'ಜನರು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಂಡರೆ ಪ್ರಜಾಪ್ರಭುತ್ವದ ಉಳಿವು ಅಪಾಯದಲ್ಲಿದೆ ಎಂದರ್ಥ'

Written by - Zee Kannada News Desk | Last Updated : Aug 20, 2022, 07:17 PM IST
  • ಒಂದೂವರೆ ವರ್ಷಗಳ ಅಧಿಕಾರಾವಧಿಯಲ್ಲಿ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡುವುದು ಮತ್ತು ಮೂಲಭೂತ ಸೌಕರ್ಯಗಳನ್ನು ಸುಧಾರಿಸುವುದು ಅವರ ಕಾರ್ಯಸೂಚಿಯ ಮೇಲಿರುವ ಎರಡು ವಿಷಯಗಳಾಗಿವೆ ಎಂದು ಸಿಜೆಐ ಹೇಳಿದರು.
'ಜನರು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಂಡರೆ ಪ್ರಜಾಪ್ರಭುತ್ವದ ಉಳಿವು ಅಪಾಯದಲ್ಲಿದೆ ಎಂದರ್ಥ' title=

ನವದೆಹಲಿ: ಜನರು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಂಡರೆ ಮತ್ತು ನ್ಯಾಯಾಂಗ ಕುಸಿದರೆ, ಪ್ರಜಾಪ್ರಭುತ್ವದ ಉಳಿವು ಅಪಾಯದಲ್ಲಿದೆ ಎಂದರ್ಥ ಎಂದು ಮುಂದಿನ ವಾರ ನಿವೃತ್ತಿಯಾಗಲಿರುವ ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಆಂಧ್ರಪ್ರದೇಶ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ, ಹೈಕೋರ್ಟ್ ಮತ್ತು ಇತರ ನ್ಯಾಯಾಲಯಗಳ ನ್ಯಾಯಾಧೀಶರರ ಸಮ್ಮುಖದಲ್ಲಿ ವಿಜಯವಾಡ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

'ಮುಖ್ಯ ನ್ಯಾಯಮೂರ್ತಿಯಾಗಿದ್ದ ಅವಧಿಯಲ್ಲಿ ಖಾಲಿ ಇರುವ ನ್ಯಾಯಮೂರ್ತಿಗಳ ಹುದ್ದೆಗಳ ಭರ್ತಿಗೆ ಒತ್ತು ನೀಡಿದ್ದು, 250ಕ್ಕೂ ಹೆಚ್ಚು ಹೈಕೋರ್ಟ್ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ.ಒಂದೂವರೆ ವರ್ಷಗಳ ಅಧಿಕಾರಾವಧಿಯಲ್ಲಿ ನ್ಯಾಯಾಧೀಶರ ಹುದ್ದೆಗಳನ್ನು ಭರ್ತಿ ಮಾಡುವುದು ಮತ್ತು ಮೂಲಭೂತ ಸೌಕರ್ಯಗಳನ್ನು ಸುಧಾರಿಸುವುದು ಅವರ ಕಾರ್ಯಸೂಚಿಯ ಮೇಲಿರುವ ಎರಡು ವಿಷಯಗಳಾಗಿವೆ ಎಂದು ಹೇಳಿದರು.

ಇದನ್ನೂ ಓದಿ : ಅಥಣಿಯಲ್ಲಿ ಭೀಕರ ಅಪಘಾತ ಪ್ರಕರಣ : ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ ಭೇಟಿ

