ಕೆಲವೇ ದಿನಗಳಲ್ಲಿ ಶೇ 2-3°ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಹೆಚ್ಚಳ...!

ಭಾರತೀಯ ಹವಾಮಾನ ಇಲಾಖೆ ಸೋಮವಾರದಂದು ವಾಯುವ್ಯ, ಮಧ್ಯ ಮತ್ತು ಈಶಾನ್ಯ ಭಾರತದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗರಿಷ್ಠ ತಾಪಮಾನವು ಶೇ  2-3 °ರಷ್ಟು ಡಿಗ್ರಿ ಸೆಲ್ಸಿಯಸ್ ಏರಲಿದೆ ಎಂದು ಹೇಳಿದೆ.

Written by - Zee Kannada News Desk | Last Updated : Mar 15, 2022, 06:31 PM IST
  • ತಾಪಮಾನವು ಮಾರ್ಚ್ 18 ರವರೆಗೆ 36 ಮತ್ತು 37 ಡಿಗ್ರಿ ಸೆಲ್ಸಿಯಸ್ ನಡುವೆ ಏರುತ್ತದೆ.
  • ಮುಂದಿನ 4-5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-4 ಡಿಗ್ರಿ ಸೆಲ್ಸಿಯಸ್ ಗೆ ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ
ಕೆಲವೇ ದಿನಗಳಲ್ಲಿ ಶೇ 2-3°ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಹೆಚ್ಚಳ...!     title=

ನವದೆಹಲಿ: ಭಾರತೀಯ ಹವಾಮಾನ ಇಲಾಖೆ ಸೋಮವಾರದಂದು ವಾಯುವ್ಯ, ಮಧ್ಯ ಮತ್ತು ಈಶಾನ್ಯ ಭಾರತದಲ್ಲಿ ಮುಂದಿನ ಕೆಲವು ದಿನಗಳಲ್ಲಿ ಗರಿಷ್ಠ ತಾಪಮಾನವು ಶೇ  2-3 °ರಷ್ಟು ಡಿಗ್ರಿ ಸೆಲ್ಸಿಯಸ್ ಏರಲಿದೆ ಎಂದು ಹೇಳಿದೆ.

ಭಾರತೀಯ ಹವಾಮಾನ ಇಲಾಖೆ (India Meteorological Department) ಬುಲೆಟಿನ್ ಪ್ರಕಾರ, ಪೂರ್ವ ಭಾರತದಲ್ಲಿ ಮುಂದಿನ 4-5 ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ 2-4 °ಡಿಗ್ರಿ ಸೆಲ್ಸಿಯಸ್  ಗೆ ಕ್ರಮೇಣ ಏರಿಕೆಯಾಗುವ ಸಾಧ್ಯತೆಯಿದೆ.ಆದಾಗ್ಯೂ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಮುಂದಿನ ಮೂರು ದಿನಗಳಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಮಹತ್ವದ ಬದಲಾವಣೆಯನ್ನು ನಿರೀಕ್ಷಿಸಲಾಗುವುದಿಲ್ಲ ಎಂದು ಹೇಳಿದೆ.ಇನ್ನೊಂದೆಡೆಗೆ ಮಾರ್ಚ್ 16-18 ರ ಅವಧಿಯಲ್ಲಿ ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕೇರಳ ರಾಜ್ಯಗಳಲ್ಲಿ ಅಲ್ಪ ಪ್ರಮಾಣದ ಮಳೆ ವಾತಾವರಣ ಇರಲಿದೆ ಎನ್ನಲಾಗಿದೆ.

ಇದನ್ನೂ ಓದಿ: ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಲ್ಲ, ಆದರೆ ಎಲ್ಲಾ ನಿರ್ಧಾರ ತೆಗೆದುಕೊಳ್ಳುತ್ತಾರೆ: ಕಪಿಲ್ ಸಿಬಲ್

ಏತನ್ಮಧ್ಯೆ, ದೆಹಲಿಯಲ್ಲಿ ಸೋಮವಾರ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ."ತಾಪಮಾನವು ಮಾರ್ಚ್ 18 ರವರೆಗೆ 36 ಮತ್ತು 37 ಡಿಗ್ರಿ ಸೆಲ್ಸಿಯಸ್ ನಡುವೆ ಏರುತ್ತದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

2021 ರಲ್ಲಿ, ಮಾರ್ಚ್ 12 ರ ವೇಳೆಗೆ ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿತು. ಆದರೆ, 2020 ರಲ್ಲಿ ದೆಹಲಿಯು 30 ಡಿಗ್ರಿ ಸೆಲ್ಸಿಯಸ್‌ನ ದಾಖಲೆಯನ್ನು ಹೊಂದಿತ್ತು.ಮಂಗಳವಾರದ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ಡಿಗ್ರಿ ಸೆಲ್ಸಿಯಸ್ ಮತ್ತು 18 ಡಿಗ್ರಿ ಸೆಲ್ಸಿಯಸ್ ಇರಲಿದೆ ಎನ್ನಲಾಗಿದೆ.

ಇದನ್ನೂ ಓದಿ : Hijab Row: ಶಾಲಾ-ಕಾಲೇಜುಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಡಿಕೆಶಿ ಮನವಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News