ಇಂದಿನಿಂದ 4 ದಿನಗಳ ಕಾಲ ಈ ರಾಜ್ಯಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ ಘೋಷಿಸುವ ಸಾಧ್ಯತೆ!

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಇಂದಿನಿಂದ ಜುಲೈ 25 ರವರೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಜುಲೈ 26 ರವರೆಗೆ ಮತ್ತು ಪಂಜಾಬ್‌ನಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಸಿಡಿಲು ಸಹಿತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಜುಲೈ 26 ರವರೆಗೆ ಮತ್ತು ಹರಿಯಾಣದಲ್ಲಿ ಜುಲೈ 25 ರವರೆಗೆ ಮಳೆಯಾಗುವ ಮುನ್ಸೂಚನೆ ಇದೆ.  

Written by - Bhavishya Shetty | Last Updated : Jul 23, 2022, 09:58 AM IST
  • ಹಿಮಾಚಲ ಪ್ರದೇಶದಲ್ಲಿ ಇಂದಿನಿಂದ ಜುಲೈ 25 ರವರೆಗೆ ಭಾರೀ ಮಳೆ ಸಾಧ್ಯತೆʼʼ
  • ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಿದ ಹವಾಮಾನ ಇಲಾಖೆ
  • ಹಲವೆಡೆ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಸೃಷ್ಟಿ
ಇಂದಿನಿಂದ 4 ದಿನಗಳ ಕಾಲ ಈ ರಾಜ್ಯಗಳಲ್ಲಿ ಭಾರೀ ಮಳೆ: ಶಾಲೆಗಳಿಗೆ ರಜೆ ಘೋಷಿಸುವ ಸಾಧ್ಯತೆ!  title=
Monsoon Rain

ದೇಶದ ವಿವಿಧ ಭಾಗಗಳಲ್ಲಿ ಮುಂಗಾರು ಮಳೆ ಸುರಿಯುತ್ತಿದೆ. ಹಲವೆಡೆ ಭಾರಿ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿಗಳೂ ಸೃಷ್ಟಿಯಾಗಿದೆ. ಇನ್ನು, ಬಿಸಿಲಿನ ತಾಪದಿಂದ ಮುಕ್ತಿ ಹಾಗೂ ಭತ್ತದ ಬೆಳೆಗೆ ನೀರು ಲಭ್ಯವಾಗಿರುವುದರಿಂದ ಜನರು ಸಂತಸಗೊಂಡಿದ್ದಾರೆ. ಆದರೆ ಹವಾಮಾನ ಇಲಾಖೆ ಇಂದು ಮುಂದಿನ ಕೆಲ ದಿನಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ. ಈ ರಾಜ್ಯಗಳಲ್ಲಿ ಮಳೆಯಾಗಲಿದ್ದು, ಎಚ್ಚರಿಕೆ ವಹಿಸುವಂತೆ ಸೂಚಿಸಿದೆ. 

ಇದನ್ನೂ ಓದಿ: Viral News: ‘ಹುಂಜ’ದ ಆತ್ಮಶಾಂತಿಗೋಸ್ಕರ ತಿಥಿ; 500 ಜನರಿಗೆ ಊಟ..!

ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಹಿಮಾಚಲ ಪ್ರದೇಶದಲ್ಲಿ ಇಂದಿನಿಂದ ಜುಲೈ 25 ರವರೆಗೆ, ಜಮ್ಮು ಮತ್ತು ಕಾಶ್ಮೀರದಲ್ಲಿ ಜುಲೈ 26 ರವರೆಗೆ ಮತ್ತು ಪಂಜಾಬ್‌ನಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರಾಖಂಡದಲ್ಲಿ ಸಿಡಿಲು ಸಹಿತ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಸ್ಥಾನದಲ್ಲಿ ಜುಲೈ 26 ರವರೆಗೆ ಮತ್ತು ಹರಿಯಾಣದಲ್ಲಿ ಜುಲೈ 25 ರವರೆಗೆ ಮಳೆಯಾಗುವ ಮುನ್ಸೂಚನೆ ಇದೆ.

ಹವಾಮಾನ ಇಲಾಖೆ (IMD) ಪ್ರಕಾರ, ಮುಂದಿನ 3-4 ದಿನಗಳ ಕಾಲ ದೇಶದ ಈಶಾನ್ಯ ಮತ್ತು ವಾಯುವ್ಯ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಜರಾತಿನಲ್ಲಿ ಮತ್ತೆ ಭಾರೀ ಮಳೆಯಾಗಲಿದ್ದು, ಪ್ರವಾಹದ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಚಂಡೀಗಢ, ಹಿಮಾಚಲ ಪ್ರದೇಶ, ಪಂಜಾಬ್, ದೆಹಲಿ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ದೆಹಲಿ ಎನ್‌ಸಿಆರ್‌ ಹವಾಮಾನದ ಬಗ್ಗೆ ತಿಳಿಯುವುದಾದರೆ, ಇಂದು ಮೋಡ ಕವಿದ ವಾತಾವರಣವಿದೆ. ಹವಾಮಾನ ಇಲಾಖೆ ಪ್ರಕಾರ, ಹಗಲಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಮಳೆಯ ಜೊತೆಗೆ ಬಲವಾದ ಗಾಳಿ ಬೀಸಲಿದೆ. ಹವಾಮಾನದ ತಾಪಮಾನವನ್ನು ಕಡಿಮೆ ಮಾಡಲಿದೆ. 

ಇದನ್ನೂ ಓದಿ: Vegetable Price: ಮತ್ತೆ ಏರಿಕೆಯಾಯ್ತ ತರಕಾರಿ ಬೆಲೆ: ಇಲ್ಲಿದೆ ನೋಡಿ ಸಂಪೂರ್ಣ ದರ ವಿವರ

ಇಂದು ದಕ್ಷಿಣ ಭಾರತದಲ್ಲೂ ಭಾರೀ ಮಳೆಯಾಗಲಿದೆ. ತಮಿಳುನಾಡು, ಕೇರಳ, ಕರ್ನಾಟಕ ಮತ್ತು ತೆಲಂಗಾಣದ ಹಲವು ಭಾಗಗಳಲ್ಲಿ ಇಂದು ಭಾರೀ ಮಳೆಯಾಗಲಿದೆ. ಬಿಹಾರ, ಒಡಿಶಾ, ಜಾರ್ಖಂಡ್, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದ್ದು, ಮುಂದಿನ 5 ದಿನಗಳ ಕಾಲ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News