ನವದೆಹಲಿ: ಕೇರಳ ಮತ್ತು ಮಹೇನಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.
ಕರಾವಳಿ ಆಂಧ್ರಪ್ರದೇಶ, ಯಾನಂ, ಕರ್ನಾಟಕ, ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್ ನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ವಿದರ್ಭ, ಛತ್ತೀಸ್‌ಗಢ, ಜಾರ್ಖಂಡ್, ಒಡಿಶಾ, ಅರುಣಾಚಲ ಪ್ರದೇಶ, ಪೂರ್ವ ಅಸ್ಸಾಂ, ನಾಗಾಲ್ಯಾಂಡ್, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೊಂಕಣ ಮತ್ತು ಗೋವಾಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಅರೇಬಿಯನ್ ಸಮುದ್ರದ ಪೂರ್ವ-ಮಧ್ಯ ಮತ್ತು ಪಕ್ಕದ ಆಗ್ನೇಯದಲ್ಲಿನ ಮಹಾರಾಷ್ಟ್ರ-ಗೋವಾ-ಕರ್ನಾಟಕ-ಕೇರಳ ಕರಾವಳಿಗಳು, ಲಕ್ಷದ್ವೀಪ ಮತ್ತು ನೈರುತ್ಯ ಮತ್ತು ಪಕ್ಕದ ಪಶ್ಚಿಮ-ಮಧ್ಯ ಬಂಗಾಳ ಕೊಲ್ಲಿಯೊಂದಿಗೆ ಉತ್ತರ ತಮಿಳುನಾಡು- ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಹವಾಮಾನ ವೈಪರೀತ್ಯಗಳು ಉಂಟಾಗುವ ಸಾಧ್ಯತೆಯಿದೆ. ಇದೇ ವೇಳೆ, ಮುಂದಿನ ಕೆಲವು ದಿನಗಳವರೆಗೆ ಈ ಪ್ರದೇಶಗಳಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ.