ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸ್ಪೀಕರ್ ಸುಮಿತ್ರಾ ಮಹಾಜನ್ ಸ್ಪಷ್ಟನೆ

ಇಂದೋರ್ ನಿಂದ 1989ರಿಂದ ಸತತವಾಗಿ ಎಂಟು ಬಾರಿ ಸಂಸದರಾಗಿ ಆಯ್ಕೆ ಆಗಿರುವ ಸುಮಿತ್ರಾ ಮಹಾಜನ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

Last Updated : Apr 5, 2019, 02:48 PM IST
ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸ್ಪೀಕರ್ ಸುಮಿತ್ರಾ ಮಹಾಜನ್ ಸ್ಪಷ್ಟನೆ title=

ನವದೆಹಲಿ: ಲೋಕಸಭಾ ಸ್ಪೀಕರ್ ಮತ್ತು ಇಂದೋರ್ ಬಿಜೆಪಿ ಸಂಸದೆ ಸುಮಿತ್ರಾ ಮಹಾಜನ್ ಅವರು 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶುಕ್ರವಾರ ದೃಢಪಡಿಸಿದ್ದಾರೆ.

ಸುಮಿತ್ರಾ ಮಹಾಜನ್ ಅವರಿಗೆ 76 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವರೇ ಎಂಬುದರ ಬಗ್ಗೆ ಭಾರೀ ಕುತೂಹಲ ವ್ಯಕ್ತವಾಗಿತ್ತು. ಇಂದೋರ್ ನಿಂದ 1989ರಿಂದ ಸತತವಾಗಿ ಎಂಟು ಬಾರಿ ಸಂಸದರಾಗಿ ಆಯ್ಕೆ ಆಗಿರುವ ಸುಮಿತ್ರಾ ಮಹಾಜನ್ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದಿದ್ದಾರೆ.

ಇಳಿವಯಸ್ಸಿನಿಂದಾಗಿ ಪಕ್ಷದ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ ಹಾಗೂ ಮುರುಳಿ ಮನೋಹರ್ ಜೋಷಿಯವರು ಹಿಂದೆ ಸರಿದ ಕಾರಣದಿಂದಾಗಿ ಬಿಜೆಪಿಯು ಚುನಾವಣೆಯಲ್ಲಿ ಸ್ಪರ್ಧಿಸಲು ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿಪಡಿಸಲು ನಿರ್ಧರಿಸಿದೆ. 

Trending News