Rain Alert: ಮುಂದಿನ ಕೆಲವೇ ಗಂಟೆಗಳಲ್ಲಿ ಸುರಿಯಲಿದೆ ಭಾರೀ ಮಳೆ! ಈ ಭಾಗಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

Rain Alert in South India: ಶುಕ್ರವಾರ ರಾತ್ರಿ 11.30 ರವರೆಗೆ ಕೇರಳ ಕರಾವಳಿ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ 0.5 ರಿಂದ 1.5 ಮೀಟರ್ ಎತ್ತರದ ಅಲೆಗಳು ಎದ್ದಿದ್ದು, ಚಂಡಮಾರುತ ಆರ್ಭಟದ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ.

Written by - Bhavishya Shetty | Last Updated : Mar 16, 2024, 09:41 AM IST
    • ಕೇರಳದ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
    • ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ
    • ಗಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ
Rain Alert: ಮುಂದಿನ ಕೆಲವೇ ಗಂಟೆಗಳಲ್ಲಿ ಸುರಿಯಲಿದೆ ಭಾರೀ ಮಳೆ! ಈ ಭಾಗಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ title=
Weather Update

Rain Alert in South India: ಮುಂದಿನ ಕೆಲವು ಗಂಟೆಗಳಲ್ಲಿ ಕೇರಳದ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ತಿರುವನಂತಪುರಂ, ಪತ್ತನಂತಿಟ್ಟ ಮತ್ತು ಪಾಲಕ್ಕಾಡ್ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ಇದೆ. ಎಚ್ಚರಿಕೆಯ ಪ್ರಕಾರ, ಗಂಟೆಗೆ 40 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಒಂದು ಗ್ಲಾಸ್ ಎಳನೀರಿಗೆ 2 ಹನಿ ಈ ಹಣ್ಣಿನ ರಸ… ಮಿಕ್ಸ್ ಮಾಡಿ ಕುಡಿದರೆ ಬೆಳ್ಳಗಾದ ಕೂದಲು ಮರಳಿ ಕಪ್ಪು ಬಣ್ಣಕ್ಕೆ ತಿರುಗುತ್ತೆ!

ಶುಕ್ರವಾರ ರಾತ್ರಿ 11.30 ರವರೆಗೆ ಕೇರಳ ಕರಾವಳಿ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯಲ್ಲಿ 0.5 ರಿಂದ 1.5 ಮೀಟರ್ ಎತ್ತರದ ಅಲೆಗಳು ಎದ್ದಿದ್ದು, ಚಂಡಮಾರುತ ಆರ್ಭಟದ ಸಾಧ್ಯತೆಯಿದೆ ಎಂದು ರಾಷ್ಟ್ರೀಯ ಸಾಗರ ಮತ್ತು ವಾತಾವರಣ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ.

ಇದನ್ನೂ ಓದಿ:Gold Rate Today: ವಾರಾಂತ್ಯದಲ್ಲಿ ಸ್ಥಿರವಾದ ಚಿನ್ನದ ಬೆಲೆ.. ಏರಿಕೆ ಕಂಡ ಬೆಳ್ಳಿ!   

ಪಾಲಕ್ಕಾಡ್ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಮಾರ್ಚ್ 15 ರಿಂದ 19 ರವರೆಗೆ ಹೆಚ್ಚಿನ ತಾಪಮಾನ ದಾಖಲಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈ ಹಿಂದೆ ತಿಳಿಸಿತ್ತು. ತಾಪಮಾನವು 38 ಡಿಗ್ರಿ ಸೆಲ್ಸಿಯಸ್‌’ಗೆ ಏರಬಹುದು ಎಂದು ವರದಿಯಾಗಿದೆ. ಅಲಪ್ಪುಳ, ಕೊಟ್ಟಾಯಂ ಮತ್ತು ಕೋಯಿಕ್ಕೋಡ್ ಜಿಲ್ಲೆಗಳಲ್ಲಿ ತಾಪಮಾನವು 37 ಡಿಗ್ರಿ ಸೆಲ್ಸಿಯಸ್‌ಗೆ ಏರುವ ಸಾಧ್ಯತೆಯಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News