ಶ್ರೀರಾಮ ಪ್ರಾಣ ಪ್ರತಿಷ್ಠಾ ಮಹೋತ್ಸವ..! ಜ.22 ರಂದು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ

Ram Mandir inauguration : ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾ ಮಹೋತ್ಸವಕ್ಕೆ ದೇಶಾದ್ಯಂತ ಬೆಂಬಲ ವ್ಯಕ್ತವಾಗುತ್ತಿದೆ. ಇಡೀ ದೇಶವೇ ಈ ಸುದಿನಕ್ಕಾಗಿ ಕಾಯುತ್ತಿದೆ. ಈ ದಿನದಂದು ಅಯೋಧ್ಯೆಯ ಹೊರತಾಗಿ ದೇಶಾದ್ಯಂತ ಹಲವು ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೆ, ಜನವರಿ 22 ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ.

Written by - Krishna N K | Last Updated : Jan 18, 2024, 04:33 PM IST
  • ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾ ಮಹೋತ್ಸವ.
  • ಇಡೀ ದೇಶವೇ ಈ ಸುದಿನಕ್ಕಾಗಿ ಕಾಯುತ್ತಿದೆ.
  • ಜನವರಿ 22 ರಂದು ನಡೆಯಲಿರುವ ಮಹೋತ್ಸವ.
 ಶ್ರೀರಾಮ ಪ್ರಾಣ ಪ್ರತಿಷ್ಠಾ ಮಹೋತ್ಸವ..! ಜ.22 ರಂದು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ title=

Ayodhya Ram Mandir : ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಸಮಾರಂಭ ನಡೆಯಲಿದೆ. ದೇಶದಾದ್ಯಂತ ಹಬ್ಬದ ವಾತಾವರಣ ಕಂಡು ಬರುತ್ತಿದೆ. ಹಲವು ರಾಜ್ಯಗಳ ಸರ್ಕಾರ ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದೆ. ಈ ನಡುವೆ ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದ್ದು, ಜನವರಿ 22 ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಅರ್ಧ ದಿನ ರಜೆ ನೀಡಿದೆ.

ಹೌದು.. ರಾಮಮಂದಿರ ಉದ್ಘಾಟನೆಗೆ ಭರದ ಸಿದ್ಧತೆಗಳು ನಡೆಯುತ್ತಿದ್ದು, ಕೇಂದ್ರದ ಮೋದಿ ಸರ್ಕಾರ ಗುರುವಾರ (ಜನವರಿ 18) ದೊಡ್ಡ ಘೋಷಣೆ ಮಾಡಿದೆ. ಜನವರಿ 22 ರಂದು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಿದೆ. ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಅಯೋಧ್ಯೆಯ ಗರ್ಭಗುಡಿಯೊಳಗೆ ಬಂದ ಶ್ರೀರಾಮನ ವಿಗ್ರಹ

22 ರಂದು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚಲಾಗುವುದು ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿಕೆಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಅಯೋಧ್ಯೆಯಲ್ಲಿ ನಡೆಯಲಿರುವ ಪ್ರಾಣ ಪ್ರತಿಷ್ಠಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಸುತ್ತೋಲೆ ಪ್ರಕಾರ, ಜನವರಿ 22 ರಂದು ಕೇಂದ್ರ ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ ನೀಡಲಾಗಿದೆ. ಜನವರಿ 22, ಸೋಮವಾರ, ಎಲ್ಲಾ ಕೇಂದ್ರ ಸರ್ಕಾರದ ಇಲಾಖೆಗಳಲ್ಲಿ ಮಧ್ಯಾಹ್ನ 2.30 ರವರೆಗೆ ರಜೆ ಇರುತ್ತದೆ. ಅದರ ನಂತರ ಎಲ್ಲಾ ಸರ್ಕಾರಿ ಕಚೇರಿಗಳು ತಮ್ಮ ಕೆಲಸವನ್ನು ಮಾಡುತ್ತವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News