ಇಂದು ಗೋವಾ ಬಿಜೆಪಿ ಶಾಸಕಾಂಗ ಪಕ್ಷದ ಸಭೆ.. ಸಿಎಂ ಹೆಸರು ಘೋಷಣೆ!?

ಗೋವಾ ಉಸ್ತುವಾರಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ (Pramod Savant), ಸಿಎಂ ಹುದ್ದೆಯ ಮುಂಚೂಣಿಯಲ್ಲಿರುವ ಅಭ್ಯರ್ಥಿಯೂ ಆಗಿದ್ದು, ಪಕ್ಷವು ತನಗೆ ಯಾವುದೇ ಜವಾಬ್ದಾರಿಯನ್ನು ನೀಡಲು ನಿರ್ಧರಿಸಿದರೂ ಅದನ್ನು ಸ್ವೀಕರಿಸುವುದಾಗಿ ಹೇಳಿದ್ದಾರೆ.

Written by - Chetana Devarmani | Last Updated : Mar 21, 2022, 11:30 AM IST
  • ಗೋವಾದ ಭಾರತೀಯ ಜನತಾ ಪಕ್ಷದ ಶಾಸಕಾಂಗ ಸಭೆ
  • ಮುಂದಿನ ಮುಖ್ಯಮಂತ್ರಿಯ ಹೆಸರು ಮತ್ತು ಪ್ರಮಾಣ ವಚನ ಸಮಾರಂಭದ ದಿನಾಂಕ ಪ್ರಕಟ
  • ಬಿಜೆಪಿಯ ಕೇಂದ್ರ ವೀಕ್ಷಕರಾಗಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಎಲ್ ಮುರುಗನ್ ಅವರು ಸಭೆಯಲ್ಲಿ ಭಾಗಿ
ಇಂದು ಗೋವಾ ಬಿಜೆಪಿ ಶಾಸಕಾಂಗ ಪಕ್ಷದ ಸಭೆ.. ಸಿಎಂ ಹೆಸರು ಘೋಷಣೆ!? title=
ಪ್ರಮೋದ್ ಸಾವಂತ್

ಪಣಜಿ: ಗೋವಾದ ಭಾರತೀಯ ಜನತಾ ಪಕ್ಷದ (BJP) ಶಾಸಕಾಂಗ ಸಭೆಯು ಸೋಮವಾರ ಪಣಜಿಯಲ್ಲಿ (Panaji) ಸಭೆ ಸೇರಿ ಮುಂದಿನ ಮುಖ್ಯಮಂತ್ರಿಯ ಹೆಸರು ಮತ್ತು ಪ್ರಮಾಣ ವಚನ ಸಮಾರಂಭದ ದಿನಾಂಕವನ್ನು ಪ್ರಕಟಿಸಲಿದೆ.

ಗೋವಾದಲ್ಲಿ (Goa) ಸರ್ಕಾರ ರಚನೆಗೆ ಅನುಕೂಲವಾಗುವಂತೆ ಬಿಜೆಪಿಯ ಕೇಂದ್ರ ವೀಕ್ಷಕರಾಗಿ ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್ ಮತ್ತು ಎಲ್ ಮುರುಗನ್ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಗೋವಾ ಬಿಜೆಪಿ ಅಧ್ಯಕ್ಷ ಸದಾನಂದ ತನವಡೆ ಭಾನುವಾರ ಖಚಿತಪಡಿಸಿದ್ದಾರೆ.

ಇದನ್ನೂ ಓದಿ:ಮುಂದೊಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟ್ರಧ್ವಜವಾದೀತು’

ಸಂಜೆ 4 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ತನವಡೆ ಹೇಳಿದರು. ಏತನ್ಮಧ್ಯೆ, ಮುಖ್ಯಮಂತ್ರಿ (Goa CM) ಹುದ್ದೆಯ ಮುಂಚೂಣಿಯಲ್ಲಿರುವ ಅಭ್ಯರ್ಥಿಯೂ ಆದ ಹಂಗಾಮಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಪಕ್ಷವು ತನಗೆ ಯಾವುದೇ ಜವಾಬ್ದಾರಿಯನ್ನು ನೀಡಲು ನಿರ್ಧರಿಸಿದರೂ ಅದನ್ನು ಸ್ವೀಕರಿಸುತ್ತೇನೆ ಎಂದು ಹೇಳಿದರು.

"20 ಸ್ಥಾನಗಳನ್ನು ಪಡೆದಿದ್ದಕ್ಕೆ ನನಗೆ ಸಂತೋಷವಾಗಿದೆ. ನಾಳೆ ಪಕ್ಷದ ಶಾಸಕಾಂಗ ಸಭೆಗೆ ಬಿಜೆಪಿ ವೀಕ್ಷಕರು ಬರಲಿದ್ದಾರೆ. ನಾಳೆಯ ಸಭೆಯಲ್ಲಿ ಎಲ್ಲವನ್ನೂ ನಿರ್ಧರಿಸಲಾಗುವುದು. ಪಕ್ಷ ನೀಡಿದ ಜವಾಬ್ದಾರಿಯನ್ನು ಸಂತೋಷದಿಂದ ಸ್ವೀಕರಿಸುತ್ತೇನೆ" ಎಂದು ಪ್ರಮೋದ್ ಸಾವಂತ್ (Pramod Savant) ಭಾನುವಾರ ಹೇಳಿದರು.  

ಬಿಜೆಪಿ ಹಕ್ಕು ಚಲಾಯಿಸಲಿದ್ದು, ಸರ್ಕಾರ ರಚಿಸಲು ರಾಜ್ಯಪಾಲ ಪಿಎಸ್ ಶ್ರೀಧರನ್ ಪಿಳ್ಳೈ ಅವರನ್ನು ಸಂಪರ್ಕಿಸಲಿದೆ. ಇದಕ್ಕೂ ಮುನ್ನ ಶನಿವಾರ ಸಾವಂತ್ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amith Sha) ಅವರನ್ನು ಭೇಟಿಯಾಗಿ ಸರ್ಕಾರ ರಚನೆ ಕುರಿತು ಚರ್ಚಿಸಿದರು.

ಇದನ್ನೂ ಓದಿ:Ukraine Conflict: ಅಮೇರಿಕಾ-ಉ.ಕೊರಿಯಾ ಮಧ್ಯೆ ಯುದ್ಧ ಸಂಭವಿಸಲಿದೆಯಾ? ಏನಿದು ಹೊಸ ಭವಿಷ್ಯವಾಣಿ!

ಇತ್ತೀಚೆಗಷ್ಟೇ ಮುಕ್ತಾಯಗೊಂಡ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೋವಾದಲ್ಲಿ 40 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 20 ಸ್ಥಾನಗಳನ್ನು ಗೆದ್ದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು ಮತ್ತು ಕಾಂಗ್ರೆಸ್ ಅನ್ನು 11 ಸ್ಥಾನಗಳಿಗೆ ಇಳಿಸಿತು.

ಗೋವಾದಲ್ಲಿ ಬಿಜೆಪಿ ಬಹುಮತಕ್ಕಿಂತ ಒಂದು ಸ್ಥಾನ ಕಡಿಮೆಯಾಗಿದೆ ಆದರೆ ಮಹಾರಾಷ್ಟ್ರವಾದಿ ಗೋಮಾಂತಕ್ (MGP) ಮತ್ತು ಸ್ವತಂತ್ರ ಅಭ್ಯರ್ಥಿಗಳ ಸಹಾಯದಿಂದ ರಾಜ್ಯದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಸಜ್ಜಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News