ನವದೆಹಲಿ: ಕೋಲ್ಕತ್ತಾದ ವೈದ್ಯರ ಮೇಲೆ ನಡೆದ ದಾಳಿಯನ್ನು ಪ್ರತಿಭಟಿಸಿ ಭಾರತೀಯ ವೈದ್ಯಕೀಯ ಸಂಘವು ಈಗ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಉದ್ದೇಶಿತ ಮುಷ್ಕರ ಜೂನ್ 17 ರ ಸೋಮವಾರ ನಡೆಯಲಿದೆ.
ಏಮ್ಸ್ ನಲ್ಲಿ ವೈದ್ಯರು ಸೇವೆ ನಿಲ್ಲಿಸಿದ ಬಳಿಕ ರಾಷ್ಟ್ರೀಯ ರಾಜಧಾನಿಯಲ್ಲಿ ಸಾವಿರಾರು ರೋಗಿಗಳಿಗೆ ತೊಂದರೆ ಅನುಭವಿಸುವಂತಾಗಿತ್ತು. ಇನ್ನೊಂದೆಡೆ ಮಹಾರಾಷ್ಟ್ರ ಅಸೋಸಿಯೇಷನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ (MARD) ಸಹ ಕೋಲ್ಕತಾದಲ್ಲಿ ತಮ್ಮ ಸಹವರ್ತಿಗಳ ಬೆಂಬಲಕ್ಕಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.
ಕೋಲ್ಕತ್ತಾದಲ್ಲಿ ವೈದ್ಯರ ಮೇಲಿನ ದೌರ್ಜನ್ಯವನ್ನು ಖಂಡಿಸಿದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ರೋಗಿಗಳು ಮತ್ತು ಅವರ ಪರಿಚಾರಕರು ಸಂಯಮದಿಂದ ವರ್ತಿಸುವಂತೆ ಒತ್ತಾಯಿಸಿದರು. ವೈದ್ಯರ ಸುರಕ್ಷತೆಯ ವಿಷಯದ ಬಗ್ಗೆ ಎಲ್ಲ ಮುಖ್ಯಮಂತ್ರಿಗಳೊಂದಿಗೆ ಅವರು ಚರ್ಚಿಸಲಾಗುವುದು ಮತ್ತು ಜನರಿಗೆ ಅವಶ್ಯಕವಾದ ಸೇವೆಗಳನ್ನು ಅಡ್ಡಿಪಡಿಸುವುದಿಲ್ಲ ಎಂದು ವೈದ್ಯರು ಕೇಳಿಕೊಂಡಿರುವುದಾಗಿ ಹರ್ಷವರ್ಧನ್ ಹೇಳಿದರು.
"ಇಂದು ನಾನು ಮಮತಾ ಬ್ಯಾನರ್ಜಿಜಿಗೆ ಪತ್ರ ಬರೆಯುತ್ತೇನೆ ಮತ್ತು ಈ ವಿಷಯದಲ್ಲಿ ಅವರೊಂದಿಗೆ ಮಾತನಾಡಲು ಪ್ರಯತ್ನಿಸುತ್ತೇನೆ" ಎಂದು ಆರೋಗ್ಯ ಸಚಿವ ಡಾ. ಹರ್ಷವರ್ಧನ್ " ಹೇಳಿದರು. ಮಂಗಳವಾರ ಕೊಲ್ಕತ್ತಾದ ಎನ್ಆರ್ಎಸ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇಬ್ಬರು ಸಹೋದ್ಯೋಗಿಗಳು ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ಕೊಲ್ಕತ್ತಾದ ಜೂನಿಯರ್ ವೈದ್ಯರು ಮುಷ್ಕರ ಹಮ್ಮಿಕೊಂಡಿದ್ದಾರೆ.