Weather Update: ಕರ್ನಾಟಕ ಸೇರಿದಂತೆ ದೇಶದ ಈ ಭಾಗಗಳಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ

ಹವಾಮಾನ ಅಪ್ಡೇಟ್: ಕಳೆದ ಒಂದು ವಾರದಿಂದ ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕರ್ನಾಟಕದ ಹಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ನೀಡಿರುವ ಹವಾಮಾನ ಇಲಾಖೆ ದೇಶದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. 

Written by - Yashaswini V | Last Updated : Oct 12, 2022, 07:22 AM IST
  • ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ
  • ಇದೇ ವೇಳೆ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಎಂದು ಐಎಂಡಿ ಭವಿಷ್ಯ ನುಡಿದಿದೆ.
  • ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ
Weather Update: ಕರ್ನಾಟಕ ಸೇರಿದಂತೆ ದೇಶದ ಈ ಭಾಗಗಳಲ್ಲಿ ಇಂದು ಭಾರೀ ಮಳೆ ಎಚ್ಚರಿಕೆ  title=
Rain Alert

ಹವಾಮಾನ ಮುನ್ಸೂಚನೆ:  ಕಳೆದೊಂದು ವಾರದಿಂದ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಹಲಿ ಸುತ್ತಮುತ್ತಲಿನ ಎನ್‌ಸಿಆರ್ ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ವರುಣ ಅಬ್ಬರಕ್ಕೆ ಹಲವೆಡೆ ನೂರಾರು ಮರಗಳು ಧರೆಗುರುಳಿವೆ. ಇದೀಗ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್: 
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಹವಾಮಾನ ಇಲಾಖೆ, ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್ ಅನ್ನು ಸಹ ಘೋಷಿಸಿದೆ. 

ಇದನ್ನೂ ಓದಿ- Ola-Uber Auto Ban : ಬೆಂಗಳೂರಲ್ಲಿ ಓಲಾ ಊಬರ್ ಆಟೋ ಸೇವೆ ಬಂದ್!

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಇಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಹ ವರುಣ ಆರ್ಭಟಿಸಲಿದ್ದಾನೆ ಎಂದು ತಿಳಿದುಬಂದಿದೆ. 

ಇದನ್ನೂ ಓದಿ- ಮೀಸಲಾತಿ ಬಗ್ಗೆ ನಿರ್ಧರಿಸಿದ್ದೇವೆ, ಕ್ರೆಡಿಟ್ ತಗೋಳ್ತೇವೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್

ಉತ್ತರ ಭಾರತದ ಈ ರಾಜ್ಯಗಳಲ್ಲಿಯೂ ಮಳೆ ಎಚ್ಚರಿಕೆ: 
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದ್ದು ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಎಂದು ಐಎಂಡಿ ಭವಿಷ್ಯ ನುಡಿದಿದೆ. 

ಭಾರೀ ಮಳೆಯಿಂದಾಗಿ ಉತ್ತರಾಖಂಡದ ಹಲವು ಜಿಲ್ಲೆಗಳಲ್ಲಿ ಕಳೆದ 2 ದಿನಗಳಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.  ಪರ್ವತಾರೋಹಣಕ್ಕೆ ಬರುವವರು ಬರುವ ಮುನ್ನ ಒಮ್ಮೆ ಹವಾಮಾನದ ಮಾಹಿತಿ ತಿಳಿದುಕೊಳ್ಳಬೇಕು. ನಂತರವಷ್ಟೇ ಪರ್ವತಾರೋಹಣವನ್ನು ಯೋಜಿಸುವಂತೆ ಪರ್ವತಾರೋಹಿಗಳಿಗೆ ಉತ್ತರಾಖಂಡ್ ಪೊಲೀಸರು  ಸಲಹೆ ನೀಡಿದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News