ಕೇರಳ ಪ್ರವಾಹಕ್ಕೆ ಒಂದು ತಿಂಗಳ ವೇತನ ನೀಡಲು ಮುಂದಾದ ಮನಮೋಹನ್ ಸಿಂಗ್

ಸಂಸದರ ನಿಧಿಯಿಂದ ಒಂದು ಕೋಟಿ ರೂ. ಪರಿಹಾರ ನೀಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

Last Updated : Aug 28, 2018, 03:26 PM IST
ಕೇರಳ ಪ್ರವಾಹಕ್ಕೆ ಒಂದು ತಿಂಗಳ ವೇತನ ನೀಡಲು ಮುಂದಾದ ಮನಮೋಹನ್ ಸಿಂಗ್  title=

ನವದೆಹಲಿ: ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ತಮ್ಮ ಒಂದು ತಿಂಗಳ ಸಂಬಳವನ್ನು ಕೇರಳ ಮುಖ್ಯಮಂತ್ರಿಗಳ ವಿಕೋಪ ಪರಿಹಾರ ನಿಧಿಗೆ ನೀಡಲು ಮುಂದಾಗಿದ್ದಾರೆ.

ಇದಲ್ಲದೆ ಸಂಸದರ ನಿಧಿಯಿಂದ ಒಂದು ಕೋಟಿ ರೂ. ಪರಿಹಾರ ನೀಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇದಕ್ಕೂ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಪಕ್ಷದ ಎಲ್ಲಾ ನಾಯಕರು ಹಾಗೂ ಸದಸ್ಯರು ಕೇರಳದ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡುವಂತೆ ತಿಳಿಸಿದ್ದರು.
 

Trending News