ಮುಂದಿನ 48 ಗಂಟೆಗಳಲ್ಲಿ ಗೋವಾದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಮುಂದಿನ 24 ಗಂಟೆಗಳಲ್ಲಿ ಸಮುದ್ರದಲ್ಲಿ ಅಲೆಗಳ ಹೆಚ್ಚಾಗುವ ಹಾಗೂ ವೇಗವಾಗಿ ಗಾಳಿ ಬೀಸುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.   

Last Updated : Sep 24, 2019, 03:34 PM IST
ಮುಂದಿನ 48 ಗಂಟೆಗಳಲ್ಲಿ ಗೋವಾದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ title=

ಪಣಜಿ: ಮುಂದಿನ 48 ಗಂಟೆಗಳಲ್ಲಿ ಉತ್ತರ ಗೋವಾ ಮತ್ತು ದಕ್ಷಿಣ ಗೋವಾದ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.

ಮುಂದಿನ 24 ಗಂಟೆಗಳಲ್ಲಿ ಸಮುದ್ರದಲ್ಲಿ ಅಲೆಗಳ ಹೆಚ್ಚಾಗುವ ಹಾಗೂ ವೇಗವಾಗಿ ಗಾಳಿ ಬೀಸುವ ಕಾರಣ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ತೀವ್ರವಾದ ಚಂಡಮಾರುತ 'ಹಿಕಾ' ಅಪ್ಪಳಿಸುವ ಬಗ್ಗೆ ಎಚ್ಚರಿಕೆ ನೀಡಿರುವ ಹವಾಮಾನ ಇಲಾಖೆ, ಮಹಾರಾಷ್ಟ್ರ-ಗೋವಾ ಕರಾವಳಿಯ ದಹಾನುದಿಂದ ಮರ್ಮಗೊವಾವರೆಗಿನ ಎಲ್ಲಾ ಬಂದರುಗಳಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ. 

'ಹಿಕಾ' ಚಂಡಮಾರುತ ಇಂದು ರಾತ್ರಿ 8.30ರ ಸುಮಾರಿಗೆ ಈ ಪ್ರದೇಶವನ್ನು ಅಪ್ಪಳಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಗುಜರಾತ್ ಕರಾವಳಿಯ ಕೆಲವು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

Trending News