ಹಿಮಾಚಲ ಪ್ರದೇಶ & ಉತ್ತರಾಖಂಡದಲ್ಲಿ ಭಾರೀ ಮಳೆ: 9 ಮಂದಿ ಸಾವು..!

ಶಿಮ್ಲಾ ಜಿಲ್ಲೆಯ ಕೋಟ್‌ಗಢ ಪ್ರದೇಶದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುಲು ಪಟ್ಟಣದಲ್ಲಿ ಭೂಕುಸಿತದಿಂದ ತಾತ್ಕಾಲಿಕ ಮನೆಗೆ ಹಾನಿಯಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

Written by - Puttaraj K Alur | Last Updated : Jul 9, 2023, 08:17 PM IST
  • ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ತತ್ತರಿಸಿ ಹೋಗಿದೆ
  • ಶಿಮ್ಲಾದ ಕೋಟ್‌ಗಢ ಪ್ರದೇಶದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವು
  • ಭೂಕುಸಿತದಿಂದ ಗಂಗಾ ನದಿಗೆ ವಾಹನ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ
ಹಿಮಾಚಲ ಪ್ರದೇಶ & ಉತ್ತರಾಖಂಡದಲ್ಲಿ ಭಾರೀ ಮಳೆ: 9 ಮಂದಿ ಸಾವು..! title=
ಭಾರೀ ಮಳೆಗೆ 9 ಮಂದಿ ಸಾವು!

ನವದೆಹಲಿ: ಭಾನುವಾರ ಸುರಿದ ಭಾರೀ ಮಳೆಯಿಂದಾಗಿ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡ ತತ್ತರಿಸಿ ಹೋಗಿದೆ. ಮಳೆಯ ರೌದ್ರಾವತಾರಕ್ಕೆ ಹಲವೆಡೆ ಭೂಕುಸಿತ ಉಂಟಾಗಿದ್ದು, ಹಲವಾರು ಮನೆಗಳಿಗೆ ಹಾನಿಯುಂಟಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ.

ಶಿಮ್ಲಾ ಜಿಲ್ಲೆಯ ಕೋಟ್‌ಗಢ ಪ್ರದೇಶದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುಲು ಪಟ್ಟಣದಲ್ಲಿ ಭೂಕುಸಿತದಿಂದ ತಾತ್ಕಾಲಿಕ ಮನೆಗೆ ಹಾನಿಯಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಂದು ಘಟನೆಯಲ್ಲಿ ಚಂಬಾದ ಕಟಿಯಾನ್ ತೆಹ್ಸಿಲ್‌ನಲ್ಲಿ ಶನಿವಾರ ರಾತ್ರಿ ಭೂಕುಸಿತದ ನಂತರ ವ್ಯಕ್ತಿಯೊಬ್ಬರು ಜೀವಂತ ಸಮಾಧಿಯಾಗಿದ್ದಾರೆ.

ಕುಲು-ಮನಾಲಿ ರಸ್ತೆಯಲ್ಲಿ ನದಿಯ ಉಬ್ಬರ ಮತ್ತು ಬಂಡೆಗಳು ಉರುಳಿಬಿದ್ದು ರಸ್ತೆ ಸಂಚಾರಕ್ಕೆ ಅಡೆತಡೆಯುಂಟಾಗಿದೆ. ಕುಲು ಮತ್ತು ಮನಾಲಿಯಿಂದ ಅಟಲ್ ಸುರಂಗ ಮತ್ತು ರೋಹ್ಟಾಂಗ್ ಕಡೆಗೆ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ 36 ಗಂಟೆಗಳಲ್ಲಿ ರಾಜ್ಯದಲ್ಲಿ 13 ಭೂಕುಸಿತಗಳು ಮತ್ತು 9 ಹಠಾತ್ ಪ್ರವಾಹಗಳು ವರದಿಯಾಗಿದ್ದು, 736 ರಸ್ತೆಗಳ ಸಂಚಾರವನ್ನು ಬಂದ್ ಮಾಡಲಾಗಿದೆ.  

ಇದನ್ನೂ ಓದಿ: Railway Station’s: ವಿಮಾನ ನಿಲ್ದಾಣಗಳನ್ನೇ ಮೀರಿಸಬಲ್ಲ ದೇಶದ ಅದ್ಭುತ ರೈಲು ನಿಲ್ದಾಣಗಳು

ತೆಹ್ರಿ ಗಡ್ವಾಲ್ ಜಿಲ್ಲೆಯಲ್ಲಿ ಭಾನುವಾರ ಭೂಕುಸಿತದಿಂದ ವಾಹನವೊಂದು ಗಂಗಾ ನದಿಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಮತ್ತು ಮೂವರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಹನದಲ್ಲಿ ಚಾಲಕ ಸೇರಿದಂತೆ 11 ಮಂದಿ ಇದ್ದರು ಎಂದು ಪೊಲೀಸರು ತಿಳಿಸಿದ್ದಾರೆ, ಈ ಪೈಕಿ ಐವರನ್ನು ರಕ್ಷಿಸಿ ಋಷಿಕೇಶದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಕೇದಾರನಾಥದಿಂದ ಋಷಿಕೇಶಕ್ಕೆ ತೆರಳುತ್ತಿದ್ದರು.

