ನವದೆಹಲಿ : ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಸೋಮವಾರ (ಅಕ್ಟೋಬರ್ 31) ತಮ್ಮ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಪುಣ್ಯತಿಥಿಯನ್ನು ಆಚರಿಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಮತ್ತು "ದೇಶಕ್ಕಾಗಿ ನೀವು ಮಾಡಿದ ತ್ಯಾಗವನ್ನು ವ್ಯರ್ಥವಾಗಿ ಬಿಡುವುದಿಲ್ಲ" ಎಂದು ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, "ಅಜ್ಜಿ, ನಾನು ನಿಮ್ಮ ಪ್ರೀತಿ ಮತ್ತು ಮೌಲ್ಯ ಎರಡನ್ನೂ ನನ್ನ ಹೃದಯದಲ್ಲಿ ಇರಿಸಿದ್ದೇನೆ. ನಿಮ್ಮ ತ್ಯಾಗ ಮತ್ತು ಭಾರತವನ್ನು ಒಡೆಯಲು ನಾನು ಬಿಡುವುದಿಲ್ಲ" ಎಂದು ಹೇಳಿದ್ದಾರೆ. ಇನ್ನು ತೆಲಂಗಾಣದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಅವರು ಇಂದಿರಾ ಗಾಂಧಿ ಅವರಿಗೆ ರಾಹುಲ್ ಗಾಂಧಿ ಪುಷ್ಪ ನಮನ ಸಲ್ಲಿಸಿದರು. ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದಂದು ರಾಹುಲ್ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು.
ಇದನ್ನೂ ಓದಿ: SHOCKING!.. ವಿರಾಟ್ ಕೊಹ್ಲಿ ಪ್ರೈವೇಟ್ ರೂಮ್ ವಿಡಿಯೋ ಲೀಕ್ : ಬೇಸರ ವ್ಯಕ್ತಪಡಿಸಿದ ಕಿಂಗ್..
ಏತನ್ಮಧ್ಯೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಪಕ್ಷದ ಇತರ ಹಿರಿಯ ನಾಯಕರು ಇಂದಿರಾ ಗಾಂಧಿ ಅವರ ದೆಹಲಿಯ ಶಕ್ತಿ ಸ್ಥಳದ ಇಂದಿರಾ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು. ʼಭಾರತದ ಮೊದಲ ಮಹಿಳಾ ಪ್ರಧಾನಿ ಇಂದಿರಾಗಾಂಧಿ ಜಿ ಅವರಿಗೆ ಅವರ ಪುಣ್ಯತಿಥಿಯ ದಿನದಂದು ನನ್ನ ನಮನಗಳು. ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡುವಲ್ಲಿ ಇಂದಿರಾಜೀಯವರ ಕೊಡುಗೆ ಅನುಪಮವಾಗಿದೆʼ ಎಂದು ಕೆಪಿಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಸಹ ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