ಈ ರಾಜ್ಯಗಳಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆ ಎಚ್ಚರಿಕೆ

Weather Update: ಮುಂದಿನ ಮೂರು ದಿನ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

Written by - Yashaswini V | Last Updated : Aug 17, 2022, 07:23 AM IST
  • ಆಗಸ್ಟ್ 17 ರಂದು ದಕ್ಷಿಣ ರಾಜಸ್ಥಾನ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
  • ಇದರ ಹೊರತಾಗಿ ಸೌರಾಷ್ಟ್ರ ಮತ್ತು ಕಛ್ ಪ್ರದೇಶಗಳಲ್ಲಿ ಆಗಸ್ಟ್ 17 ಮತ್ತು ಆಗಸ್ಟ್ 18 ರ ನಡುವೆ ಮಳೆಯಾಗಬಹುದು.
  • ಇದೇ ವೇಳೆ ಗೋವಾ ಮತ್ತು ಕೊಂಕಣ ಪ್ರದೇಶಗಳಲ್ಲಿ ಇದೇ 20ರವರೆಗೆ ಮಳೆಯಾಗಬಹುದು.
ಈ ರಾಜ್ಯಗಳಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆ ಎಚ್ಚರಿಕೆ title=
Rain Alert

ಮಳೆ ಮುನ್ಸೂಚನೆ: ಆಗಸ್ಟ್ 20 ರವರೆಗೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಮೂರು ದಿನಗಳ ಕಾಲ ಗುಜರಾತ್, ರಾಜಸ್ಥಾನ್, ಮಹಾರಾಷ್ಟ್ರ, ಬಿಹಾರ, ಮಧ್ಯಪ್ರದೇಶ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಭಾರೀ ಮಳೆಯಾಗಬಹುದು ಎಂದು ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಆಗಸ್ಟ್ 17 ರಂದು ದಕ್ಷಿಣ ರಾಜಸ್ಥಾನ, ಮಧ್ಯ ಮಹಾರಾಷ್ಟ್ರ ಮತ್ತು ಗುಜರಾತ್‌ನಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದರ ಹೊರತಾಗಿ ಸೌರಾಷ್ಟ್ರ ಮತ್ತು ಕಛ್ ಪ್ರದೇಶಗಳಲ್ಲಿ ಆಗಸ್ಟ್ 17 ಮತ್ತು ಆಗಸ್ಟ್ 18 ರ ನಡುವೆ ಮಳೆಯಾಗಬಹುದು. ಇದೇ ವೇಳೆ ಗೋವಾ ಮತ್ತು ಕೊಂಕಣ ಪ್ರದೇಶಗಳಲ್ಲಿ ಇದೇ 20ರವರೆಗೆ ಮಳೆಯಾಗಬಹುದು.

ಇದನ್ನೂ ಓದಿ- ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಕರೋನಾ ವೈರಸ್‌ನ ಅಪಾಯ

ಬಿಹಾರ-ಬಂಗಾಳದಲ್ಲಿ ಮಳೆ:
ಮುಂದಿನ ಮೂರು ದಿನಗಳ ಕಾಲ ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಬಿಹಾರ ಮತ್ತು ಪೂರ್ವ ಮಧ್ಯಪ್ರದೇಶದಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ. ಇದಲ್ಲದೇ ಹಿಮಾಚಲ ಪ್ರದೇಶದಲ್ಲಿ ಆಗಸ್ಟ್ 20ರವರೆಗೆ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ- Milk Price Hike: ಮತ್ತೆ ಹಾಲಿನ ಬೆಲೆಯಲ್ಲಿ ಹೆಚ್ಚಳ: ಹೀಗಿದೆ ನೋಡಿ ಪರಿಷ್ಕೃತ ದರ

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಆಗಸ್ಟ್ 18 ಮತ್ತು 20 ರ ನಡುವೆ ಮಳೆಯಾಗಬಹುದು. ಇದಲ್ಲದೇ ಆಗಸ್ಟ್ 19 ಮತ್ತು 20 ರಂದು ಪೂರ್ವ ಉತ್ತರ ಪ್ರದೇಶದಲ್ಲಿ ಮತ್ತು ಆಗಸ್ಟ್ 20 ರಂದು ಪಶ್ಚಿಮ ಉತ್ತರ ಪ್ರದೇಶದಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಇದಲ್ಲದೇ ಇಂದು (ಆಗಸ್ಟ್ 17) ಉತ್ತರ ಪ್ರದೇಶ, ಹರಿಯಾಣ, ಛತ್ತೀಸ್ ಗಢ, ದೆಹಲಿ, ಪಂಜಾಬ್ ಮತ್ತು ರಾಜಸ್ಥಾನದಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ಐಎಂಡಿ ಭವಿಷ್ಯ ನುಡಿದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News