ಪ್ರತಿಕೂಲ ಹವಾಮಾನ ಹಿನ್ನೆಲೆ ಅನಗತ್ಯ ಸಂಚಾರವನ್ನು ತಪ್ಪಿಸುವಂತೆ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಜನರನ್ನು ಒತ್ತಾಯಿಸಿದ್ದಾರೆ. ಅನಾನುಕೂಲತೆಯನ್ನು ತಪ್ಪಿಸಲು ಇತ್ತೀಚಿನ ಹವಾಮಾನ ಮಾಹಿತಿಯನ್ನು ಪಡೆದ ನಂತರವೇ ರಾಜ್ಯಕ್ಕೆ ಬರುವ ಯಾತ್ರಾರ್ಥಿಗಳು ತಮ್ಮ ಪ್ರಯಾಣವನ್ನು ಯೋಜಿಸಲು ವಿನಂತಿಸಿದ್ದಾರೆ. ಯಾವುದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲು 'ರೆಡ್ ಅಲರ್ಟ್' ಮೋಡ್‌ನಲ್ಲಿ ಇರುವಂತೆ ಆಡಳಿತಕ್ಕೆ ನಿರ್ದೇಶನ ನೀಡಿರುವುದಾಗಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರವಿ, ಬಿಯಾಸ್, ಸತ್ಲುಜ್, ಚೆನಾಬ್ ಸೇರಿದಂತೆ ಪ್ರಮುಖ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಪ್ರವಾಸಿಗರು ಭಾರೀ ಮಳೆಯ ಸಮಯದಲ್ಲಿ ಪ್ರಯಾಣಿಸದಂತೆ ಮತ್ತು ನದಿ ಪಾತ್ರಗಳ ಬಳಿಗೆ ಹೋಗದಂತೆ ತಿಳಿಸಲಾಗಿದೆ. ಉಕ್ಕಿ ಹರಿಯುತ್ತಿರುವ ಬಿಯಾಸ್ ನದಿಯಿಂದಾಗಿ ಲೇಹ್-ಮನಾಲಿ ರಾಷ್ಟ್ರೀಯ ಹೆದ್ದಾರಿಯ (NH3) ಒಂದು ಭಾಗ ಕೊಚ್ಚಿಹೋಗಿದೆ ಎಂದು ANI ವರದಿ ಮಾಡಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ತಂಡವು ಭಾನುವಾರ ಕುಲು ಬಳಿಯ ಬಿಯಾಸ್ ನದಿಯ ನೀರಿನ ಮಟ್ಟ ಏರಿಕೆಯಿಂದಾಗಿ ಮನೆಗಳಲ್ಲಿ ಸಿಲುಕಿಕೊಂಡಿದ್ದ 5 ಜನರನ್ನು ಸ್ಥಳಾಂತರಿಸಲಾಗಿದೆ.

ಇದನ್ನೂ ಓದಿ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹೊಸ ರೂಪ ನೀಡಿದ ರೈಲ್ವೆ ಸಚಿವ

ಏತನ್ಮಧ್ಯೆ ಭೂಕುಸಿತಗಳು ಮತ್ತು ಹಠಾತ್ ಪ್ರವಾಹಗಳು ಶಿಮ್ಲಾ , ಸಿರ್ಮೌರ್, ಲಾಹೌಲ್ ಮತ್ತು ಸ್ಪಿತಿ, ಚಂಬಾ ಮತ್ತು ಸೋಲನ್ ಜಿಲ್ಲೆಗಳಲ್ಲಿ ಹಲವಾರು ರಸ್ತೆಗಳನ್ನು ನಿರ್ಬಂಧಿಸಿವೆ. ಯುನೆಸ್ಕೋ ಪರಂಪರೆಯ ಶಿಮ್ಲಾ ಮತ್ತು ಕಲ್ಕಾ ಹಳಿಗಳ ನಡುವಿನ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಲವೆಡೆ ಭೂಕುಸಿತ ಮತ್ತು ಮರಗಳು ಬಿದ್ದ ಕಾರಣ ರೈಲ್ವೆ ಹಳಿಯನ್ನು ನಿರ್ಬಂಧಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News