ನವದೆಹಲಿ : ಆಂಧ್ರಪ್ರದೇಶದ ರಾಯಲಸೀಮೆಯ ಮೂರು ಜಿಲ್ಲೆಗಳು ಸೇರಿದಂತೆ ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ(Heavy rain), ಎಲ್ಲೆಲ್ಲೂ ನೀರು ತುಂಬಿ ಕೊಂಡಿದೆ. ಈ ಅನಿಯಂತ್ರಿತ ಪರಿಸ್ಥಿತಿಯ ನಡುವೆಯೇ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
100 ಮಂದಿ ನಾಪತ್ತೆ
ಆಂಧ್ರಪ್ರದೇಶದಲ್ಲಿ ಸುರಿದ ಭಾರೀ ಮಳೆ (Heavy rain) ಮತ್ತು ನಂತರದ ಪರಿಸ್ಥಿತಿಗಳಿಂದಾಗಿ 17 ಜನರು ಸಾವನ್ನಪ್ಪಿದ್ದು, 100 ಜನರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಇದೇ ವೇಳೆ ತಿರುಪತಿಯಿಂದ (tirupati) ಹೊರಬರುತ್ತಿರುವ ಚಿತ್ರಗಳಲ್ಲಿ ನೂರಾರು ಯಾತ್ರಾರ್ಥಿಗಳು ಭೀಕರ ಪ್ರವಾಹದಲ್ಲಿ ಸಿಲುಕಿರುವುದು ಕಂಡು ಬರುತ್ತಿದೆ. ಘಾಟ್ ರಸ್ತೆ ಮತ್ತು ತಿರುಮಲ ಬೆಟ್ಟಗಳ ರಸ್ತೆಗಳನ್ನು ಮುಚ್ಚಲಾಗಿದೆ.
ಜನ ಜೀವನ ಅಸ್ತವ್ಯಸ್ತ :
ರಸ್ತೆಗಳು ನೀರಿನಲ್ಲಿ ಮುಳುಗಿವೆ ಎನ್ನುವುದಕ್ಕೆ ಚಿತ್ರಗಳೇ ಸಾಕ್ಷಿ. ಎತ್ತ ನೋಡಿದರತ್ತ ನೀರೇ ಕಾಣಿಸುತ್ತಿವೆ. ಜನರನ್ನುಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ.
ಇದನ್ನೂ ಓದಿ : ಸಾವಿರ ಅರ್ಥ ಹೇಳುವ ಮೋದಿ-ಯೋಗಿಯ ಎರಡು ಫೋಟೊ ಮತ್ತೊಂದು ಕವಿತೆ..!
ನೀರಿನಲ್ಲಿ ಕೊಚ್ಚಿ ಹೋದ ಬಸ್ :
ಭಾರೀ ಮಳೆಯಿಂದಾಗಿ , ಬಸ್ ವೊಂದು ನೀರಿನಲ್ಲಿ ಸಿಲುಕಿಕೊಂಡಿರುವುದನ್ನು ಇಲ್ಲಿ ಕಾಣಬಹುದು. ಈ ಬಸ್ ನಲ್ಲಿರುವ ಪ್ರಯಾಣಿಕರನ್ನು ರಕ್ಷಿಸಲಾಗಿದೆ. ಮೂರು ರಾಜ್ಯ ಸಾರಿಗೆ ಬಸ್‌ಗಳು ಈ ರೀತಿ ಸಿಕ್ಕಿಹಾಕಿಕೊಂಡಿರುವ ಬಗ್ಗೆ ವರದಿಯಾಗಿದೆ.ಈ ಪರಿಸ್ಥಿತಿಗಳ ನಡುವೆ ಸುಮಾರು 12 ಜನರನ್ನು ಉಳಿಸಲು ಸಾಧ್ಯವಾಗಲಿಲ್ಲ.
ಈ ಪ್ರದೇಶಗಳಲ್ಲಿ ಹೆಚ್ಚು ಹಾನಿ
ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಸಂದರ್ಭದಲ್ಲಿ ಹವಾಮಾನ ಇಲಾಖೆ ಸೇರಿದಂತೆ ಹಲವು ಸಂಸ್ಥೆಗಳ ನೆರವು ಪಡೆಯಲಾಗುತ್ತಿದೆ.
ಹಳಿ ತಪ್ಪಿದ ಜೀವನ
ಉಕ್ಕಿ ಹರಿಯುತ್ತಿರುವ ನದಿಗಳು ಮತ್ತು ಕಾಲುವೆಗಳಿಮದಾಗಿ ಹಲವಾರು ಜಿಲ್ಲೆಗಳು ಪ್ರವಾಹಕ್ಕೆ ಸಿಲುಕಿವೆ. ರಸ್ತೆಗಳು ಹಾನಿಗೊಳಗಾಗಿವೆ.
ಇದನ್ನೂ ಓದಿ : ದೆಹಲಿ ವಾಯುಮಾಲಿನ್ಯದ ಭೀತಿಯಿಂದಾಗಿ ಶಾಲಾ-ಕಾಲೇಜುಗಳು ಅನಿರ್ಧಿಷ್ಟ ಅವಧಿವರೆಗೆ ಬಂದ್
ಸಹಾಯದ ನಿರೀಕ್ಷೆಯಲ್ಲಿ ಯಾತ್ರಿಗಳು :
ಬೆಟ್ಟದಲ್ಲಿ ಸಿಲುಕಿರುವ ಯಾತ್ರಾರ್ಥಿಗಳಿಗೆ ವಸತಿ ಮತ್ತು ಆಹಾರದ ವ್ಯವಸ್ಥೆ ಮಾಡುವಂತೆ ಆಂಧ್ರಪ್ರದೇಶ ಮುಖ್ಯಮಂತ್ರಿ ತಿರುಮಲ ತಿರುಪತಿ ದೇವಸ್ಥಾನಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಡಪಾ ಜಿಲ್ಲೆಯ ರಾಜಂಪೇಟಾದಲ್ಲಿ ಚೆಯ್ಯೆರು ಕಾಲುವೆಯಲ್ಲಿ ಹಠಾತ್ ಪ್ರವಾಹದಿಂದಾಗಿ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಹಲವಾರು ಜನರು ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ.
ಸಿಎಂ ಜಗನ್ಮೋಹನ್ ರೆಡ್ಡಿ ಜತೆ ಪ್ರಧಾನಿ ಮೋದಿ ಮಾತುಕತೆ
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ವೈಎಸ್ ಜಗನ್ಮೋಹನ್ ರೆಡ್ಡಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿಯನ್ನು ವಿಚಾರಿಸಿದ್ದಾರೆ. ರಾಜ್ಯಕ್ಕೆ ಅಗತ್ಯ ನೆರವು ನೀಡುವ ಭರವಸೆ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.