ಅಹಮದಾಬಾದ್ ಮೆಮ್‌ನಗರ ನಿಲ್ದಾಣದಲ್ಲಿ ಬಸ್‌ನಲ್ಲಿ ಅಗ್ನಿ ಅವಘಢ ವಿಡಿಯೋ ವೈರಲ್

Gujarat: ಗುಜರಾತ್‌ನ ಅಹಮದಾಬಾದ್‌ನ  ಮೆಮ್‌ನಗರ ಬಸ್ ನಿಲ್ದಾಣದಲ್ಲಿ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ. ಈ ಘಟನೆಯಲ್ಲಿ ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ಹೇಳಿದ್ದಾರೆ. 

Written by - Yashaswini V | Last Updated : Sep 16, 2022, 02:24 PM IST
  • ಅಹಮದಾಬಾದ್‌ನಲ್ಲಿ ಬಸ್‌ಗೆ ಬೆಂಕಿ
  • ಮೆಮ್‌ನಗರ ನಿಲ್ದಾಣದಲ್ಲಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡ ಬೆಂಕಿ
  • ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣ
ಅಹಮದಾಬಾದ್ ಮೆಮ್‌ನಗರ ನಿಲ್ದಾಣದಲ್ಲಿ ಬಸ್‌ನಲ್ಲಿ ಅಗ್ನಿ ಅವಘಢ ವಿಡಿಯೋ ವೈರಲ್  title=
Bus Caught fire

ಅಹಮದಾಬಾದ್: ಗುಜರಾತ್‌ನ ಅಹಮದಾಬಾದ್‌ನ ಮೆಮ್‌ನಗರ ಬಸ್ ನಿಲ್ದಾಣದಲ್ಲಿ ಇದ್ದಕ್ಕಿದ್ದಂತೆ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವರದಿ ಆಗಿದೆ. 

ಅಹಮದಾಬಾದ್ ಮೆಮ್‌ನಗರ ನಿಲ್ದಾಣದಲ್ಲಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ತಕ್ಷಣ ಬಸ್ ನಿಲ್ದಾಣವನ್ನು ತೆರವು ಮಾಡಲಾಗಿದ್ದು, ಯಾರಿಗೂ ಪ್ರಾಣಾಪಾಯವಾಗಿಲ್ಲ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.

ಇದನ್ನೂ ಓದಿ- ಚಿಟಿಕೆಯಲ್ಲಿ ಖಾತೆಯನ್ನು ಖಾಲಿ ಮಾಡುವ ಹೊಸ ಮೊಬೈಲ್ ಬ್ಯಾಂಕಿಂಗ್ ವೈರಸ್ ಪತ್ತೆ!

ಮೆಮ್‌ನಗರ ನಿಲ್ದಾಣದಲ್ಲಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.  ಬೆಂಕಿಯ ಜ್ವಾಲೆಯು ಕೆಲವೇ ಕ್ಷಣಗಳಲ್ಲಿ ಇಡೀ ನಿಲ್ದಾಣದಲ್ಲಿ ಹರಡಿತು. 

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ- ಭಾರೀ ಮಳೆ ಅವಾಂತರ: ಲಕ್ನೋದಲ್ಲಿ ಗೋಡೆ ಕುಸಿದು ಮೂರು ಮಕ್ಕಳು ಸೇರಿದಂತೆ 9 ಮೃತ

ಬಸ್ಸಿನಲ್ಲಿ ಬೆಂಕಿ ಹೊತ್ತಿ ಉರಿಯುತ್ತಿರುವ ವಿಡಿಯೋ:

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News