ಭಯೋತ್ಪಾದನೆ ವಿರುದ್ಧ ಕಾಶ್ಮೀರದಲ್ಲಿ ಶೂನ್ಯ ಸಹಿಷ್ಣುತೆ ನೀತಿ ಮುಂದುವರೆಯಲಿದೆ: ಅಮಿತ್ ಶಾ

ಕಾನೂನಿನ ಪ್ರಕಾರ ಭ್ರಷ್ಟಾಚಾರದಲ್ಲಿ, ಭಯೋತ್ಪಾದನೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಗೃಹ ಸಚಿವಾಲಯದ ಮೊದಲ ಆದ್ಯತೆಯಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ.

Last Updated : Jun 9, 2019, 05:38 PM IST
ಭಯೋತ್ಪಾದನೆ ವಿರುದ್ಧ ಕಾಶ್ಮೀರದಲ್ಲಿ ಶೂನ್ಯ ಸಹಿಷ್ಣುತೆ ನೀತಿ ಮುಂದುವರೆಯಲಿದೆ: ಅಮಿತ್ ಶಾ title=

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ವಿರುದ್ಧ ಇರುವ ಶೂನ್ಯ ಸಹಿಷ್ಣುತೆ ನೀತಿ ಎನ್‌ಡಿಎ ಸರ್ಕಾರದಲ್ಲಿ ಮುಂದುವರಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿದ್ದಾರೆ.

ಅಲ್ಲದೆ, ಕಾನೂನಿನ ಪ್ರಕಾರ ಭ್ರಷ್ಟಾಚಾರದಲ್ಲಿ, ಭಯೋತ್ಪಾದನೆಯಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಗೃಹ ಸಚಿವಾಲಯದ ಮೊದಲ ಆದ್ಯತೆಯಾಗಿದೆ ಎಂದು ಹೇಳಿರುವ ಅಮಿತ್ ಶಾ, ಯಾವುದೇ ಟೀಕೆಗಳಿಗೆ ತಲೆಕೆಡಿಸಿಕೊಳ್ಳದೆ ಶೂನ್ಯ ಸಹಿಷ್ಣುತೆ ನೀತಿಯನ್ನು ಮುಂದುವರಿಸಿ ಎಂದು ಭದ್ರತಾ ಪಡೆಗಳಿಗೆ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

ಈ ವರ್ಷದ ಮೊದಲ ಐದು ತಿಂಗಳುಗಳಲ್ಲಿ, ಜಮ್ಮ-ಕಾಶ್ಮೀರದಲ್ಲಿ 101 ಭಯೋತ್ಪಾದಕರನ್ನು ಭದ್ರತಾ ಪಡೆ ಹತ್ಯೆ ಮಾಡಿದೆ. ಪ್ರತಿ ತಿಂಗಳು ಕನಿಷ್ಠ 20 ಭಯೋತ್ಪಾದಕರನ್ನು ಹೊಡೆದುರುಳಿಸಲಾಗುತ್ತಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ. 
 

Trending News