Rain Update 30-08-2023: ಕೆಲ ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ಬಿಸಿಲ ಬೇಗೆಗೆ ತತ್ತರಿಸುತ್ತಿದೆ. ಮಳೆಗಾಲ ಆರಂಭವೇ ಆಗಿಲ್ಲವೇನೋ ಎಂಬಂತೆ ಭಾಸವಾಗುತ್ತಿದೆ. ಆದರೆ ಕರುನಾಡ ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಮುಂದಿನ 4 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಒಳನಾಡು ಜಿಲ್ಲೆಗಳಲ್ಲೂ ಉತ್ತಮ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಈ ಬಾರಿ ತಡವಾಗಿ ಮುಂಗಾರು ಪ್ರವೇಶ ಮಾಡುತ್ತಿದೆ, ರಾಜ್ಯದ ರೈತರು, ಬೆಳೆಗಾರರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕಂಗಾಲಾಗಿ ಹೋಗಿದ್ದರು. ಇನ್ನು ಜುಲೈ ತಿಂಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಅಬ್ಬರಿಸಿದ್ದ ಮಳೆರಾಯ ಆಗಸ್ಟ್ ತಿಂಗಳಲ್ಲಿ ಪತ್ತೆಯೇ ಇಲ್ಲದಂತಾಗಿದ್ದ. ಇನ್ನು ಕೆಲವೆಡೆ ತುಂತುರು ಮಳೆ ಕಂಡು ಬಂದಿತ್ತು.
ಇದನ್ನೂ ಓದಿ: ಇಂದು ಶ್ರಾವಣ ಹುಣ್ಣಿಮೆ-ಈ ರಾಶಿಯ ಮೇಲಿರಲಿದೆ ಗಣಪತಿ ಅನುಗ್ರಹ: ಚಿನ್ನ-ಹಣ ಹುಡುಕಿ ಬರುತ್ತೆ
ಸದ್ಯ ಭಾರತೀಯ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ಅದರ ಮುನ್ಸೂಚನೆ ಪ್ರಕಾರ, ಸೆಪ್ಟಂಬರ್ 3ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಭಾರೀ ಮಳೆ ಜೊತೆ ಗಾಳಿಯ ತೀವ್ರತೆ ಹೆಚ್ಚಿರಲಿದೆ ಎಂದು ಹೇಳಿದೆ.
ಇನ್ನೊಂದೆಡೆ ಉತ್ತರ ಒಳನಾಡಿಗೂ ಮುಂಗಾರು ಪ್ರವೇಶಕ್ಕೆ ದಿನ ಫಿಕ್ಸ್ ಆದಂತಿದೆ. ಆಗಸ್ಟ್ 31ರಿಂದ ನಾಲ್ಕು ದಿನಗಳ ಕಾಲ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಕೊಪ್ಪಳ, ಗದಗ, ಬೀದರ್, ಯಾದಗಿರಿ, ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ವ್ಯಾಪಲ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಳೆ ಬೀಳುವ ನಿರೀಕ್ಷೆಯ ಸುದ್ದಿ ತಿಳಿದ ರೈತರು ಸಂತಸದಲ್ಲಿದ್ದಾರೆ.
ಇದನ್ನೂ ಓದಿ: ವೃತ್ತಿಜೀವನದಲ್ಲಿ ಕೇವಲ 2 ಪಂದ್ಯ ಆಡಿದ ಕ್ರಿಕೆಟಿಗನಿಗೆ ಏಷ್ಯಾಕಪ್ ತಂಡದಲ್ಲಿ ಅವಕಾಶ ಕೊಟ್ಟ ಸಮಿತಿ
ಇನ್ನೊಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗಲಿದೆ. ಇದರ ಜೊತೆಗೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ, ರಾಮನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ದಾವಣಗೆರೆ, ವಿಜಯನಗರ, ಬಳ್ಳಾರಿ, ತುಮಕೂರು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಬೀಳುವ ಸಂಭವವಿದೆ ಎಂದು ಇಲಾಖೆ ಸೂಚಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.