Lakhimpur Kheri violence:ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು

Lakhimpur Kheri violence: ಅಕ್ಟೋಬರ್ 9, 2021 ರಂದು ಬಂಧಿಸಲ್ಪಟ್ಟ ಆಶಿಶ್ ಮಿಶ್ರಾ ಅವರಿಗೆ ಜಾಮೀನು ಮಂಜೂರಾಗಿದೆ. 

Edited by - Chetana Devarmani | Last Updated : Feb 10, 2022, 03:35 PM IST
  • ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ
  • ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರಿಗೆ ಜಾಮೀನು ಮಂಜೂರು
  • ಜಾಮೀನು ಮಂಜೂರು ಮಾಡಿದ ಅಲಹಾಬಾದ್ ಹೈಕೋರ್ಟ್
Lakhimpur Kheri violence:ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರು  title=
ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ

ನವದೆಹಲಿ: ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣದ (Lakhimpur Kheri violence) ಪ್ರಮುಖ ಆರೋಪಿ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ (Ashish Mishra) ಅವರಿಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಗುರುವಾರ ಜಾಮೀನು ಮಂಜೂರು ಮಾಡಿದೆ.

ಇದನ್ನೂ ಓದಿ:ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಹಿಜಾಬ್ ವಿವಾದ, ಶೀಘ್ರ ವಿಚಾರಣೆ ನಡೆಸುವಂತೆ ಕಪಿಲ್ ಸಿಬಲ್ ಆಗ್ರಹ

ಉತ್ತರ ಪ್ರದೇಶದಲ್ಲಿ (Uttarapradesh) ಮೊದಲ ಹಂತದ ಮತದಾನ ಆರಂಭವಾದ ದಿನವೇ ಜಾಮೀನು ಮಂಜೂರಾಗಿದೆ. ಮುಖ್ಯವಾಗಿ ರಾಜ್ಯದ ಪಶ್ಚಿಮ ಭಾಗದ ಕೃಷಿ ಪ್ರಾಬಲ್ಯದ ಪ್ರದೇಶದ ಮತದಾರರು ಮೊದಲ ಹಂತದಲ್ಲಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.

 

 

ಆಶಿಶ್ ಅವರನ್ನು ಅಕ್ಟೋಬರ್ 9, 2021 ರಂದು ಲಖಿಂಪುರ ಖೇರಿ (Lakhimpur Kheri) ಪ್ರಕರಣದಲ್ಲಿ ಬಂಧಿಸಲಾಯಿತು. ಇದರಲ್ಲಿ ಈಗ ರದ್ದಾದ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆಯ ಸಂದರ್ಭದಲ್ಲಿ ಕನಿಷ್ಠ ನಾಲ್ವರು ರೈತರು ಮತ್ತು ಪತ್ರಕರ್ತರು ಸಾವನ್ನಪ್ಪಿದರು.

ಅಕ್ಟೋಬರ್​ 3ರಂದು ಲಖಿಂಪುರ ಖೇರಿಗೆ ಬಿಜೆಪಿ ಉಪಮುಖ್ಯಮಂತ್ರಿ ಕೇಶವ್​ ಪ್ರಸಾದ್​ ಮೌರ್ಯ ಭೇಟಿಕೊಟ್ಟಿದ್ದರು. ಈ ವೇಳೆ ಮೌನವಾಗಿ ಪ್ರತಿಭಟನಾ (Protest) ಮೆರವಣಿಗೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿದಿತ್ತು. ಈ ಘಟನೆ ಬೆನ್ನಲ್ಲೇ ಹಿಂಸಾಚಾರ ಭುಗಿಲೆದ್ದಿತ್ತು. 

ಇದನ್ನೂ ಓದಿ:ಕರೋನ ಭೀತಿ ನಡುವೆಯೇ ಕೇರಳದಲ್ಲಿ ಕೋತಿ ಜ್ವರ ಹಾವಳಿ ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ. 

Trending News