ಹೈದರಾಬಾದ್ (ತೆಲಂಗಾಣ): ತೆಲಂಗಾಣದಲ್ಲಿ ಮಹಿಳಾ ಪಶುವೈದ್ಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದ್ದ ನಾಲ್ವರು ಆರೋಪಿಗಳು ಇಂದು ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದರು ಸಂತ್ರಸ್ತೆಯ ತಂದೆ, "ಈಗ ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಕ್ಕಿದೆ" ಎಂದರಲ್ಲದೆ ಇದಕ್ಕಾಗಿ ಪೊಲೀಸರಿಗೆ ಕೃತಜ್ಞತೆ ಸಲ್ಲಿಸಿದರು.
"ನನ್ನ ಮಗಳು ನಮ್ಮನ್ನಗಲಿ 10 ದಿನಗಳು ಕಳೆದಿವೆ. ಈಗ ಅವರ ಆತ್ಮಕ್ಕೆ ಶಾಂತಿ ದೊರೆತಿದೆ. ಇದಕ್ಕಾಗಿ ನಾನು ಪೊಲೀಸ್ ಮತ್ತು ಸರ್ಕಾರಕ್ಕೆ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ನನ್ನ ಮಗಳ ಸಾವಿಗೆ ಇಂದು ನ್ಯಾಯ ಸಿಕ್ಕಿದೆ" ಎಂದು ಅವರು ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದರು.
ಹೈದರಾಬಾದ್ನ ಶಾದ್ನಗರದ ಸಮೀಪವಿರುವ ಚಟಾನ್ ಪಲ್ಲಿ ಬ್ರಿಡ್ಜ್ ಬಳಿ ಹೈದರಾಬಾದ್ನ ಶಾದ್ನಗರದಲ್ಲಿ ಆರೋಪಿಗಳನ್ನು ಸ್ಥಳ ಪರಿಶೀಲನೆಗಾಗಿ ಅತ್ಯಾಚಾರವೆಸಗಿದ್ದ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಈ ವೇಳೆ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳು ಪೊಲೀಸರ ಮೇಲೆ ಕಲ್ಲು ತೂರಾಟವನ್ನು ನಡೆಸಿದ್ದರು. ಈ ಸಂದರ್ಭದಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ ಎನ್ನಲಾಗಿದೆ.
ಹೈದರಾಬಾದ್ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳ ಎನ್ಕೌಂಟರ್
ಹೈದರಾಬಾದ್ನ ಶಾದ್ನಗರದಲ್ಲಿ ಇಂದು ಬೆಳಿಗ್ಗೆ 3 ರಿಂದ 6 ಗಂಟೆ ನಡುವೆ ನಡೆದ ಎನ್ಕೌಂಟರ್ನಲ್ಲಿ "ಆರೋಪಿಗಳಾದ ಮೊಹಮ್ಮದ್ ಆರಿಫ್, ನವೀನ್, ಶಿವ ಮತ್ತು ಚೆನ್ನಕೇಶವುಲು ಹತರಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು" ಎಂದು ಸೈಬರಾಬಾದ್ ಪೊಲೀಸ್ ಆಯುಕ್ತ ವಿಶ್ವನಾಥ್ ಸಜ್ಜನರ್ ಹೇಳಿದರು.
ಹೈದರಾಬಾದ್ನ ಶಾದ್ನಗರದಲ್ಲಿ ನವೆಂಬರ್ 28 ರಂದು ಸರ್ಕಾರಿ ಆಸ್ಪತ್ರೆಯಲ್ಲಿ ಸಹಾಯಕ ಪಶುವೈದ್ಯರಾಗಿ ಕೆಲಸ ಮಾಡುತ್ತಿದ್ದ 26
ವರ್ಷದ ಯುವತಿ ಸುಟ್ಟ ದೇಹ ಪತ್ತೆಯಾಗಿತ್ತು. ನವೆಂಬರ್ 29 ರಂದು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ನಾಲ್ವರು ಆರೋಪಿಗಳು ಹೈದರಾಬಾದ್ನ ಚೆರ್ಲಪಲ್ಲಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.