ಒಂದೂವರೆ ವರ್ಷದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ 4G ಪುನರ್ ಸಂಪರ್ಕ

ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈಸ್ಪೀಡ್ 4 ಜಿ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗುತ್ತಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.

Last Updated : Feb 5, 2021, 08:48 PM IST
  • ಕಳೆದ ವರ್ಷದಲ್ಲಿ, ಬ್ರಾಡ್ಬ್ಯಾಂಡ್ ಇಂಟರ್ನೆಟ್ ಮತ್ತು ನಿಧಾನಗತಿಯ ಮೊಬೈಲ್ ಡೇಟಾವನ್ನು ಹಂತ ಹಂತವಾಗಿ ಪುನಃಸ್ಥಾಪಿಸಲಾಯಿತು.
  • ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ, ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.
ಒಂದೂವರೆ ವರ್ಷದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ 4G ಪುನರ್ ಸಂಪರ್ಕ title=
ಸಾಂದರ್ಭಿಕ ಚಿತ್ರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಾದ್ಯಂತ ಹೈಸ್ಪೀಡ್ 4 ಜಿ ಇಂಟರ್ನೆಟ್ ಸೇವೆಗಳನ್ನು ಪುನಃಸ್ಥಾಪಿಸಲಾಗುತ್ತಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಹೇಳಿದ್ದಾರೆ.

"4 ಜಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸಂಪೂರ್ಣ ಜೆ & ಕೆಗಳಲ್ಲಿ ಮರುಸ್ಥಾಪಿಸಲಾಗುತ್ತಿದೆ" ಎಂದು ಜಮ್ಮು ಮತ್ತು ಕಾಶ್ಮೀರ (Jammu and Kashmir) ಆಡಳಿತ ವಕ್ತಾರ ರೋಹಿತ್ ಕನ್ಸಾಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಶ್ಮೀರದಲ್ಲಿ 370 ನೇ ವಿಧಿ ಪುನಃಸ್ಥಾಪನೆಗಾಗಿ ಒಂದಾದ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ

ಜಮ್ಮು ಮತ್ತು ಕಾಶ್ಮೀರವನ್ನು 2019 ರ ಆಗಸ್ಟ್ 5 ರಂದು ವಿಶ್ವದದಲ್ಲೇ ಅತಿ ಧೀರ್ಘ ಕಾಲ ಪ್ರಜಾಪ್ರಭುತ್ವ ದೇಶವೊಂದರ ಪ್ರದೇಶದಲ್ಲಿ ಇಂಟರ್ನೆಟ್ ನ್ನು ಸ್ಥಗಿತಗೊಳಿಸಲಾಗಿತ್ತು. ಸಂವಿಧಾನದಲ್ಲಿ ಪಟ್ಟಿ ಮಾಡಲಾದ ತನ್ನ ದಶಕಗಳಷ್ಟು ಹಳೆಯ ಸ್ವಾಯತ್ತತೆಯನ್ನು ರದ್ದುಗೊಳಿಸುವ ಯೋಜನೆಯನ್ನು ಕೇಂದ್ರ ಘೋಷಿಸಿದ ನಂತರ ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು.

ನಂತರದ ದಿನಗಳಲ್ಲಿ, ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ, ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು ಮತ್ತು ಮೂವರು ಮಾಜಿ ಮುಖ್ಯಮಂತ್ರಿಗಳು ಸೇರಿದಂತೆ ಹಲವಾರು ರಾಜಕಾರಣಿಗಳನ್ನು ಬಂಧನಕ್ಕೆ ಒಳಗಾಗಿದ್ದರು.

ಇದನ್ನೂ ಓದಿ: 370 ನೇ ವಿಧಿ ರದ್ದು: ಕಾಶ್ಮೀರದಲ್ಲಿ ಶೇ 54 ರಷ್ಟು ಭಯೋತ್ಪಾದಕ ಘಟನೆಗಳು ಇಳಿಕೆ- ಕೇಂದ್ರ

ಕಳೆದ ವರ್ಷದಲ್ಲಿ, ಬ್ರಾಡ್ಬ್ಯಾಂಡ್ ಇಂಟರ್ನೆಟ್ ಮತ್ತು ನಿಧಾನಗತಿಯ ಮೊಬೈಲ್ ಡೇಟಾವನ್ನು ಹಂತ ಹಂತವಾಗಿ ಪುನಃಸ್ಥಾಪಿಸಲಾಯಿತು.ತಪ್ಪು ಮಾಹಿತಿ ಹರಡುವುದನ್ನು ಮತ್ತು ಭಯೋತ್ಪಾದಕರು ನೆಟ್‌ವರ್ಕ್‌ಗಳನ್ನು ದುರುಪಯೋಗಪಡಿಸಿಕೊಳ್ಳುವುದನ್ನು ತಡೆಯಲು ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಕಡಿತಗೊಳಿಸಲಾಗಿದೆ ಎಂದು ಆಡಳಿತ ತಿಳಿಸಿದೆ.ಆದಾಗ್ಯೂ, ಈ ನಿರ್ಬಂಧಗಳಿಂದಾಗಿ ಲಕ್ಷಾಂತರ ಉದ್ಯೋಗಗಳು ಮತ್ತು ಆರ್ಥಿಕತೆಗೆ ನಷ್ಟವಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News