'ಹಿಜಾಬ್ ದೇಶದ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಸ್ವಾತಂತ್ರ್ಯದ ವಿಷಯ'

ಹಿಜಾಬ್ ದೇಶದ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಶನಿವಾರ ಹೇಳಿದ್ದಾರೆ. 

Written by - Zee Kannada News Desk | Last Updated : Feb 13, 2022, 12:55 AM IST
  • ಕರ್ನಾಟಕ ಸರ್ಕಾರವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅನ್ನು ನಿಷೇಧಿಸಿರುವುದು ದೇಶದಾದ್ಯಂತ ಭಾರಿ ಕೋಲಾಹಲ ಮತ್ತು ಪ್ರತಿಭಟನೆಗೆ ಕಾರಣವಾಗಿದೆ.
'ಹಿಜಾಬ್ ದೇಶದ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಸ್ವಾತಂತ್ರ್ಯದ ವಿಷಯ' title=

ನವದೆಹಲಿ: ಹಿಜಾಬ್ ದೇಶದ ಪ್ರತಿಯೊಬ್ಬ ನಾಗರಿಕನ ವೈಯಕ್ತಿಕ ಸ್ವಾತಂತ್ರ್ಯದ ವಿಷಯವಾಗಿದೆ ಎಂದು ಮಹಾರಾಷ್ಟ್ರ ಗೃಹ ಸಚಿವ ದಿಲೀಪ್ ವಾಲ್ಸೆ ಪಾಟೀಲ್ ಶನಿವಾರ ಹೇಳಿದ್ದಾರೆ. 

ಕರ್ನಾಟಕ ಸರ್ಕಾರವು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಅನ್ನು ನಿಷೇಧಿಸಿರುವುದು ದೇಶದಾದ್ಯಂತ ಭಾರಿ ಕೋಲಾಹಲ ಮತ್ತು ಪ್ರತಿಭಟನೆಗೆ ಕಾರಣವಾಗಿದೆ.ಈ ಹಿನ್ನಲೆಯಲ್ಲಿ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಗೃಹ ಸಚಿವ ಪಾಟೀಲ್, “ಹಿಜಾಬ್ ಧರಿಸುವುದು ವೈಯಕ್ತಿಕ ಆಯ್ಕೆಯಾಗಿರಬೇಕು.ಯಾವುದನ್ನು ಧರಿಸಬೇಕು ಮತ್ತು ಯಾವುದನ್ನು ಧರಿಸಬಾರದು ಎಂಬುದನ್ನು ಆಯ್ಕೆ ಮಾಡುವ ಹಕ್ಕು ವ್ಯಕ್ತಿಗೆ ಇದೆ ಎಂದು ಹೇಳಿದರು.

ಇದನ್ನೂ ಓದಿ-10 Rupee Coin: 10 ರೂಪಾಯಿಯ ಯಾವ ನಾಣ್ಯ ಮಾನ್ಯವಾಗಿದೆ? ಗೊಂದಲ ನಿವಾರಿಸಿದ ಸರ್ಕಾರ

ಮುಂಬೈನ ಕಾಲೇಜೊಂದು ತನ್ನ ನಿಯಮಾವಳಿಗಳಲ್ಲಿ 'ಹಿಜಾಬ್, ಘುಂಗಟ್, ಸ್ಕಾರ್ಫ್ ಇತ್ಯಾದಿಗಳನ್ನು ಕಾಲೇಜು ಆವರಣದೊಳಗೆ ಅನುಮತಿಸಲಾಗುವುದಿಲ್ಲ' ಎಂದು ಬರೆದು ವಿವಾದಕ್ಕೆ ಒಳಗಾಗಿದೆ.ಆದರೆ, ಕಾಲೇಜು ಆಡಳಿತ ಮಂಡಳಿ ಆರೋಪವನ್ನು ತಳ್ಳಿಹಾಕಿದ್ದು, ತಪ್ಪಾಗಿ ಅರ್ಥೈಸಲಾಗುತ್ತಿದೆ ಎಂದು ಹೇಳಿದ್ದಾರೆ. ಹಿಜಾಬ್ ವಿಚಾರದಲ್ಲಿ ಹೋರಾಟ ಮಾಡುವ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವರು ಈ ವಿಚಾರವಾಗಿ ಹೇಳಿದ್ದಾರೆ.

ಇದನ್ನೂ ಓದಿ-#JamesTeaser: ದೊಡ್ಮನೆ ಅಭಿಮಾನಿಗಳಿಗೆ ಬಿಗ್ ಗಿಫ್ಟ್; ಬಹುನಿರೀಕ್ಷಿತ 'ಜೇಮ್ಸ್' ಚಿತ್ರದ ಟೀಸರ್ ರಿಲೀಸ್

ಏನಿದು ಹಿಜಾಬ್ ವಿವಾದ?

ಕರ್ನಾಟಕದಲ್ಲಿ ಹಿಜಾಬ್ ವಿವಾದವು ಉಡುಪಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಮುಸ್ಲಿಂ ಶಾಲಾ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದರಿಂದ ಅವರನ್ನು ಪ್ರವೇಶಿಸಲು ಅನುಮತಿಸಲಿಲ್ಲ.ಅಂದಿನಿಂದ, ಮುಸ್ಲಿಂ ಹುಡುಗಿಯರು ಹಿಜಾಬ್ ಧರಿಸಿ ತರಗತಿಗಳಿಗೆ ಬಂದ ಅನೇಕ ಘಟನೆಗಳು ಕರ್ನಾಟಕದಾದ್ಯಂತ ನಡೆದಿವೆ ಇದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿಗಳು ಪ್ರತಿಭಟನೆಯ ಸಂಕೇತವಾಗಿ ಕೇಸರಿ ಶಾಲುಗಳನ್ನು ಧರಿಸಲು ಪ್ರಾರಂಭಿಸಿದರು. ಇದರಿಂದಾಗಿ ಈ ವಾರದ ಆರಂಭದಲ್ಲಿ ಘರ್ಷಣೆಗಳು ಹಿಂಸಾಚಾರಕ್ಕೆ ತಿರುಗಿದವು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News