ಗುಜರಾತ್, ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಐಎಂಡಿ ಮುನ್ಸೂಚನೆ

ಗುಜರಾತ್ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Last Updated : Sep 5, 2019, 09:43 AM IST
ಗುಜರಾತ್, ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ: ಐಎಂಡಿ ಮುನ್ಸೂಚನೆ  title=

ನವದೆಹಲಿ: ಗುಜರಾತ್ ಮತ್ತು ಒಡಿಶಾದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಪಶ್ಚಿಮ ಮಧ್ಯಪ್ರದೇಶ, ವಿದರ್ಭ, ಸೌರಾಷ್ಟ್ರ ಮತ್ತು ಕಚ್, ಮಧ್ಯ ಮಹಾರಾಷ್ಟ್ರ ಮತ್ತು ಕೊಂಕಣ ಮತ್ತು ಗೋವಾದ ಕೆಲವು ಪ್ರತ್ಯೇಕ ಭಾಗಗಳಲ್ಲಿ ದಿನವಿಡೀ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

"ಉತ್ತರಾಖಂಡ, ರಾಜಸ್ಥಾನ, ಪೂರ್ವ ಮಧ್ಯಪ್ರದೇಶ, ಛತ್ತೀಸ್‌ಗಢ, ಉಪ-ಹಿಮಾಲಯನ್, ಪಶ್ಚಿಮ ಬಂಗಾಳ, ಸಿಕ್ಕಿಂ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ತೆಲಂಗಾಣ, ಕರಾವಳಿ, ದಕ್ಷಿಣ ಆಂತರಿಕ ಕರ್ನಾಟಕ, ತಮಿಳುನಾಡು, ಪುದುಚೇರಿ, ಕಾರೈಕಾಲ್ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ" ಎಂದು ಐಎಂಡಿ ತನ್ನ ಬುಲೆಟಿನ್ ನಲ್ಲಿ ಮಾಹಿತಿ ನೀಡಿದೆ.

ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಗಾಳಿ 40-50 ಕಿ.ಮೀ ವೇಗದಲ್ಲಿ ಬೀಸುತ್ತಿದ್ದು, ಪಶ್ಚಿಮ-ಮಧ್ಯ ಮತ್ತು ನೈರುತ್ಯ ಅರೇಬಿಯನ್ ಸಮುದ್ರ ಮತ್ತು ಮಧ್ಯ ಮತ್ತು ಪಕ್ಕದ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಕೆಲ ದಿನಗಳವರೆಗೆ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

Trending News