ಭಾರತ ಓರ್ವ ಶ್ರೇಷ್ಠ ಪುತ್ರನನ್ನು ಕಳೆದುಕೊಂಡಿದೆ: ರಾಹುಲ್ ಗಾಂಧಿ

ಅಟಲ್ ಬಿಹಾರಿ ವಾಜಪೇಯಿ ಅವರ ನಿಧಾನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಭಾರತ ಓರ್ವ ಶ್ರೇಷ್ಠ ಮಗನನ್ನು ಕಳೆದುಕೊಂಡಿದೆ ಎಂದಿದ್ದಾರೆ. 

Last Updated : Aug 16, 2018, 07:05 PM IST
ಭಾರತ ಓರ್ವ ಶ್ರೇಷ್ಠ ಪುತ್ರನನ್ನು ಕಳೆದುಕೊಂಡಿದೆ: ರಾಹುಲ್ ಗಾಂಧಿ title=

ನವದೆಹಲಿ: ಮಾಜಿ ಪ್ರಧಾನಿ ಹಾಗೂ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಅಟಲ್ ಬಿಹಾರಿ ವಾಜಪೇಯಿ ಅವರ ನಿಧಾನಕ್ಕೆ ಸಂತಾಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಭಾರತ ಓರ್ವ ಶ್ರೇಷ್ಠ ಮಗನನ್ನು ಕಳೆದುಕೊಂಡಿದೆ ಎಂದಿದ್ದಾರೆ. 

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, "ವಾಜಪೇಯಿ ಅವರು ಲಕ್ಷಾಂತರ ಜನರಿಂದ ಪ್ರೀತಿ, ಗೌರವ ಗಳಿಸಿದ್ದರು ಎಂದು ಹೇಳಿದ್ದಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ತಡೆಯುವ ಶಕ್ತಿ ನೀಡಲಿ. ನಾವು ಅವರನ್ನು ಖಂಡಿತಾ ಮಿಸ್ ಮಾಡಿಕೊಳ್ಳುತ್ತೇವೆ" ಎಂದಿದ್ದಾರೆ.

ದೇಶಕಂಡ ಅತ್ಯುತ್ತಮ ನಾಯಕ, ಅಜಾತ ಶತ್ರು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಗುರುವಾರ ಸಂಜೆ 5.05ಕ್ಕೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಹೃದಯ, ಕಿಡ್ನಿ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ವಾಜಪೇಯಿ ಅವರನ್ನು ಕ ಜೂ.11ರಂದು ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಕಳೆದ 36 ಗಂಟೆಗಳಿಂದ ವಾಜಪೇಯಿ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ವಾಜಪೇಯಿ ಅವರಿಗೆ ಕೃತಕ ಉಸಿರಾಟ ವ್ಯವಸ್ಥೆಯಲ್ಲಿಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಂಜೆ ಮೃತಪಟ್ಟಿದ್ದಾರೆ.

Trending News