ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಇನ್ನಿಲ್ಲ 

ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ಅವರು ಮಂಗಳವಾರ ನಿಧನರಾದರು ಎಂದು ಆಸ್ಪತ್ರೆಯ ಅಧಿಕಾರಿಗಳು ಮತ್ತು ಪಕ್ಷದ ಮೂಲಗಳು ತಿಳಿಸಿವೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

Written by - Zee Kannada News Desk | Last Updated : Apr 25, 2023, 10:05 PM IST
  • ಪಂಜಾಬ್‌ನ ಪ್ರಗತಿಗಾಗಿ ಅವಿರತವಾಗಿ ಶ್ರಮಿಸಿದ್ದರು.
  • ಬಾದಲ್ ಅವರ ನಿಧನ ನನಗೆ ವೈಯಕ್ತಿಕ ನಷ್ಟವಾಗಿದೆ.
  • ಹಲವು ದಶಕಗಳಿಂದ ನಾನು ಅವರೊಂದಿಗೆ ನಿಕಟವಾಗಿ ಸಂವಹನ ನಡೆಸಿದ್ದೇನೆ ಮತ್ತು ಅವರಿಂದ ತುಂಬಾ ಕಲಿತಿದ್ದೇನೆ.
 ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಇನ್ನಿಲ್ಲ  title=
file photo

ನವದೆಹಲಿ: ಮೊಹಾಲಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಪ್ರಕಾಶ್ ಸಿಂಗ್ ಬಾದಲ್ ಅವರು ಮಂಗಳವಾರ ನಿಧನರಾದರು ಎಂದು ಆಸ್ಪತ್ರೆಯ ಅಧಿಕಾರಿಗಳು ಮತ್ತು ಪಕ್ಷದ ಮೂಲಗಳು ತಿಳಿಸಿವೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಇದನ್ನೂ ಓದಿ: ಮಹಿಳೆಯರ ಜೊತೆ ಪ್ರಿಯಾಂಕ ಗಾಂಧಿ ಸಂವಾದ- ಇಂದಿರಾ ಹೊಗಳಿದಾಕೆಗೆ ಪ್ರೀತಿಯ ಅಪ್ಪುಗೆ 

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಬಾದಲ್ ಅವರನ್ನು ಒಂದು ವಾರದ ಹಿಂದೆ ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ 8 ಗಂಟೆ ಸುಮಾರಿಗೆ ಅವರು ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ಅಧಿಕಾರಿಗಳು ಪಿಟಿಐಗೆ ತಿಳಿಸಿದ್ದಾರೆ.

ಬಾದಲ್ ಅವರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿದ್ದರು,ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಪರಿಶೀಲಿಸುತ್ತಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದಾರೆ ಎಂದು  ಮೂಲಗಳು ಪಿಟಿಐಗೆ ಖಚಿತಪಡಿಸಿವೆ.

ಇದನ್ನೂ ಓದಿ: ಭೂಮಿಗೆ ಮೊದಲು ಬಂದಿದ್ದು ಕೋಳಿನಾ? ಮೊಟ್ಟೆನಾ? Chat GPT ಕೊಟ್ಟೇ ಬಿಡ್ತು ಉತ್ತರ!

ಪ್ರಕಾಶ್ ಸಿಂಗ್ ಬಾದಲ್  ಅವರ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ "ಶ್ರೀ ಪ್ರಕಾಶ್ ಸಿಂಗ್ ಬಾದಲ್ ಜಿಯವರ ನಿಧನದಿಂದ ಅತೀವ ದುಃಖವಾಗಿದೆ. ಅವರು ಭಾರತೀಯ ರಾಜಕೀಯದ ಅಪ್ರತಿಮ ವ್ಯಕ್ತಿಯಾಗಿದ್ದರು ಮತ್ತು ನಮ್ಮ ರಾಷ್ಟ್ರಕ್ಕೆ ಮಹತ್ತರವಾದ ಕೊಡುಗೆ ನೀಡಿದ ಗಮನಾರ್ಹ ರಾಜನೀತಿಜ್ಞರಾಗಿದ್ದರು. ಅವರು ಪಂಜಾಬ್‌ನ ಪ್ರಗತಿಗಾಗಿ ಅವಿರತವಾಗಿ ಶ್ರಮಿಸಿದ್ದರು.ಅವರ ನಿಧನದಿಂದ ನನಗೆ ವೈಯಕ್ತಿಕ ನಷ್ಟವಾಗಿದೆ. ಹಲವು ದಶಕಗಳಿಂದ ನಾನು ಅವರೊಂದಿಗೆ ನಿಕಟವಾಗಿ ಸಂವಹನ ನಡೆಸಿದ್ದೇನೆ ಮತ್ತು ಅವರಿಂದ ತುಂಬಾ ಕಲಿತಿದ್ದೇನೆ.ನಮ್ಮ ಹಲವಾರು ಸಂಭಾಷಣೆಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ, ಅದರಲ್ಲಿ ಪ್ರಮುಖವಾಗಿ ಅವರ ಬುದ್ಧಿವಂತಿಕೆಯು ಯಾವಾಗಲೂ ಸ್ಪಷ್ಟವಾಗಿ ಕಂಡುಬರುತ್ತದೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ  ಸಂತಾಪಗಳು" ಎಂದು ಅವರು ಕಂಬನಿ ಮೀಡಿದಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News