ತಾವು ಸಿಜೆಐ ಆಗಿದ್ದ ಅವಧಿಯಲ್ಲಿ 250 ಹೈಕೋರ್ಟ್ ನ್ಯಾಯಾಧೀಶರನ್ನು ನೇಮಿಸಲಾಗಿತ್ತು. ಸುಪ್ರೀಂ ಕೋರ್ಟ್‌ಗೆ 12 ನ್ಯಾಯಾಧೀಶರು ಮತ್ತು ವಿವಿಧ ರಾಜ್ಯ ಹೈಕೋರ್ಟ್‌ಗಳ 15 ಮುಖ್ಯ ನ್ಯಾಯಮೂರ್ತಿಗಳನ್ನು ಸಹ ನೇಮಿಸಲಾಯಿತು. ಸಮಾಜದ ಎಲ್ಲಾ ವರ್ಗಗಳು, ವಿಶೇಷವಾಗಿ ಮಹಿಳೆಯರು ಮತ್ತು ಹಿಂದುಳಿದ ವರ್ಗಗಳಿಗೆ ನ್ಯಾಯಾಂಗದಲ್ಲಿ ಸರಿಯಾದ ಪ್ರಾತಿನಿಧ್ಯ ಸಿಗುವುದನ್ನು ಅವರು ಖಚಿತಪಡಿಸಿರುವುದಾಗಿ ಹೇಳಿದ್ದಾರೆ.

ದೇಶಾದ್ಯಂತ ಖಾಲಿ ಇರುವ ನ್ಯಾಯಾಧೀಶರ ಹುದ್ದೆಗಳ ಭರ್ತಿ ಹಾಗೂ ನ್ಯಾಯಾಲಯಗಳಲ್ಲಿ ಮೂಲಸೌಕರ್ಯಗಳನ್ನು ಸುಧಾರಿಸುವ ಕುರಿತು ಪ್ರಧಾನಿ, ಕೇಂದ್ರ ಸಚಿವರು, ಮುಖ್ಯಮಂತ್ರಿಗಳು ಮತ್ತು ಮುಖ್ಯ ನ್ಯಾಯಮೂರ್ತಿಗಳ ಬಳಿ ವಿಷಯ ಪ್ರಸ್ತಾಪಿಸಿದ್ದೇನೆ.ಕೆಲವು ರಾಜ್ಯಗಳು ಎದುರಿಸುತ್ತಿರುವ ಆರ್ಥಿಕ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ನ್ಯಾಯಾಲಯದ ಕಟ್ಟಡಗಳ ನಿರ್ಮಾಣಕ್ಕೆ ಕೇಂದ್ರವು ರಾಜ್ಯಕ್ಕೆ ಹಣವನ್ನು ನೀಡಬೇಕೆಂದು ಅವರು ಬಯಸಿದ್ದರು ಎಂದು ಅವರು ಹೇಳಿದರು.

ಇದನ್ನೂ ಓದಿ : ವ್ಯಕ್ತಿ ಮಾಡಿದ ತಪ್ಪಿನಿಂದ ಬಾಂಬ್ ನಂತೆ ಬ್ಲಾಸ್ಟ್ ಆಯ್ತು Xiaomi ಫೋನ್: ಈ ತಪ್ಪನ್ನು ನೀವು ಮಾಡ್ತಿದ್ದೀರಾ?

'ಕೇಂದ್ರದಿಂದ ಸ್ವಲ್ಪ ವಿರೋಧವಿದ್ದರೂ, ಕೆಲವು ಮುಖ್ಯಮಂತ್ರಿಗಳು, ವಿಶೇಷವಾಗಿ ಪಶ್ಚಿಮ ಬಂಗಾಳ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಕೆಲವು ಮುಖ್ಯಮಂತ್ರಿಗಳು ನನ್ನನ್ನು ಬೆಂಬಲಿಸಿದರು ಮತ್ತು ಕೇಂದ್ರವು ಹಣವನ್ನು ನೀಡುವಂತೆ ಒತ್ತಾಯಿಸಿದರು, ಅವರ ಬೆಂಬಲಕ್ಕಾಗಿ ನಾನು ಅವರಿಗೆ ಧನ್ಯವಾದಗಳನ್ನು ಹೇಳುತ್ತೇನೆ," ಎಂದು ಅವರು ಹೇಳಿದ್ದಾರೆ. 

ಇದೆ ವೇಳೆ ಅವರು 1983 ರಲ್ಲಿ ವಿಜಯವಾಡ ವಕೀಲರ ಸಂಘದ ಸದಸ್ಯರಾಗಿ ಸೇವೆ ಸಲ್ಲಿಸಿದ ದಿನಗಳನ್ನು ಸ್ಮರಿಸಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News