Rain Alert: ಈ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಎಚ್ಚರಿಕೆ

ದೇಶದ ಹಲವು ಭಾಗಗಳಲ್ಲಿ ಮಾನ್ಸೂನ್ ಅಬ್ಬರ ಜೋರಾಗಿದೆ. ಹವಾಮಾನ ಇಲಾಖೆ ಇಂದೂ ಸಹ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿದೆ. ಇಂದು ಯಾವ ರಾಜ್ಯಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ತಿಳಿಯಿರಿ.

Written by - Yashaswini V | Last Updated : Jul 25, 2022, 07:39 AM IST
  • ಉತ್ತರಾಖಂಡದಲ್ಲಿ ಎರಡು ದಿನ ಧಾರಾಕಾರ ಮಳೆ, ಭೂಕುಸಿತದ ಎಚ್ಚರಿಕೆ
  • ಮಧ್ಯಪ್ರದೇಶದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
  • ಛತ್ತೀಸ್‌ಗಢದ ಹಲವು ಭಾಗಗಳಲ್ಲಿ ಭಾರೀ ಮಳೆ
Rain Alert: ಈ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಎಚ್ಚರಿಕೆ  title=
Weather Forecast 25 July

ನವದೆಹಲಿ: ಮುಂದಿನ ಎರಡು ದಿನಗಳವರೆಗೆ ಗುಜರಾತ್, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಧಾರಾಕಾರ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಬುಧವಾರದಿಂದ ಅಂದರೆ ಜುಲೈ 27ರಿಂದ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ನಿರಂತರ ಮಳೆಯಾಗುವ ಬಗ್ಗೆ ಐಎಂಡಿ ಮುನ್ಸೂಚನೆ ನೀಡಿದೆ. 

ಕಳೆದ 24 ಗಂಟೆಗಳಲ್ಲಿ, ಪಶ್ಚಿಮ ಮಧ್ಯಪ್ರದೇಶದ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ಛತ್ತೀಸ್‌ಗಢದಲ್ಲಿ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಬಿಹಾರ, ಕೊಂಕಣ ಮತ್ತು ಹಿಮಾಚಲ ಪ್ರದೇಶದ ಕೆಲವು ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಿದೆ. ಪಶ್ಚಿಮ ರಾಜಸ್ಥಾನ, ಒಡಿಶಾ, ತಮಿಳುನಾಡು, ಪೂರ್ವ ಮಧ್ಯಪ್ರದೇಶ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ, ಕರ್ನಾಟಕದ ದಕ್ಷಿಣ ಒಳಭಾಗಗಳು, ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ ಮತ್ತು ಪಂಜಾಬ್‌ನ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಿದೆ.

ಉತ್ತರಾಖಂಡದಲ್ಲಿ ಎರಡು ದಿನ ಧಾರಾಕಾರ ಮಳೆ, ಭೂಕುಸಿತದ ಎಚ್ಚರಿಕೆ:
ಉತ್ತರಾಖಂಡದಲ್ಲಿ ಜುಲೈ ತಿಂಗಳಲ್ಲಿ ಮಳೆಯಿಂದ ಪರಿಹಾರ ಸಿಗುವ ಸಾಧ್ಯತೆ ಕಡಿಮೆ. ಜುಲೈ 27ರವರೆಗೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭೂಕುಸಿತ ಘಟನೆಗಳ ಹೆಚ್ಚಳದಿಂದಾಗಿ ಚಾರ್ಧಾಮ್ ಯಾತ್ರೆಗೂ ತೊಂದರೆಯಾಗುತ್ತಿದೆ. ಎರಡು ದಿನಗಳ ಕಾಲ ರಾಜ್ಯದ ಗುಡ್ಡಗಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆ ಪ್ರಕಾರ, ಇಂದು ಡೆಹ್ರಾಡೂನ್, ಉತ್ತರಕಾಶಿ, ಬಾಗೇಶ್ವರದಲ್ಲಿ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಮತ್ತೊಂದೆಡೆ ಜುಲೈ 26ರ ಮಂಗಳವಾರ ಮಳೆಯಿಂದ ಸಮಸ್ಯೆಗಳು ಹೆಚ್ಚಾಗಲಿವೆ. ಈ ಸಮಯದಲ್ಲಿ, ನೈನಿತಾಲ್, ಚಂಪಾವತ್, ಉಧಮ್ಸಿಂಗ್ನಗರದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. 

ಇದನ್ನೂ ಓದಿ- ಭಾರತದಲ್ಲಿ 4 ಮಂಕಿಪಾಕ್ಸ್ ಪ್ರಕರಣ ಪತ್ತೆ- ಜಾಗರೂಕರಾಗಿರಲು ತಜ್ಞರ ಸಲಹೆ

ರಾಷ್ಟ್ರ ರಾಜಧಾನಿಯಲ್ಲಿ ಹವಾಮಾನ ಪರಿಸ್ಥಿತಿ:
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸೋಮವಾರ ದೆಹಲಿಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ ಮತ್ತು ಲಘು ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಎಂದು ನಿರೀಕ್ಷಿಸಲಾಗಿದೆ. 

