ನವದೆಹಲಿ: ಮಹಾತ್ಮಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶ ಭಕ್ತ ಎಂದು ಹೇಳಿರುವ ಪ್ರಗ್ಯಾ ಸಿಂಗ್ ಅವರ ಹೇಳಿಕೆಗೆ ಕಿಡಿ ಕಾರಿರುವ ನೋಬೆಲ್ ಶಾಂತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿ ಗೋಡ್ಸೆ ಗಾಂಧಿಯನ್ನು ಕೊಂದರೆ ಪ್ರಗ್ಯಾ ಸಿಂಗ್ ರಂತಹವರು ಅವರ ಆತ್ಮವನ್ನು ಕೊಲ್ಲುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
गोडसे ने गांधी के शरीर की हत्या की थी, परंतु प्रज्ञा जैसे लोग उनकी आत्मा की हत्या के साथ, अहिंसा,शांति, सहिष्णुता और भारत की आत्मा की हत्या कर रहे हैं।गांधी हर सत्ता और राजनीति से ऊपर हैं।भाजपा नेतृत्व छोटे से फ़ायदे का मोह छोड़ कर उन्हें तत्काल पार्टी से निकाल कर राजधर्म निभाए।
— Kailash Satyarthi (@k_satyarthi) May 18, 2019
ಕಮಲ್ ಹಾಸನ್ ಅವರು ಇತ್ತೀಚಿಗೆ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಭಯೋತ್ಪಾಧಕ ಎಂದು ಹೇಳಿದ್ದರು.ಈ ವಿಚಾರವಾಗಿ ಸುದ್ದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯಿಸಿದ ಪ್ರಗ್ಯಾಸಿಂಗ್ ಗೋಡ್ಸೆ ನಿಜವಾದ ದೇಶಭಕ್ತ ಎಂದು ಹೇಳಿದ್ದರು. ಈ ಹೇಳಿಕೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹೇಳಿಕೆಯಿಂದಾಗಿ ಬಿಜೆಪಿಗೆ ಮುಜಗುರವಾಗಿತ್ತು. ನಂತರು ಅದು ಪ್ರಗ್ಯಾ ಅವರಿಗೆ ಕ್ಷಮೆ ಕೇಳುವಂತೆ ಆಗ್ರಹಿಸಿತ್ತು.
ಈಗ ಪ್ರಗ್ಯಾ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೈಲಾಶ್ ಸತ್ಯಾರ್ಥಿ "ಗೋಡ್ಸೆ ಮಹಾತ್ಮ ಗಾಂಧಿಯವರ ದೇಹವನ್ನು ಕೊಂದರೆ, ಪ್ರಜ್ಞಾ ನಂತಹ ವ್ಯಕ್ತಿಗಳು ಅವರ ಆತ್ಮವನ್ನು ಕೊಲ್ಲುತ್ತಿದ್ದಾರೆ.ಅಹಿಂಸೆ, ಶಾಂತಿ, ಸಹಿಷ್ಣುತೆಯನ್ನು ಹೊಂದಿರುವ ಆತ್ಮವನ್ನು ಕೊಲ್ಲುತ್ತಿದ್ದಾರೆ. ಗಾಂಧಿಜೀ ಅವರು ಅಧಿಕಾರ ಮತ್ತು ರಾಜಕೀಯಕ್ಕಿಂತಲೂ ಎತ್ತರದ ಸ್ಥಾನದಲ್ಲಿದ್ದಾರೆ. ಬಿಜೆಪಿರಾಜಕೀಯ ಲಾಭವನ್ನು ಬದಿಗಿರಿಸಿ ಅವರನ್ನು ಪಕ್ಷದಿಂದ ಹೊರಹಾಕಿ ರಾಜಧರ್ಮವನ್ನು ಪಾಲಿಸಬೇಕಾಗಿತ್ತು ಎಂದು ಕೈಲಾಶ್ ಸತ್ಯಾರ್ಥಿ ಟ್ವೀಟ್ ಮಾಡಿದ್ದಾರೆ.