ನವದೆಹಲಿ : ಹಿಮಾಚಲ ಪ್ರದೇಶದ ಜನತೆಗೆ ನೀಡಿರುವ ಎಲ್ಲಾ ಭರವಸೆಗಳನ್ನು ತಮ್ಮ ಪಕ್ಷ ಈಡೇರಿಸಲಿದೆ ಎಂದು ಶುಕ್ರವಾರ ಪುನರುಚ್ಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 68 ಸ್ಥಾನಗಳ ವಿಧಾನಸಭೆಗೆ ಮತದಾನ ಆರಂಭಗೊಂಡಿದ್ದು, 'ಅಭಿವೃದ್ಧಿ ಭವಿಷ್ಯ'ಕ್ಕಾಗಿ ಮತ ಚಲಾಯಿಸುವಂತೆ ಮತದಾರರನ್ನು ಒತ್ತಾಯಿಸಿದ್ದಾರೆ. ಅಲ್ಲದೆ, "ಹಿಮಾಚಲವು OPS (ಹಳೆಯ ಪಿಂಚಣಿ ಯೋಜನೆ) ಗೆ ಮತ ಹಾಕುತ್ತದೆ. ಹಿಮಾಚಲವು ಉದ್ಯೋಗಕ್ಕಾಗಿ ಮತ ಹಾಕುತ್ತದೆ. ಹಿಮಾಚಲವು ʼಹರ್ ಘರ್ ಲಕ್ಷ್ಮಿʼಗೆ ಮತ ಹಾಕುತ್ತದೆ. ಬನ್ನಿ, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಮತ್ತು ಹಿಮಾಚಲದ ಪ್ರಗತಿ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ನಿಮ್ಮ ಅಮೂಲ್ಯ ಕೊಡುಗೆ ನೀಡಿ," ಎಂದು ರಾಹುಲ್ ಗಾಂಧಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ರಾಹುಲ್ ಗಾಂಧಿ ಪ್ರಸ್ತುತ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಶನಿವಾರ ಬಿಗಿ ಭದ್ರತೆಯ ನಡುವೆ ಬೆಳಗ್ಗೆ 8 ಗಂಟೆಗೆ ಮತದಾನ ಆರಂಭವಾಗಿದೆ. ಇಂದು ಸಂಜೆ 5 ಗಂಟೆಯವರೆಗೆ ಮತದಾನ ಮಾಡಲಿರುವ ಒಟ್ಟು 55,92,828 ಮತದಾರರು ಕಣದಲ್ಲಿರುವ 412 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ.
ಇದನ್ನೂ ಓದಿ: Shocking: ಯೂಟ್ಯೂಬ್ ವಿಡಿಯೋ ನೋಡಿ ಜ್ಯೂಸ್ ಮಾಡಿ ಸೇವಿಸಿದ ವ್ಯಕ್ತಿ ಸಾವು..!
ಒಟ್ಟು ಮತದಾರರ ಪೈಕಿ 27,37,845 ಮಹಿಳೆಯರು, 28,54,945 ಪುರುಷರು ಮತ್ತು 38 ತೃತೀಯಲಿಂಗಿಗಳು. ಈ ಬಾರಿ ಮಹಿಳಾ ಅಭ್ಯರ್ಥಿಗಳ ಪ್ರಾತಿನಿಧ್ಯ 24 ಆಗಿದೆ. ರಾಜಕೀಯ ಪಕ್ಷಗಳ ಹೈವೋಲ್ಟೇಜ್ ಪ್ರಚಾರವು ನವೆಂಬರ್ 10 ರಂದು ಕೊನೆಗೊಂಡಿದೆ. 1982 ರಿಂದ ಪ್ರತಿ ಐದು ವರ್ಷಗಳಿಗೊಮ್ಮೆ ಪರ್ಯಾಯ ಪಕ್ಷ ಅಧಿಕಾರಕ್ಕೆ ಬರುವ ಪ್ರವೃತ್ತಿಯನ್ನು ಬಿಟ್ಟು ಅಧಿಕಾರವನ್ನು ಉಳಿಸಿಕೊಳ್ಳಲು ನೋಡುತ್ತಿರುವ ರಾಜ್ಯದಲ್ಲಿ ಆಡಳಿತಾರೂಢ ಬಿಜೆಪಿ ತನ್ನ 10 ಭರವಸೆಗಳ ಪ್ರಣಾಳಿಕೆಯನ್ನು ಪ್ರಕಟಿಸಿದೆ.
ಆಮ್ ಆದ್ಮಿ ಪಕ್ಷವು ರಾಜ್ಯದಲ್ಲಿ ಛಾಪು ಮೂಡಿಸಲು ಮತ್ತು ಎಲ್ಲಾ 68 ಸ್ಥಾನಗಳಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲು ಪ್ರಯತ್ನಿಸುತ್ತಿದೆ. ಈ ಮೂರು ಪಕ್ಷಗಳಲ್ಲದೆ ಬಹುಜನ ಸಮಾಜ ಪಕ್ಷ (ಬಿಎಸ್ಪಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ), ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಮತ್ತು ರಾಷ್ಟ್ರೀಯ ದೇವಭೂಮಿ ಪಕ್ಷ (ಆರ್ಡಿಪಿ) ಪಕ್ಷಗಳು ಕಣದಲ್ಲಿವೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.