ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ: ಮಾನ್ಸೂನ್‌ ಎಚ್ಚರಿಕೆ ನೀಡಿದ ಐಎಂಡಿ

ಹವಾಮಾನ ಇಲಾಖೆ ಪ್ರಕಾರ, ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೇ ಮಧ್ಯಪ್ರದೇಶ, ಗುಜರಾತ್, ತೆಲಂಗಾಣ, ಕೇರಳ, ಕರ್ನಾಟಕ ಹಾಗೂ ಒಡಿಶಾದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

Written by - Bhavishya Shetty | Last Updated : Jul 6, 2022, 11:35 AM IST
  • ದೇಶಕ್ಕೆ ಅಪ್ಪಳಿಸಿದ ಮುಂಗಾರು ಮಳೆ
  • ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
  • ಕರ್ನಾಟಕದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಈ ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ: ಮಾನ್ಸೂನ್‌ ಎಚ್ಚರಿಕೆ ನೀಡಿದ ಐಎಂಡಿ  title=
IMD Alert

ದೇಶದಲ್ಲಿ ಮುಂಗಾರು ಅಪ್ಪಳಿಸುತ್ತಿದ್ದಂತೆ, ಪ್ರವಾಹ ಮತ್ತು ಜಲಾವೃತ ಸಮಸ್ಯೆಯು ಮುನ್ನೆಲೆಗೆ ಬರುತ್ತಿದೆ. ಹವಾಮಾನ ಇಲಾಖೆ (ಐಎಂಡಿ) ಇಂದು ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಕಳೆದ 24 ಗಂಟೆಗಳಿಂದ ಮುಂಬೈನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಇಡೀ ಮುಂಬೈಯೇ ಸಾಗರದಂತಾಗಿದ್ದು, ಥಾಣೆಯಲ್ಲಿ ಹೊಂಡಕ್ಕೆ ಬಿದ್ದು ಓರ್ವ ಸಾವನ್ನಪ್ಪಿದ್ದಾನೆ. ಮುಂಬೈ ಮಾತ್ರವಲ್ಲದೆ ದೇಶದ ಹಲವು ನಗರಗಳು ಮುಂಗಾರು ಮಳೆಯ ಈ ಅನಾಹುತದಿಂದ ತತ್ತರಿಸಿವೆ. ಮಧ್ಯಪ್ರದೇಶದಿಂದ ಉತ್ತರಾಖಂಡ, ಜಮ್ಮು-ಕಾಶ್ಮೀರದವರೆಗೆ ಅನಾಹುತ ಎದುರಾಗಿದೆ. ಒಂದೆಡೆ ನಗರದ ಬೀದಿಗಳು ನದಿಗಳಾಗಿದ್ದು, ಹಳ್ಳಿಗಳಲ್ಲಿ ಮನೆ-ಹಟ್ಟಿಗಳೆಲ್ಲವೂ ಮುಳುಗಡೆಯಾಗಿವೆ.  

ಇದನ್ನೂ ಓದಿ: ‘ಹುಚ್ಚ’ ಸಿನಿಮಾಗೆ 21, ‘ಈಗ’ ಚಿತ್ರಕ್ಕೆ 10 ವರ್ಷ: ನೆನಪು ಹಂಚಿಕೊಂಡ ಕಿಚ್ಚ ಹೇಳಿದ್ದೇನು..?

ಹವಾಮಾನ ಇಲಾಖೆ ಪ್ರಕಾರ, ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೇ ಮಧ್ಯಪ್ರದೇಶ, ಗುಜರಾತ್, ತೆಲಂಗಾಣ, ಕೇರಳ, ಕರ್ನಾಟಕ ಹಾಗೂ ಒಡಿಶಾದಲ್ಲಿ ಮುಂದಿನ ಐದು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಕರ್ನಾಟಕದಲ್ಲಿ ರಜೆ ಘೋಷಣೆ: 
ಕಳೆದ ಕೆಲ ದಿನಗಳಿಂದ ಬಿಟ್ಟುಬಿಡದೆ ಸುರಿಯುತ್ತಿರುವ ಮಳೆಗೆ ಕರ್ನಾಟಕದ ಕರಾವಳಿ ಪ್ರದೇಶಗಳು ತತ್ತರಿಸಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಎಲ್ಲಾ ಶಾಲಾ-ಕಾಲೇಜುಗಳನ್ನು ಮುಚ್ಚುವಂತೆ ಸರ್ಕಾರ ಸೂಚನೆ ನೀಡಿದೆ. ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಕೆ ನೀಡಿದೆ.

ಹದಗೆಟ್ಟ ಮುಂಬೈ ಪರಿಸ್ಥಿತಿ: 
ಕಳೆದ 24 ಗಂಟೆಗಳಿಂದ ಮುಂಬೈನಲ್ಲಿ ಸುರಿದ ಮಳೆಗೆ ಇಡೀ ಮುಂಬೈಯೇ ಸಾಗರದಂತೆ ಆಗಿದೆ. ಮುಂಬೈನ ಬಹುತೇಕ ಎಲ್ಲಾ ಪ್ರದೇಶಗಳು ಮಳೆಯಿಂದ ಉಂಟಾದ ವಿಪತ್ತುಗಳನ್ನು ಎದುರಿಸುತ್ತಿವೆ. ಹಲವು ಶಾಲೆಗಳನ್ನು ಮುಚ್ಚುವ ಪರಿಸ್ಥಿತಿ ನಿರ್ಮಾಣವಾಗಿದೆ.  ಮುಂಬೈನ ಹಲವು ಪ್ರದೇಶಗಳಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿವೆ.

ಇದನ್ನೂ ಓದಿ: ವಾಟ್ಸಾಪ್‌ನಲ್ಲಿ ನಿಮ್ಮನ್ನು ಯಾರಾದರೂ ಬ್ಲಾಕ್ ಮಾಡಿದ್ದಾರಾ? ಈ ರೀತಿ ತಿಳಿಯಿರಿ

ಕಳೆದ 24 ಗಂಟೆಗಳಲ್ಲಿ ಮುಂಬೈಗೆ ಮಾತ್ರವಲ್ಲದೆ ವಿವಿಧ ರಾಜ್ಯಗಳ ಅನೇಕ ನಗರಗಳಿಗೆ ಮಳೆಯಿಂದ ಅನಾಹುತ ಸೃಷ್ಟಿಯಾಗಿದೆ. ಮಧ್ಯಪ್ರದೇಶದ ರತ್ಲಾಮ್ ಮತ್ತು ಬೇತುಲ್‌ನಲ್ಲಿ ಮಂಗಳವಾರ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಇನ್ನು ಜಮ್ಮುವಿನಲ್ಲಿಯೂ ಮಳೆ ಸುರಿಯುತ್ತಿದ್ದು, ಅಮರನಾಥ ಯಾತ್ರೆಗೆ ತೆರಳುವ ಭಕ್ತರಿಗೆ ತೊಂದರೆಯಾಗಿದೆ. ಇನ್ನೊಂದೆಡೆ ಉತ್ತರಾಖಂಡದಲ್ಲಿ ಭಾರೀ ಮಳೆಯ ಪರಿಣಾಮ ಭಾಗೀರಥಿಯ ನೀರಿನ ಮಟ್ಟ ಹೆಚ್ಚಾಗಿದೆ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News