ಮಧ್ಯಪ್ರದೇಶದ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ :
ಮಧ್ಯಪ್ರದೇಶದ 52 ಜಿಲ್ಲೆಗಳ ಪೈಕಿ 8 ಜಿಲ್ಲೆಗಳಲ್ಲಿಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯಾಗಿದ್ದು, ನರ್ಮದಾ, ಪಾರ್ವತಿ ಬೇಟ್ವಾ ಮತ್ತು ಇತರ ನದಿಗಳಿಗೆ ನಿರ್ಮಿಸಲಾದ 52 ಪ್ರಮುಖ ಅಣೆಕಟ್ಟುಗಳ ಪೈಕಿ 14 ಅಣೆಕಟ್ಟುಗಳ ಕೆಲವು ಗೇಟ್‌ಗಳನ್ನು ತೆರೆದು ನೀರು ಬಿಡಲಾಗುತ್ತಿದೆ ಮತ್ತು ನದಿಯ ಸಮೀಪ ವಾಸಿಸುವ ಜನರನ್ನು ಮುಂಜಾಗ್ರತೆ ಕ್ರಮವಾಗಿ ಬೇರೆ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಎಚ್ಚರಿಸಲಾಗಿದೆ.

ಇದಲ್ಲದೆ, ಹವಾಮಾನ ಇಲಾಖೆಯು ರಾಜ್ಯದ 16 ಜಿಲ್ಲೆಗಳಲ್ಲಿ, ಬೆತುಲ್, ನರ್ಮದಾಪುರಂ, ಹರ್ದಾ, ಉಮಾರಿಯಾ, ಶಹದೋಲ್, ಅನುಪ್ಪುರ್, ಶಿವಪುರಿ, ಶಿಯೋಪುರ್, ನೀಮುಚ್, ಮಂದಸೌರ್, ಖಾಂಡ್ವಾ, ಚಿಂದ್ವಾರಾ, ಸಿಯೋನಿ, ಮಂಡ್ಲಾ, ಬಾಲಘಾಟ್ ಮತ್ತು ನರಸಿಂಗ್‌ಪುರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. 

ಛತ್ತೀಸ್‌ಗಢದ ಹಲವು ಭಾಗಗಳಲ್ಲಿ ಭಾರೀ ಮಳೆ:
ಕಳೆದ ಕೆಲವು ದಿನಗಳಿಂದ ರಾಯ್‌ಪುರ ಸೇರಿದಂತೆ ಛತ್ತೀಸ್‌ಗಢದ ಹಲವು ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹದಂತಹ ಪರಿಸ್ಥಿತಿಯ ಮಧ್ಯೆ, ಸಿಎಂ ಭೂಪೇಶ್ ಬಘೇಲ್ ಅಧಿಕಾರಿಗಳಿಗೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ. ದಕ್ಷಿಣ ಬಸ್ತಾರ್‌ನ ಬಿಜಾಪುರವು ಹಲವಾರು ಸಣ್ಣ ನದಿಗಳು ಮತ್ತು ಜಲಾಶಯಗಳಲ್ಲಿ ಪ್ರವಾಹದ ನೀರಿನಿಂದ ಪ್ರಭಾವಿತವಾಗಿದೆ ಮತ್ತು ಇದರಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ- "ಇನ್ನು ಮುಂದೆ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಇಲ್ಲ"

ರಾಜಸ್ಥಾನದಲ್ಲಿ ಮಾನ್ಸೂನ್ ಸಕ್ರಿಯ:
ಈ ಮಧ್ಯೆ, ರಾಜಸ್ಥಾನದಲ್ಲಿ ಮುಂಗಾರು ಮಳೆ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ಹಲವೆಡೆ ಭಾರೀ ಮಳೆಯಾಗಿದೆ. ಈ ಅವಧಿಯಲ್ಲಿ ಸವಾಯಿ ಮಾಧೋಪುರದ ಧೀಲ್ ಅಣೆಕಟ್ಟಿನಲ್ಲಿ 176 ಮಿಮೀ ಮಳೆ ದಾಖಲಾಗಿದೆ. ರಾಜಧಾನಿ ಜೈಪುರದಲ್ಲಿ ಹಲವು ದಿನಗಳಿಂದ ಮೋಡ ಕವಿದ ವಾತಾವರಣ ಮುಂದುವರಿದಿದೆ. ಜೈಪುರದ ಹವಾಮಾನ ಕೇಂದ್ರದ ಪ್ರಕಾರ, ಮುಂದಿನ ಮೂರು-ನಾಲ್ಕು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಸಕ್ರಿಯ ಮಾನ್ಸೂನ್‌ನ ಪ್ರಬಲ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News