ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹರೀಶ್ ರಾವತ್ ರಾಜೀನಾಮೆ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್  2019 ರ ಚುನಾವಣೆಯಲ್ಲಿ ಪಕ್ಷದ ಸೋಲಿನ ಜವಾಬ್ದಾರಿಯನ್ನು ಹೊತ್ತು ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Last Updated : Jul 4, 2019, 04:45 PM IST
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಹರೀಶ್ ರಾವತ್ ರಾಜೀನಾಮೆ title=
Photo courtesy: PTI

ನವದೆಹಲಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್  2019 ರ ಚುನಾವಣೆಯಲ್ಲಿ ಪಕ್ಷದ ಸೋಲಿನ ಜವಾಬ್ದಾರಿಯನ್ನು ಹೊತ್ತು ಗುರುವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

ಬುಧುವಾರದಂದು ರಾಹುಲ್ ಗಾಂಧಿ ತಾವು ಇನ್ಮುಂದೆ ಕಾಂಗ್ರೆಸ್ ಅಧ್ಯಕ್ಷರಲ್ಲ ಎಂದು ಹೇಳಿ ನೂತನ ಅಧ್ಯಕ್ಷರನ್ನು ನೇಮಕ ಮಾಡಲು ಸೂಚಿಸಿದ್ದರು. ಈ ಬೆನ್ನಲ್ಲೇ ಈಗ ಕಾಂಗ್ರೆಸ್ ಪ್ರಧಾನ್ ಕಾರ್ಯದರ್ಶಿ ಹುದ್ದೆಗೆ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ರಾಜೀನಾಮೆ ನೀಡಿದ್ದಾರೆ. ಅವರು ಕಳೆದ ವರ್ಷ ಜುಲೈನಲ್ಲಿ ಅಸ್ಸಾಂ ಉಸ್ತುವಾರಿಯಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ಜವಾಬ್ದಾರಿ ನೀಡಲಾಗಿತ್ತು.  

ಇತ್ತೀಚೆಗೆ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನಿರಸ ಪ್ರದರ್ಶನ ನೀಡಿ ಕೇವಲ 52 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಯಿತು. ಇನ್ನೊಂದೆಡೆಗೆ ಬಿಜೆಪಿ ಮತ್ತೊಮ್ಮೆ ಸಂಪೂರ್ಣ ಬಹುಮತದೊಂದಿಗೆ ಸರ್ಕಾರವನ್ನು ರಚಿಸಿತು. 

Trending News