70 ವರ್ಷಗಳಿಂದ ಪ್ರಜಾಪ್ರಭುತ್ವ ಇಲ್ಲದಿದ್ದರೆ 'ಚಾಯ್ ವಾಲ' ಪ್ರಧಾನಿ ಆಗುತ್ತಿರಲಿಲ್ಲ: ಖರ್ಗೆ

ದೇಶದಲ್ಲಿ 70 ವರ್ಷಗಳ ಕಾಲ ಪ್ರಜಾಪ್ರಭುತ್ವ ರಕ್ಷಿಸಿರದಿದ್ದರೆ ಒಬ್ಬ 'ಚಾಯ್ ವಾಲಾ' ಪ್ರಧಾನಿ ಆಗಲು ಆಗುತ್ತಿರಲಿಲ್ಲ ಎಂದಿದ್ದಾರೆ. 

Last Updated : Jul 9, 2018, 10:32 AM IST
70 ವರ್ಷಗಳಿಂದ ಪ್ರಜಾಪ್ರಭುತ್ವ ಇಲ್ಲದಿದ್ದರೆ 'ಚಾಯ್ ವಾಲ' ಪ್ರಧಾನಿ ಆಗುತ್ತಿರಲಿಲ್ಲ: ಖರ್ಗೆ title=

ನವದೆಹಲಿ:  ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ದೇಶದಲ್ಲಿ 70 ವರ್ಷಗಳ ಕಾಲ ಪ್ರಜಾಪ್ರಭುತ್ವ ರಕ್ಷಿಸಿರದಿದ್ದರೆ ಒಬ್ಬ 'ಚಾಯ್ ವಾಲಾ' ಪ್ರಧಾನಿ ಆಗಲು ಆಗುತ್ತಿರಲಿಲ್ಲ ಎಂದಿದ್ದಾರೆ. 

ದೆಹಲಿಯಲ್ಲಿ ನಡೆದ ಸಭಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕಳೆದ 70 ವರ್ಷಗಳಲ್ಲಿ ದೇಶದಲ್ಲಿ ಪ್ರಜಾಪ್ರಭುತ್ವ ನಾಶವಾಗಿತ್ತು. ಕಾಂಗ್ರೆಸ್ ಸರ್ವಾಧಿಕಾರಿಯಂತೆ ವರ್ತಿಸಿದೆ ಎಂದು ಪ್ರಹನಿ ಮೋದಿ ಸಾಕಷ್ಟು ಕಾರ್ಯಕ್ರಮಗಳಲ್ಲಿ ಹೇಳಿಕೆ ನೀಡಿದ್ದಾರೆ. ಒಂದು ವೇಳೆ ದೇಶದಲ್ಲಿ ಕಾಂಗ್ರೆಸ್ ಸರ್ವಾಧಿಕಾರಿಯಂತೆ ವರ್ತಿಸಿದ್ದರೆ ಒಬ್ಬ ಚಾಯ್ ವಾಲಾ ಪ್ರಧಾನಿ ಆಗಲು ಆಗುತ್ತಿತ್ತೇ ಎಂದು ಮಲ್ಲಿಕರ್ಜುನಖರ್ಗೆ ಪ್ರಶ್ನಿಸಿದ್ದಾರೆ.

ದೇಶದಲ್ಲಿ ಎನ್ದಿಎ ಆಡಳಿತದ ಬಗ್ಗೆ ಟೀಕಾ ಪ್ರಹಾರ ಮಾಡಿದ ಖರ್ಗೆ, ಕಳೆದ 70 ವರ್ಷಗಳಿಂದ ದೇಶದಲ್ಲಿ ಪ್ರಜಾಪ್ರಭುತ್ವ ಇತ್ತು. ಆದರೆ, 2014ರಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಇದೆ. ಈ ಬಗ್ಗೆ ಮೋದಿ ಅವರು ಏನು ಹೇಳುತ್ತಾರೆ? ಎಂದು ಪ್ರಶ್ನಿಸಿದ್ದಾರೆ.

Trending News