ನವದೆಹಲಿ: ಛತ್ತೀಸ್‌ಗಢ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಬರಪೂರ ಆಶ್ವಾಸನೆಗಳನ್ನು ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ ಬಂದರೆ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಉಚಿತ ಶಿಕ್ಷಣ ನೀಡಲಾಗುವುದು ಎಂದು ಘೋಷಿಸಿದ್ದ ರಾಹುಲ್, ಇದೀಗ ರಾಜ್ಯದ ಜನರಿಗೆ ₹10 ಲಕ್ಷದವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡಲಾಗುವುದು ಎಂದು ಮಹತ್ವದ ಭರವಸೆ ನೀಡಿದ್ದಾರೆ.
ರಾಜ್‌ನಂದಗಾಂವ್ ಜಿಲ್ಲೆಯಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿರುವ ರಾಹುಲ್, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ‘ಭೂರಹಿತ ಗ್ರಾಮೀಣ ಕಾರ್ಮಿಕರಿಗೆ ವರ್ಷಕ್ಕೆ 10 ಸಾವಿರ ರೂ. ಸಹಾಯಧನ ನೀಡುವುದಾಗಿ’ ಅವರು ಇದೇ ವೇಳೆ ತಿಳಿಸಿದ್ದಾರೆ.
ಇದನ್ನೂ ಓದಿ: “ಹುಟ್ಟಿನಿಂದ ಯಾರೂ ಮೇಧಾವಿಗಳಲ್ಲ. ಅವಕಾಶ ಸಿಕ್ಕರೆ ಎಲ್ಲರೂ ಮೇಧಾವಿಗಳಾಗ್ತಾರೆ”: ಸಿಎಂ ಸಿದ್ದರಾಮಯ್ಯ
#WATCH | Kabirdham, Chhattisgarh: Congress leader Rahul Gandhi says, "...There are only two types of government - one that only works for the rich people of the country and the other that works for the farmers, labourers and youth of the country...You have to decide which… pic.twitter.com/tg7pW76Uur
— ANI (@ANI) October 29, 2023
‘ನಮ್ಮ ದೇಶದಲ್ಲಿ 2 ರೀತಿಯ ಸರ್ಕಾರಗಳಿವೆ. ಒಂದು ದೇಶದ ಶ್ರೀಮಂತರಿಗಾಗಿ ಮಾತ್ರ ಕೆಲಸ ಮಾಡುವ ಬಿಜೆಪಿ, ಇನ್ನೊಂದು ದೇಶದ ರೈತರು, ಕಾರ್ಮಿಕರು ಮತ್ತು ಯುವಕರಿಗಾಗಿ ಕೆಲಸ ಮಾಡುವ ಕಾಂಗ್ರೆಸ್. ತಮಗೆ ಯಾವ ಸರ್ಕಾರ ಬೇಕು ಅನ್ನೋದನ್ನು ಮತದಾರರೇ ನಿರ್ಧರಿಸಬೇಕು’ ಎಂದು ಹೇಳಿದ್ದಾರೆ.
2 ಹಂತದಲ್ಲಿ ಚುನಾವಣೆ
90 ಸದಸ್ಯ ಬಲ ಹೊಂದಿರುವ ಛತ್ತೀಸ್‌ಗಢ ವಿಧಾನಸಭೆಗೆ ನವೆಂಬರ್ 7 ಹಾಗೂ 17ರಂದು 2 ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 20 ಕ್ಷೇತ್ರಗಳಿಗೆ ಮತ್ತು 2ನೇ ಹಂತದಲ್ಲಿ 70 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಡಿಸೆಂಬರ್ 3ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. 2003ರಿಂದ 2018ರವರೆಗೆ ಸತತ 3 ಬಾರಿ ಆಡಳಿತ ನಡೆಸಿದ್ದ ಬಿಜೆಪಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿತ್ತು.
ಇದನ್ನೂ ಓದಿ: BJP vs Congress: ಕಾಂಗ್ರೆಸ್‍ನಲ್ಲಿ ಸರ್ವಾಧಿಕಾರಿ ಡಿ.ಕೆ.ಶಿವಕುಮಾರ್ ದರ್ಬಾರ್..!
ಕೇವಲ 15 ಸ್ಥಾನಗಳಿಗಷ್ಟೇ ತೃಪ್ತಿಪಟ್ಟುಕೊಂಡಿದ್ದ ಕಮಲ ಪಕ್ಷವು ಕಾಂಗ್ರೆಸ್ ಎದುರು ದೊಡ್ಡ ಮುಖಭಂಗ ಅನುಭವಿಸಿತ್ತು. 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 68 ಕ್ಷೇತ್ರಗಳಲ್ಲಿ ಜಯ ಗಳಿಸಿ ಬಹುಮತದ ಸರ್ಕಾರ ರಚಿಸಿತ್ತು. ಈ ಬಾರಿಯ ಚುನಾವಣೆಯಲ್ಲಿ ಮತದಾರ ಯಾರ ಕೊರಳಿಗೆ ವಿಜಯಮಾಲೆ ಹಾಕುತ್ತಾನೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.