ಚಂಡೀಗಢ (ಹರಿಯಾಣ): ಹರಿಯಾಣ ವಿಧಾನಸಭಾ ಚುನಾವಣೆ ವೇಳೆ ಶಾಂತಿಯುತ ಹಾಗೂ ನ್ಯಾಯಯುತ ಚುನಾವಣೆಯನ್ನು ಖಾತರಿ ಪಡಿಸಿಕೊಳ್ಳುವ ಸಲುವಾಗಿ ಚುನಾವಣೆಯ ಪೋಲಿಂಗ್ ಬೂತ್ ಗಳಲ್ಲಿ ವೆಬ್ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹರಿಯಾಣ ಮುಖ್ಯ ಚುನಾವಣಾ ಅಧಿಕಾರಿ ಅನುರಾಗ್ ಅಗರ್ವಾಲ್ ಭಾನುವಾರ ತಿಳಿಸಿದ್ದಾರೆ.
ಹರಿಯಾಣದ 3100 ನಿರ್ಣಾಯಕ ಮತ್ತು ದುರ್ಬಲ ಮತದಾನ ಕೇಂದ್ರಗಳಲ್ಲಿ ವೆಬ್ಕಾಸ್ಟಿಂಗ್ ಮಾಡಲಾಗುವುದು. ಇದರ ನೇರ ತುಣುಕನ್ನು ಚಂಡೀಗಢದ ಪ್ರಧಾನ ಕಚೇರಿಯಲ್ಲಿ ಸ್ಥಾಪಿಸಲಾದ ನಿಯಂತ್ರಣ ಕೊಠಡಿಯಲ್ಲಿ ಮೇಲ್ವಿಚಾರಣೆ ಮಾಡಲಾಗುವುದು. ಅಕ್ಟೋಬರ್ 21 ರ ಬೆಳಿಗ್ಗೆ, ಅಣಕು ಸಮೀಕ್ಷೆಯ ಮಾಹಿತಿಯು ಡ್ಯಾಶ್ಬೋರ್ಡ್ ಮೂಲಕ ನೇರವಾಗಿ ನಿಯಂತ್ರಣ ಕೊಠಡಿಯಲ್ಲಿ ಲಭ್ಯವಾಗಲಿದೆ ಎಂದು ಅವರು ಹೇಳಿದ್ದಾರೆ.
ಚಂಡೀಗಢ ಕೇಂದ್ರ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದ್ದು, ಇದರಲ್ಲಿ ಎಲೆಕ್ಟ್ರಾನಿಕ್ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಬರುವ ಸುದ್ದಿ ಮತ್ತು ದೂರುಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿಯ ಪ್ರಕಾರ 1,064 ಪುರುಷ ಮತ್ತು 105 ಮಹಿಳಾ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಎಲೆಕ್ಟ್ರಾನಿಕ್ ಮತದಾನ ಯಂತ್ರಗಳಲ್ಲಿ (ಇವಿಎಂ) ಒಟ್ಟು 1,169 ಅಭ್ಯರ್ಥಿಗಳ ಭವಿಷ್ಯವನ್ನು ಮತದಾರರು ಇಂದು ನಿರ್ಧರಿಸಲಿದ್ದಾರೆ.
ರಾಜ್ಯದಲ್ಲಿ ಒಟ್ಟು 19,578 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 2,987 ದುರ್ಬಲ ಎಂದು ಗುರುತಿಸಲಾಗಿದ್ದು, 151 ನಿರ್ಣಾಯಕ ಮತಗಟ್ಟೆಗಳನ್ನು ಗುರುತಿಸಲಾಗಿದೆ. ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 6 ರವರೆಗೆ ಈ ಪ್ರಕ್ರಿಯೆ ಮುಂದುವರೆಯಲಿದೆ. ಅಕ್ಟೋಬರ್ 24 ರಂದು ಮತ ಎಣಿಕೆ ನಡೆಯಲಿದೆ.
Voting underway at polling booth 128-129 in Balali village in Charkhi Dadri constituency. Wrestler Babita Phogat is contesting on a BJP ticket from here against Congress candidate Nirpender Singh Sangwan and Jannayak Janta Party (JJP) candidate Satpal Sangwan. #Haryana pic.twitter.com/QUHBf4HxhA
— ANI (@ANI) October 21, 2019
ಹರಿಯಾಣದ ಮತಗಟ್ಟೆಗಳಲ್ಲೂ ಭಾರೀ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಇದಕ್ಕಾಗಿ 40,000 ಕ್ಕೂ ಹೆಚ್ಚು ಹರಿಯಾಣ ಪೊಲೀಸ್ ಸಿಬ್ಬಂದಿ, 13,000 ಕ್ಕೂ ಹೆಚ್ಚು ಅರೆಸೈನಿಕ ಸಿಬ್ಬಂದಿ ಮತ್ತು 20,000 ಕ್ಕೂ ಹೆಚ್ಚು ಗೃಹರಕ್ಷಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್, ಭಾರತೀಯ ರಾಷ್ಟ್ರೀಯ ಲೋಕ ದಳ (ಐಎನ್ಎಲ್ಡಿ) ಮತ್ತು ಜನ್ನಾಯಕ್ ಜಂತ ಪಕ್ಷ (ಜೆಜೆಪಿ) ನಡುವೆ ಬಹುಮುಖಿ ಸ್ಪರ್ಧೆ ಏರ್ಪಟ್ಟಿದೆ.
(With ANI Inputs)