ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವ ಚಟುವಟಿಕೆಗೆ ನಿರ್ಬಂಧ..?

Lok Sabha Elections 2024: ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ. ​

Written by - Puttaraj K Alur | Last Updated : Mar 16, 2024, 03:30 PM IST
  • ಲೋಕಸಭಾ ಚುನಾವಣೆ ವೇಳಾಪಟ್ಟಿ ಜೊತೆಗೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕ ಪ್ರಕಟ
  • ಚುನಾವಣಾ ದಿನಾಂಕ ಘೋಷಣೆ ಬಳಿಕ ಕರ್ನಾಟಕ ಸೇರಿ ದೇಶದಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿ
  • ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದರೆ ಏನಾಗುತ್ತೆ? ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಲೋಕಸಭಾ ಚುನಾವಣೆ ವೇಳಾಪಟ್ಟಿ ಪ್ರಕಟ ಬೆನ್ನಲ್ಲೇ ನೀತಿ ಸಂಹಿತೆ ಜಾರಿ: ಯಾವ ಚಟುವಟಿಕೆಗೆ ನಿರ್ಬಂಧ..? title=
Lok Sabha Elections 2024

ನವದೆಹಲಿ: ಲೋಕಸಭಾ ಚುನಾವಣೆ ವೇಳಾಪಟ್ಟಿ ಶನಿವಾರ ಪ್ರಕಟವಾಗಿದ್ದು, ಇದರ ಜೊತೆಗೆ ಕೆಲವು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವೂ ಪ್ರಕಟವಾಗಿದೆ. ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶ ಸೇರಿವೆ. ಚುನಾವಣಾ ದಿನಾಂಕ ಘೋಷಣೆಯ ಬಳಿಕ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಗೆ ಬರಲಿದೆ. ನೀತಿ ಸಂಹಿತೆ ಜಾರಿಯಾಗಿದ್ದರಿಂದ ದೇಶದಲ್ಲಿ ಯಾವೆಲ್ಲಾ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ ಅನ್ನೋದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ನೀತಿ ಸಂಹಿತೆಯ ನಿಯಮಗಳು: ನೀತಿ ಸಂಹಿತೆ ಜಾರಿಯಾದ ನಂತರ ಯಾವುದೇ ರಾಜಕೀಯ ಪಕ್ಷಕ್ಕೆ ಲಾಭವಾಗುವಂತೆ ಸರ್ಕಾರದ ಹಣ ಬಳಸುವಂತಿಲ್ಲ. ಸರ್ಕಾರದ ಘೋಷಣೆಗಳು, ಉದ್ಘಾಟನೆಗಳು, ಶಂಕುಸ್ಥಾಪನೆ ಮುಂತಾದ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಆದರೆ ಈಗಾಗಲೇ ಪ್ರಾರಂಭವಾಗಿರುವ ಕೆಲಸಗಳನ್ನು ಮುಂದುವರಿಸಬಹುದು. ದೇವಸ್ಥಾನ, ಮಸೀದಿ, ಚರ್ಚ್, ಗುರುದ್ವಾರ ಅಥವಾ ಯಾವುದೇ ಧಾರ್ಮಿಕ ಸ್ಥಳವನ್ನು ಚುನಾವಣಾ ಪ್ರಚಾರಕ್ಕೆ ಬಳಸುವಂತಿಲ್ಲ. 

ಇದನ್ನೂ ಓದಿ: Railway Career: ನಿರುದ್ಯೋಗಿಗಳಿಗೆ ಗುಡ್ ನ್ಯೂಸ್..! ರೈಲ್ವೆ ಕೋಚ್ ಫ್ಯಾಕ್ಟರಿಯಲ್ಲಿ ಉದ್ಯೋಗವಕಾಶ

ನೀತಿ ಸಂಹಿತೆಯಡಿ ಸರ್ಕಾರವು ಯಾವುದೇ ಸರ್ಕಾರಿ ಅಧಿಕಾರಿ-ಉದ್ಯೋಗಿಯನ್ನು ವರ್ಗಾಯಿಸಲು ಅಥವಾ ಪೋಸ್ಟಿಂಗ್ ಮಾಡಲು ಸಾಧ್ಯವಿರಲ್ಲ. ವರ್ಗಾವಣೆ ಬಹಳ ಮುಖ್ಯವಾಗಿದ್ದರೆ ಚುನಾವಣಾ ಆಯೋಗದಿಂದ ಅನುಮತಿ ಪಡೆಯುವುದು ಅಗತ್ಯವಾಗಿರುತ್ತದೆ. ಸಾರ್ವಜನಿಕ ಅಥವಾ ಖಾಸಗಿ ಸ್ಥಳದಲ್ಲಿ ಸಭೆ ಆಯೋಜಿಸುವ, ಮೆರವಣಿಗೆ ನಡೆಸುವ ಮತ್ತು ಧ್ವನಿವರ್ಧಕ ಬಳಸುವ ಮೊದಲು ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಲಿಖಿತ ಅನುಮತಿ ಪಡೆಯಬೇಕು. ರಾತ್ರಿ 10ರಿಂದ ಬೆಳಗ್ಗೆ 6ರವರೆಗೆ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ.

