ಜಮ್ಮು-ಕಾಶ್ಮೀರದ ಗಡಿ ನಿರ್ಧಾರದ ಬಗ್ಗೆ ಚುನಾವಣಾ ಆಯೋಗದ ಮಹತ್ವದ ಸಭೆ

ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದಾರೆ.

Last Updated : Aug 13, 2019, 01:12 PM IST
ಜಮ್ಮು-ಕಾಶ್ಮೀರದ ಗಡಿ ನಿರ್ಧಾರದ ಬಗ್ಗೆ  ಚುನಾವಣಾ ಆಯೋಗದ ಮಹತ್ವದ ಸಭೆ title=

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಕ್ಷೇತ್ರಗಳ ಗಡಿ ನಿರ್ಧಾರದ ಬಗ್ಗೆ ದೆಹಲಿಯಲ್ಲಿ ಚುನಾವಣಾ ಆಯೋಗದ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಹಲವಾರು ಅಧಿಕಾರಿಗಳು ಉಪಸ್ಥಿತರಿದ್ದಾರೆ. ಡಿಲಿಮಿಟೇಶನ್ ಕುರಿತ ಸಭೆಯಲ್ಲಿ ಇಬ್ಬರು ಚುನಾವಣಾ ಆಯುಕ್ತರು ಹಾಜರಾಗಿದ್ದಾರೆ.

ಆಗಸ್ಟ್ 5 ರಂದು ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ಮಸೂದೆ 2019 ಅನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಿತು. ನಂತರ ಮಸೂದೆಯನ್ನು ಮರುದಿನ ಆಗಸ್ಟ್ 6 ರಂದು ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. 

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸಿ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ 2019 ಮಸೂದೆಯನ್ನು ಮಂಡಿಸಿತು. ಈ ಮಸೂದೆಯ ಪ್ರಕಾರ, ಜಮ್ಮು ಮತ್ತು ಕಾಶ್ಮೀರವು ಈಗ ವಿಧಾನಸಭೆ ಹೊಂದಿರುವ ಕೇಂದ್ರಾಡಳಿತ ಪ್ರದೇಶದ ಸ್ಥಾನಮಾನವನ್ನು ಹೊಂದಿರುತ್ತದೆ.  ಲಡಾಖ್ ವಿಧಾನಸಭೆ ಇಲ್ಲದ ಕೇಂದ್ರಾಡಳಿತ ಪ್ರದೇಶವಾಗಿದೆ.

ಜಮ್ಮು ಮತ್ತು ಕಾಶ್ಮೀರ ಪ್ರಸ್ತುತ ರಾಷ್ಟ್ರಪತಿಗಳ ಆಡಳಿತದಲ್ಲಿದೆ. 2018 ರ ಜೂನ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಡುವಿನ ಮೈತ್ರಿ ಪತನದ ನಂತರ ನವೆಂಬರ್ 2018 ರಂದು ಜಮ್ಮು-ಕಾಶ್ಮೀರ ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಲಾಯಿತು. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಈ ವರ್ಷದ ಕೊನೆಯಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಜೂನ್‌ನಲ್ಲಿ ತಿಳಿಸಿತ್ತು.

ಇದೀಗ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಅನುಚ್ಛೇದ 370 ಮತ್ತು 35 ಎ ರದ್ದುಗೊಳಿಸಿದೆ. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದ ಗಡಿ ನಿರ್ಧಾರದ ಬಗ್ಗೆ  ಚುನಾವಣಾ ಆಯೋಗದ ಇಂದಿನ ಸಭೆ ಮಹತ್ವದಾಗಿದೆ.

Trending News