ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

Last Updated : Mar 18, 2019, 02:58 PM IST
ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ title=

ಮುಜಫರ್ ನಗರ: ಉತ್ತರ ಪ್ರದೇಶದ ಮುಜಫರ್ ನಗರದಲ್ಲಿ ಐವರು ಯುವಕರು 17 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆದೆ. ಸೋಮವಾರ ಈ ಬಗ್ಗೆ ತಿಳಿಸಿದ ಪೊಲೀಸರು ಆರೋಪಿಗಳು ಈ ಘಟನೆಯ ವಿಡಿಯೋ ಕೂಡಾ ಮಾಡಿದ್ದಾರೆ ಎಂದು ಮಾಹಿತಿ ನೀಡಿದರು.

ರತನ್ಪುರಿ ಪೊಲೀಸ್ ಠಾಣೆಯ ಅಡಿಯಲ್ಲಿ ಬರುವ ಫುಲ್ಟೇಟ್ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದೆ ಎನ್ನಲಾಗಿದೆ. ಸಂತ್ರಸ್ತೆಯ ಸಹೋದರ ನೀಡಿರುವ ದೂರಿನ ಪ್ರಕಾರ, ಯುವತಿ ದನ ಕರುಗಳಿಗೆ ಮೇವು ತರಲು ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಆರೋಪಿಗಳು ಆಕೆಯನ್ನು ಎಳೆದುಕೊಂಡು ಹೋಗಿದ್ದಾರೆ. ಸಂತ್ರಸ್ತೆ ಈ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ ಆಕೆಯ ವಿಡಿಯೋವನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವುದಾಗಿ ಅಯೋಪಿಗಳು ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾರೆ.

ಈ ಘಟನೆ ಕುರಿತಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳ ಬಂಧನಕ್ಕಾಗಿ ಹುಡುಕುತ್ತಿರುವುದಾಗಿ ಪೊಲೀಸ್ ಠಾಣಾಧಿಕಾರಿ ಕಮಲ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.
 

Trending News