ಸಚಿವರು ಮತ್ತು ಶಾಸಕರಿಗೆ ನಿರ್ಬಂಧ?: ಸಚಿವರು ಮತ್ತು ಶಾಸಕರು ಸರ್ಕಾರಿ ವೆಚ್ಚದಲ್ಲಿ ಚುನಾವಣಾ ರ‍್ಯಾಲಿ ನಡೆಸುವಂತಿಲ್ಲ. ಈ ಅವಧಿಯಲ್ಲಿ ಸಚಿವರು ತಮ್ಮ ನಿವಾಸದಿಂದ ಕಚೇರಿಗೆ ಹೋಗಲು ಮಾತ್ರ ಸರ್ಕಾರಿ ವಾಹನಗಳನ್ನು ಬಳಸಬಹುದು. ಚುನಾವಣಾ ರ‍್ಯಾಲಿಗಳು ಮತ್ತು ಪ್ರವಾಸಗಳಿಗೆ ಅವುಗಳನ್ನು ಯಾವುದೇ ಕಾರಣಕ್ಕೂ ಬಳಸಬಾರದು.

ಇದನ್ನೂ ಓದಿ:  7ನೇ ವೇತನ ಆಯೋಗದ ಶಿಫಾರಸ್ಸು ಈಡೇರಿಸುವ ಕರ್ತವ್ಯ ಸಿದ್ದರಾಮಯ್ಯ ಅವರದ್ದು:ಬಸವರಾಜ ಬೊಮ್ಮಾಯಿ  

ಜನ ಸಾಮಾನ್ಯರಿಗೆ ನೀತಿ ಸಂಹಿತೆ: ನೀತಿ ಸಂಹಿತೆ ಕೇವಲ ರಾಜಕೀಯ ಪಕ್ಷಗಳಿಗೆ ಅಥವಾ ಅಭ್ಯರ್ಥಿಗಳಿಗೆ ಸೀಮಿತವಾಗಿಲ್ಲ. ಇದು ಸಾಮಾನ್ಯರಿಗೂ ಅನ್ವಯಿಸುತ್ತದೆ. ಯಾರಾದರೂ ತಮ್ಮ ನಾಯಕರ ಪ್ರಚಾರದಲ್ಲಿ ತೊಡಗಿದ್ದರೆ, ಅವರು ಈ ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ನಿಯಮಗಳನ್ನು ನಿರ್ಲಕ್ಷಿಸಿ ತಮ್ಮಪರ ಕೆಲಸ ಮಾಡಲು ಯಾವುದೇ ರಾಜಕಾರಣಿ ನಿಮ್ಮನ್ನು ಕೇಳಿದರೆ, ನೀತಿ ಸಂಹಿತೆಯ ನಿಯಮಗಳು ಮತ್ತು ನಿಬಂಧನೆಗಳ ಬಗ್ಗೆ ಹೇಳುವ ಮೂಲಕ ನೀವು ನಿರಾಕರಿಸಬಹುದು. ಯಾರಾದರೂ ಪ್ರಚಾರ ಮಾಡಿ ಸಿಕ್ಕಿಬಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದು.

ನೀತಿ ಸಂಹಿತೆ ಉಲ್ಲಂಘಿಸಿದರೆ ಏನಾಗುತ್ತೆ?: ಯಾವುದೇ ರಾಜಕೀಯ ಪಕ್ಷ ಅಥವಾ ಅದರ ಅಭ್ಯರ್ಥಿ ನೀತಿ ಸಂಹಿತೆ ಉಲ್ಲಂಘಿಸಿದರೆ ಅಂಥವರನ್ನು ಪ್ರಚಾರದಿಂದ ನಿಷೇಧಿಸಬಹುದು. ಅಭ್ಯರ್ಥಿಯು ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧಿಸಬಹುದು. ಅಗತ್ಯವಿದ್ದರೆ ಅಭ್ಯರ್ಥಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಸಹ ದಾಖಲಿಸಬಹುದು. ಮಾಡಿದ ತಪ್ಪಿಗೆ ಆತ ಜೈಲುಪಾಲಾಗುವ ಸಾಧ್ಯತೆಯೂ ಇರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News