ಗುಜರಾತ್ ವಿಧಾನಸಭೆ ಚುನಾವಣೆ : ಮೊದಲ ಹಂತದ ಮತದಾನ ಆರಂಭ

ಗುಜರಾತ್‌ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. 

Last Updated : Dec 9, 2017, 10:35 AM IST
ಗುಜರಾತ್ ವಿಧಾನಸಭೆ ಚುನಾವಣೆ : ಮೊದಲ ಹಂತದ ಮತದಾನ ಆರಂಭ  title=

ಅಹಮದಾಬಾದ್ : ಗುಜರಾತ್‌ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದು ಬೆಳಿಗ್ಗೆ 8 ಗಂಟೆಗೆ ಆರಂಭವಾಗಿದೆ. 

ರಾಜ್ಯದ 182 ವಿಧಾನಸಭಾ ಕ್ಷೇತ್ರಗಳ ಪೈಕಿ ಮೊದಲ ಹಂತದಲ್ಲಿ 89 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, 977 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಡೆಯಲಿದೆ. ಇವರಲ್ಲಿ 57 ಮಂದಿ ಮಹಿಳೆಯರೂ ಸೇರಿದ್ದು, 2.2 ಕೋಟಿ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಲಿದ್ದಾರೆ. 

ಮೊದಲ ಹಂತದ ಮತದಾನ 24,689 ಮತಗಟ್ಟೆಗಳಲ್ಲಿ ನಡೆಯಲಿದೆ. ಮತದಾನಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮುಗಿಸಿ ಚುನಾವಣಾ ಆಯೋಗ ಸಜ್ಜಾಗಿದೆ. ಪ್ರಮುಖವಾಗಿ ಎರಡು ರಾಷ್ಟ್ರೀಯ ಪಕ್ಷಗಳಾಗಿರುವ ಕಾಂಗ್ರೆಸ್‌ ಮತ್ತು ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. 

ಡಿಸೆಂಬರ್ 14ರಂದು 93 ಸ್ಥಾನಗಳಿಗೆ ಎರಡನೇ ಹಂತದ ಮತದಾನ ನಡೆಯಲಿದೆ. ಇಡೀ ದೇಶವೇ ಕಾತರದಿಂದ ಕಾಯುತ್ತಿರುವ ಗುಜರಾತ್ ವಿಧಾನಸಭೆ ಚುನಾವಣೆಯ ಫಲಿತಾಂಶ ಡಿಸೆಂಬರ್ 18ರಂದು ಹೊರ ಬೀಳಲಿದೆ. 

Trending News