ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಬಡವರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಜಾರಿ- ರಾಹುಲ್ ಗಾಂಧಿ

ಕಾಂಗ್ರೆಸ್ ಆಧಿಕಾರಕ್ಕೆ ಬಂದಲ್ಲಿ ಬಡವರಿಗಾಗಿ ಕನಿಷ್ಠ ಆದಾಯ ಖಾತರಿ ಯೋಜನೆಯನ್ನು ಜಾರಿಗೆ ತರಲಿದೆ.ಇದನ್ನು ನೇರವಾಗಿ ಬಡವರ ಖಾತೆಗೆ ಸಂದಾಯ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.

Last Updated : Mar 16, 2019, 06:37 PM IST
ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಬಡವರಿಗೆ ಕನಿಷ್ಠ ಆದಾಯ ಖಾತರಿ ಯೋಜನೆ ಜಾರಿ- ರಾಹುಲ್ ಗಾಂಧಿ  title=

ಡೆಹ್ರಾಡೂನ್ : ಕಾಂಗ್ರೆಸ್ ಆಧಿಕಾರಕ್ಕೆ ಬಂದಲ್ಲಿ ಬಡವರಿಗಾಗಿ ಕನಿಷ್ಠ ಆದಾಯ ಖಾತರಿ ಯೋಜನೆಯನ್ನು ಜಾರಿಗೆ ತರಲಿದೆ.ಇದನ್ನು ನೇರವಾಗಿ ಬಡವರ ಖಾತೆಗೆ ಸಂದಾಯ ಮಾಡಲಾಗುವುದು ಎಂದು ರಾಹುಲ್ ಗಾಂಧಿ ಆಶ್ವಾಸನೆ ನೀಡಿದ್ದಾರೆ.

ಶನಿವಾರದಂದು ಉತ್ತರ ಖಂಡದ  ಡೆಹ್ರಾಡೂನ್ ಕಾಂಗ್ರೆಸ್ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ರಾಹುಲ್ ಗಾಂಧಿ ಕನಿಷ್ಠ ಆದಾಯ ಹೊಂದಿರುವ ಬಡವರಿಗೆ ಈ ಯೋಜನೆಯನ್ನು ಜಾರಿಗೆ ತರಲಾಗುವುದು.ಇದನ್ನು ನೇರವಾಗಿ ಬಡವರ ಖಾತೆ ಹಣವನ್ನು ರವಾನೆ ಮಾಡಲಾಗುತ್ತದೆ ಎಂದು ಹೇಳಿದರು.ಒಂದು ವೇಳೆ ಕಾಂಗ್ರೆಸ್  ನೇತೃತ್ವದ ಯುಪಿಎ ಅಧಿಕಾರಕ್ಕೆ ಬಂದಾಗ ಈ ಯೋಜನೆಯನ್ನು ಪರಿಚಯಿಸುವ ಮೂಲಕ ವಿಶ್ವದ ಮೊದಲ ದೇಶ ಭಾರತವಾಗಲಿದೆ ಎಂದು ಅವರು ಹೇಳಿದರು.

ಈ ಬಾರಿ  ಲೋಕಸಭಾ ಚುನಾವಣೆ ಏಪ್ರಿಲ್ 11 ರಿಂದ ಪ್ರಾರಂಭವಾಗಲಿದ್ದು, ಒಟ್ಟು ಏಳು ಹಂತಗಳಲ್ಲಿ ಈ ಚುನಾವಣೆ ನಡೆಯಲಿದೆ. ಅಂತಿಮ ಫಲಿತಾಂಶ ಮೇ 23 ರಂದು ಹೊರಬಿಳಲಿದೆ ಎಂದು ಚುನಾವಣಾ ಆಯೋಗ ತನ್ನ ವೇಳಾ ಪಟ್ಟಿಯಲ್ಲಿ ಪ್ರಕಟಿಸಿದೆ. ವಿಶೇಷವೆಂದರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 900 ಮಿಲಿಯನ್ ಜನರು ತಮ್ಮ ಮತದಾನ ಚಲಾಯಿಸಲಿದ್ದಾರೆ ಎನ್ನಲಾಗಿದೆ.
 

Trending News