರೆದಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪಗೆ COVID-19 ನೆಗೆಟಿವ್, ನಾಳೆ ಡಿಸ್ಚಾರ್ಜ್

ದೇಶದಲ್ಲಿ ಕರೋನಾ ಸೋಂಕಿಗೆ ಒಳಗಾದವರ ಸಂಖ್ಯೆ 22 ಲಕ್ಷ ದಾಟಿದೆ. ಅನೇಕ ಉನ್ನತ ನಾಯಕರು ಕರೋನಾದ ಹಿಡಿತಕ್ಕೆ ಸಿಲುಕಿದ್ದಾರೆ. ಇದರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಸಚಿವ ಅರ್ಜುನ್ ಮೇಘವಾಲ್ ಕೂಡ ಪ್ರಮುಖರು. ಅಷ್ಟೇ ಅಲ್ಲ ಮಧ್ಯಪ್ರದೇಶ ಸಿಎಂ ಶಿವರಾಜ್ ಚೌಹಾಣ್, ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ, ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕರೋನಾದಿಂದಾಗಿ ಆಸ್ಪತ್ರೆಯಲ್ಲಿದ್ದಾರೆ.
 

Trending News