ಭೂಕಂಪ ಪೀಡಿತ ಟರ್ಕಿ ದೇಶದ ನೆರವಿಗೆ ಧಾವಿಸಿದ ಭಾರತ

 

Written by - Zee Kannada News Desk | Last Updated : Feb 7, 2023, 03:32 PM IST
  • ವಿ ಮುರಳೀಧರನ್ ಅವರು ಟರ್ಕಿಯ ರಾಯಭಾರ ಕಚೇರಿಗೆ ಭೇಟಿ ನೀಡಿ ಸಂತಾಪ ಸೂಚಿಸಿದರು.
  • ಪ್ರಧಾನಿ ನರೇಂದ್ರ ಮೋದಿಯವರ ಸಹಾನುಭೂತಿ ಮತ್ತು ಮಾನವೀಯ ಬೆಂಬಲವನ್ನೂ ಅವರು ತಿಳಿಸಿದರು
  • ಭಾರತವು ಟರ್ಕಿಗೆ ರಕ್ಷಣಾ ಮತ್ತು ವೈದ್ಯಕೀಯ ತಂಡಗಳನ್ನು ಕಳುಹಿಸಿದೆ
ಭೂಕಂಪ ಪೀಡಿತ ಟರ್ಕಿ ದೇಶದ ನೆರವಿಗೆ ಧಾವಿಸಿದ ಭಾರತ title=
Photo Courtsey: Twitter

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಮೂರು ಪ್ರಬಲ ಭೂಕಂಪದಿಂದ ತತ್ತರಿಸಿರುವ ಟರ್ಕಿ ದೇಶದ ನೆರವಿಗೆ ಭಾರತವು ಧಾವಿಸಿರುವ ಬೆನ್ನಲ್ಲೇ ಈಗ ಭಾರತಕ್ಕೆ ಧನ್ಯವಾದವನ್ನು ಅರ್ಪಿಸಿದೆ.

24 ಗಂಟೆಗಳಲ್ಲಿ ಟರ್ಕಿಯಲ್ಲಿ ಮೂರು ವಿನಾಶಕಾರಿ ಭೂಕಂಪಗಳು ಸಂಭವಿಸಿದ ನಂತರ ದೇಶಕ್ಕೆ ಹಣವನ್ನು ಒದಗಿಸಿದ ಉದಾರತೆಗಾಗಿ ಭಾರತವನ್ನು ದೋಸ್ತ್ ಎಂದು ಕರೆಯುತ್ತಾ, ಭಾರತಕ್ಕೆ ಟರ್ಕಿಯ ರಾಯಭಾರಿ ಫಿರತ್ ಸುನೆಲ್ ನವದೆಹಲಿಗೆ ಧನ್ಯವಾದ ಅರ್ಪಿಸಿದರು ಮತ್ತು ಅಗತ್ಯಕಾಲದಲ್ಲಿ ನೆರವಿಗೆ ಬಂದವನೇ ನಿಜವಾಗಿಯೂ ಸ್ನೇಹಿತ ಎಂದು ಹೇಳಿದರು.

ಇದನ್ನೂ ಓದಿ: ಕಾಯಿ ಕೀಳಲು ತೆಂಗಿನ ಮರವೇರಿದ ವ್ಯಕ್ತಿಗೆ ಹೃದಯಾಘಾತ ! 50 ಅಡಿ ಎತ್ತರದ ಮರದಲ್ಲೇ ಸಾವು

ಟ್ವಿಟರ್‌ನಲ್ಲಿ, ಶ್ರೀ ಸುನೆಲ್ ಅವರು ದೋಸ್ತ್ ಎಂಬುದು ಟರ್ಕಿಶ್ ಮತ್ತು ಹಿಂದಿಯಲ್ಲಿ ಸಾಮಾನ್ಯ ಪದವಾಗಿದೆ.ನಮ್ಮಲ್ಲಿ ಟರ್ಕಿಶ್ ಗಾದೆಯೊಂದು ಇದೆ, ಕಷ್ಟದ ಕಾಲದಲ್ಲಿ ನೆರವಾದವನೇ ನಿಜವಾದ ಸ್ನೇಹಿತ. ಈಗ ಭಾರತಕ್ಕೆ ತುಂಬಾ ಧನ್ಯವಾದಗಳು" ಎಂದು ಅವರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಹೇಳಿಕೆ; ‘ಕಮಲ’ ನಾಯಕರಲ್ಲಿ ತಲ್ಲಣ!

ಇದಕ್ಕೂ ಮುನ್ನ, ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು ಟರ್ಕಿಯ ರಾಯಭಾರ ಕಚೇರಿಗೆ ಭೇಟಿ ನೀಡಿ ಸಂತಾಪ ಸೂಚಿಸಿದರು.ಪ್ರಧಾನಿ ನರೇಂದ್ರ ಮೋದಿಯವರ ಸಹಾನುಭೂತಿ ಮತ್ತು ಮಾನವೀಯ ಬೆಂಬಲವನ್ನೂ ಅವರು ತಿಳಿಸಿದರು.ಭಾರತವು ಟರ್ಕಿಗೆ ರಕ್ಷಣಾ ಮತ್ತು ವೈದ್ಯಕೀಯ ತಂಡಗಳನ್ನು ಕಳುಹಿಸಿದೆ.

ಟರ್ಕಿ ಗಣರಾಜ್ಯದ ಸರ್ಕಾರದ ಸಮನ್ವಯದೊಂದಿಗೆ ಪರಿಹಾರ ಸಾಮಗ್ರಿಗಳೊಂದಿಗೆ ಎನ್‌ಡಿಆರ್‌ಎಫ್ ಮತ್ತು ವೈದ್ಯಕೀಯ ತಂಡಗಳ ಶೋಧ ಮತ್ತು ರಕ್ಷಣಾ ತಂಡಗಳನ್ನು ತಕ್ಷಣವೇ ರವಾನಿಸಲು ಸಭೆ ನಡೆಸಲಾಗಿದೆ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ವಿಶೇಷ ತರಬೇತಿ ಪಡೆದ ಶ್ವಾನ ದಳ ಮತ್ತು ಅಗತ್ಯ ಉಪಕರಣಗಳೊಂದಿಗೆ 100 ಸಿಬ್ಬಂದಿಯನ್ನು ಒಳಗೊಂಡ ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ (ಎನ್‌ಡಿಆರ್‌ಎಫ್) ಯ ಎರಡು ತಂಡಗಳು ಭೂಕಂಪ ಪೀಡಿತ ಪ್ರದೇಶಕ್ಕೆ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ತೆರಳಲು ಸಿದ್ಧವಾಗಿವೆ ಎಂದು ಪಿಎಂಒ ಹೇಳಿಕೆಯಲ್ಲಿ ತಿಳಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

 

Trending News