ನವದೆಹಲಿ: ಫೆಬ್ರವರಿ 1 ರಂದು ಕೇಂದ್ರ ಸರ್ಕಾರ ತನ್ನ ಮಧ್ಯಂತರ ಬಜೆಟ್ ಮಂಡಿಸಲಿದೆ ಎಂದು ಮೂಲಗಳು ತಿಳಿಸಿವೆ.
ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31 ರಿಂದ ಫೆಬ್ರವರಿ 13 ರವರೆಗೆ ನಡೆಯಲಿದೆ. ಈ ಅವಧಿಯಲ್ಲಿ ಫೆಬ್ರವರಿ 1 ರಂದು ಮಧ್ಯಂತರ ಬಜೆಟ್ ಮಂಡನೆಯಾಗಲಿದೆ ಎಂದು ಮೂಲಗಳು ತಿಳಿಸಿವೆ. ಸಂಸದೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ(ಸಿಸಿಪಿಎ)ಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
Sources: Interim budget to be presented on February 1 during the budget session of the parliament. The budget session of the Parliament to be held from 31st January to 13th February. The decision was taken in the meeting of the Cabinet Committee on Parliamentary Affairs (CCPA) pic.twitter.com/yVhacU9TCs
— ANI (@ANI) January 9, 2019
ಈ ಮಧ್ಯೆ ಚಳಿಗಾಲದ ಅಧಿವೇಶವನನ್ನು ಎಲ್ಲರೊಂದಿಗೆ ಚರ್ಚಿಸದೆಯೇ ವಿಸ್ತರಣೆ ಮಾಡಿರುವ ಬಗ್ಗೆ ಕಾಂಗ್ರೆಸ್, ಟಿಎಂಸಿ ಹಾಗೂ ಎಐಎಡಿಎಂಕೆ ಸದಸ್ಯರು ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ರಾಜ್ಯಸಭೆ ಉಪಾಧ್ಯಕ್ಷ ಹರಿವಂಶ್ ಅವರು, ನನ್ನಿಂದಾದ ತಪ್ಪಿನಿಂದ ಮಾಹಿತಿ ಎಲ್ಲರಿಗೂ ಪ್ರಸಾರವಾಗಿಲ್ಲ ಎಂದು ಒಪ್ಪಿಕೊಂಡಿದ್ದಾರೆ.